ETV Bharat / state

ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಮಾಜಿ ಕಾರ್ಪೊರೇಟರ್​ಗಳು ಕಾಂಗ್ರೆಸ್ ಸೇರ್ಪಡೆ

ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್ ಅಶೋಕ್ ಆಪ್ತರು ಸೇರಿದಂತೆ ಹಲವರು ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

Former BJP corporators of Padmanabhanagar constituency join Congress
ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಮಾಜಿ ಕಾರ್ಪೊರೇಟರ್​ಗಳು ಕಾಂಗ್ರೆಸ್ ಸೇರ್ಪಡೆ
author img

By ETV Bharat Karnataka Team

Published : Sep 15, 2023, 1:43 PM IST

ಬೆಂಗಳೂರು: ಪದ್ಮನಾಭ ನಗರ ಕ್ಷೇತ್ರದ ಹಲವು ಬಿಜೆಪಿ ಹಾಗೂ ಜೆಡಿಎಸ್ ಮಾಜಿ ಕಾರ್ಪೊರೇಟರ್​ಗಳು, ಮುಖಂಡರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಲೋಕಸಭೆ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಆಪರೇಷನ್ ಮುಂದುವರೆಸಿದ್ದು, ಮಾಜಿ ಸಚಿವ ಹಾಗೂ ಪದ್ಮನಾಭನಗರ ಕ್ಷೇತ್ರದ ಶಾಸಕ ಆರ್. ಅಶೋಕ್ ಆಪ್ತರಿಗೆ ಡಿಕೆ ಬ್ರದರ್ಸ್ ಗಾಳ ಹಾಕುವಲ್ಲಿ ಯಶಸ್ವಿ ಆಗಿದ್ದಾರೆ.

ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಮುಖಂಡರಾದ ಮಾಜಿ ಉಪಮೇಯರ್ ಎಲ್ ಶ್ರೀನಿವಾಸ್, ಪಾಲಿಕೆ ಮಾಜಿ ಸದಸ್ಯರಾದ ಶೋಭಾ ಅಂಜಿನಪ್ಪ, ಎಚ್ ನಾರಾಯಣ್, ಎಚ್ ಸುರೇಶ್, ವೆಂಕಟಸ್ವಾಮಿ ನಾಯ್ಡು, ಎಲ್ ಗೋವಿಂದರಾಜು, ಬಾಲಕೃಷ್ಣ, ಸುಗುಣ ಬಾಲಕೃಷ್ಣ, ನರಸಿಂಹ ನಾಯಕ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಅಂಜಿನಪ್ಪ, ಜೆಡಿಎಸ್ ಮುಖಂಡ ಪ್ರಸಾದ್ ಬಾಬು (ಕಬಡ್ಡಿ ಬಾಬು) ಚಿತ್ರ ನಟ ರವಿಕಿರಣ್, ಅಕ್ಬರ್ ಅಲಿಖಾನ್ ಮತ್ತಿತರ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾದರು.

Former BJP corporators of Padmanabhanagar constituency join Congress
ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಮಾಜಿ ಕಾರ್ಪೊರೇಟರ್​ಗಳು ಕಾಂಗ್ರೆಸ್ ಸೇರ್ಪಡೆ

ಪದ್ಮನಾಭನಗರದಲ್ಲಿ ಮುಂದೆ ಕೈ ಅಭ್ಯರ್ಥಿ ಗೆಲ್ಲಲಿದ್ದಾರೆ: ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಮಾತನಾಡಿ, 2028ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಗೆ ಪೀಠಿಕೆ ಇದಾಗಿದೆ. ಪದ್ಮನಾಭ ನಗರದಲ್ಲಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಲಿದ್ದಾರೆ ಎಂದು‌ ಭವಿಷ್ಯ ನುಡಿದರು.

ಬಿಜೆಪಿ ಪರಿಸ್ಥಿತಿ ಏನಾಗಿದೆ ಎಂದು ನಾನು ಹೇಳಲು ಹೋಗಲ್ಲ. 120 ದಿನ ಆದರೂ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಲು ಆಗಿಲ್ಲ. ಇವಾಗ ಮತ್ತೊಂದು ಪಕ್ಷದ ಜೊತೆಗೆ ಹೋಗುತ್ತಿದ್ದಾರೆ. ಮೈತ್ರಿ ಸರ್ಕಾರ ಪತನ ಮಾಡಿದವರ ಜೊತೆಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಧರಣಿ ಮಾಡುತ್ತಿದ್ದಾರೆ. ಸರ್ಕಾರ ಪತನ ಮಾಡಿದವರ ಜೊತೆಗೆ ನಂಟಸ್ತನ ಏಕೆ ಎಂದು ಸ್ವತಃ ಜೆಡಿಎಸ್ ನಾಯಕರೇ ಹೇಳುತ್ತಿದ್ದಾರೆ. ಅವರವರ ಅನುಕೂಲಕ್ಕಾಗಿ ಹೀಗೆ ಮೈತ್ರಿ ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ‌ತತ್ವ ಸಿದ್ಧಾಂತ ನಂಬಿಕೆ ಇಟ್ಟವರಿಗೆ ಸ್ವಾಗತವನ್ನು ಕಾಂಗ್ರೆಸ್ ಬಯಸುತ್ತದೆ. ಹಳಬರು, ಹೊಸಬರು ಬೇಧವಿಲ್ಲದೆ ಪಕ್ಷ ಸಂಘಟನೆ ಮಾಡಬೇಕು. ಬಿಜೆಪಿ ಮುಖಂಡರ ಪಕ್ಷ ಸೇರ್ಪಡೆ ಕಾಂಗ್ರೆಸ್​ಗೆ ಬೆಂಗಳೂರು ದಕ್ಷಿಣದಲ್ಲಿ ಶಕ್ತಿ ಸಿಕ್ಕಂತಾಗಿದೆ ಎಂದರು.

ಇದನ್ನೂ ಓದಿ: ಆಪರೇಷನ್ ಹಸ್ತ ಮಾಡುವವರು ಮತ್ತು ಹೋಗುವವರು ಮೂರ್ಖರು: ಶಾಸಕ ರಮೇಶ್ ಜಾರಕಿಹೊಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.