ETV Bharat / state

ಮೃದುಭಾಷಿ, ಹಾಸ್ಯಪ್ರಿಯ, ದಲಿತ ಪ್ರಜ್ಞೆ, ಕ್ರಾಂತಿ ಗೀತೆಯ ಹರಿಕಾರ ಸಿದ್ದಲಿಂಗಯ್ಯಗೆ ಮರಣೋತ್ತರ ಪದ್ಮಶ್ರೀ - ಪದ್ಮಶ್ರಿ ಪ್ರಶಸ್ತಿ ಪಡೆದ ಸಿದ್ದಲಿಂಗಯ್ಯ ಅವರ ಬಗ್ಗೆ ಮಾಹಿತಿ

ಸಿದ್ದಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲೂಕಿನ ಮಂಚನ ಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು. ಇವರು ನೀಡಿದ ಸಾಹಿತ್ಯ ಸೇವೆಗೆ ಈ ಗೌರವ ಸಂದಿದೆ.

ಸಿದ್ದಲಿಂಗಯ್ಯಗೆ ಮರಣೋತ್ತರ ಪದ್ಮಶ್ರಿ
ಸಿದ್ದಲಿಂಗಯ್ಯಗೆ ಮರಣೋತ್ತರ ಪದ್ಮಶ್ರಿ
author img

By

Published : Jan 25, 2022, 10:33 PM IST

ಬೆಂಗಳೂರು: ದಲಿತ ಕವಿ ಎಂದೇ ಪ್ರಸಿದ್ಧರಾಗಿದ್ದ ಸಾಹಿತಿ ಡಾ. ಸಿದ್ದಲಿಂಗಯ್ಯ ಸೇರಿದಂತೆ ರಾಜ್ಯದ ಐವರಿಗೆ ಕೇಂದ್ರ ಸರ್ಕಾರ ಪದ್ಮಶ್ರಿ ಪ್ರಶಸ್ತಿ ಘೋಷಣೆ ಮಾಡಿದೆ. ಸಿದ್ದಲಿಂಗಯ್ಯ (ಸಾಹಿತ್ಯ) ಅವರಿಗೆ ಮರಣೋತ್ತರವಾಗಿ ಪದ್ಮ ಪ್ರಶಸ್ತಿ ಘೋಷಿಸಲಾಗಿದೆ. ದಲಿತ ಕವಿಯಾಗಿ ಅವರ ಕೊಡುಗೆ ಅಪಾರವಾಗಿದ್ದು, ಈ ಕಾರಣಕ್ಕೆ ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಶಿಫಾರಸು ಕಳಿಸಿ, ಪದ್ಮ ಪ್ರಶಸ್ತಿ ನೀಡುವಂತೆ ಒತ್ತಡ ಹೇರುವ ಕಾರ್ಯ ಆಗಬೇಕೆಂದು ಪ್ರತಿಪಕ್ಷ ಹಾಗೂ ಸಾಹಿತ್ಯ ವಲಯದಿಂದ ಒತ್ತಡ ಮೂಡಿಬಂದಿತ್ತು.

ಸಿದ್ದಲಿಂಗಯ್ಯಗೆ ಮರಣೋತ್ತರ ಪದ್ಮಶ್ರಿ
ಸಿದ್ದಲಿಂಗಯ್ಯಗೆ ಮರಣೋತ್ತರ ಪದ್ಮಶ್ರಿ

ಸಿದ್ದಲಿಂಗಯ್ಯ ಒಬ್ಬ ಕವಿ, ಸಾಹಿತಿ, ಮೃದು ಸ್ವಭಾವದ ರಾಜಕಾರಣಿ ಆಗಿದ್ದರು. ದಲಿತ ಹೋರಾಟಗಾರರಾಗಿ, ಕ್ರಾಂತಿಕವಿಯಾಗಿ ಹಾಗೂ ಹಾಸ್ಯಭರಿತ ಮಾತುಗಳಿಂದ ವಿಧಾನ ಪರಿಷತ್​ನ್ನು ನಗೆಗಡಲಲ್ಲಿ ತೇಲಿಸುತ್ತಿದ್ದ ಮಾತುಗಾರರಾಗಿ ಜನ ಮಾನಸದಲ್ಲಿ ಪರಿಚಿತರಾಗಿದ್ದರು.

ಹಸಿವಿನಿಂದ ಸತ್ತೋರು ಸೈಜುಗಲ್ಲು ಹೊತ್ತೋರು... ಸಿದ್ದಲಿಂಗಯ್ಯ 1975 ರಲ್ಲಿ ಹೊಲೆ ಮಾದಿಗರ ಹಾಡು ಬರೆದರು. 1979ರಲ್ಲಿ ಸಾವಿರಾರು ನದಿಗಳು ಕಾವ್ಯವನ್ನು ಕರ್ನಾಟಕಕ್ಕೆ ನೀಡಿದರು. “ಹಸಿವಿನಿಂದ ಸತ್ತೋರು ಸೈಜುಗಲ್ಲು ಹೊತ್ತವರು, ವದೆಸಿಕೊಂಡು ವರಗಿದವರು ನನ್ನ ಜನಗಳು. ಹೊಲವನುತ್ತು ಬಿತ್ತೋರು ಬೆಳೆಯ ಕುಯ್ದು ಬೆವರೋರು, ಬಿಸಿಲಿನಲ್ಲಿ ಬೇಯೋರು ನನ್ನ ಜನಗಳು“,ನಿನ್ನೆ ದಿನ ನನ್ನ ಜನ ಬೆಟ್ಟದಂತೆ ಬಂದರು ಕಪ್ಪು ಮುಖದ ಬೆಳ್ಳಿಗಡ್ಡ ಉರಿಯುತಿರುವ ಕಣ್ಣುಗಳು. ಹಗಲ ರಾತ್ರಿಗಳನು ಸೀಳಿ ನಿದ್ದೆಯನ್ನು ಒದ್ದರು. ಕ್ರಾಂತಿಯ ಬಿರುಗಾಳಿಯಲ್ಲಿ ಕೈ ಬೀಸಿದ ನನ್ನ ಜನ, ಛಡಿಯ ಏಟು ಹೊಡೆದವರ, ಕುತ್ತಿಗೆಗಳ ಹಿಡಿದರು. ಪೊಲೀಸರ ದೊಣ್ಣೆಗಳು ಏಜೆಂಟರ ಕತ್ತಿಗಳು, ವೇದಶಾಸ್ತ್ರ ಪುರಾಣ ಬಂದೂಕದ ಗುಡಾಣ, ತರಗೆಲೆ ಕಸಕಡ್ಡಿಯಾಗಿ ತೇಲಿ ತೇಲಿ ಹರಿದವು ಹೋರಾಟದ ಸಾಗರಕ್ಕೆ ಸಾವಿರಾರು ನದಿಗಳು..’ ಈ ರೀತಿ ಇವರ ಕವಿತೆಯನ್ನು ದಲಿತರ ಹೋರಾಟಕ್ಕೆ ಬಳಸಿದವರು.

ಸಿದ್ದಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲೂಕಿನ ಮಂಚನ ಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು

ಯಾರಿಗೆ ಬಂತು, ಎಲ್ಲಿಗೆ ಬಂತು, ನಾಲ್ವತ್ತೇಳರ ಸ್ವಾತಂತ್ರ್ಯ ಕವಿತೆಯಂತೂ ಹೋರಾಟಗಾರರ ನಾಲಿಗೆಯ ಶಕ್ತಿಯಾಗಿತ್ತು. ಇಂದಿಗೂ ದಲಿತ ಚಳುವಳಿ, ಹೋರಾಟ, ಪ್ರತಿಭಟನೆಯ ಆರಂಭದಲ್ಲಿ ಕ್ರಾಂತಿಗೀತೆಯಾಗಿ ಇದು ಮೊಳಗುತ್ತದೆ. 1975 ರಿಂದಾಚೆಗೆ ದಲಿತರು ಹೊಸ ಪ್ರಜ್ಞಾವಂತ ಜನಾಂಗವಾಗಿ ಕರ್ನಾಟಕದಲ್ಲಿ ಸಿದ್ಧಲಿಂಗಯ್ಯನವರ ಕವಿತೆಗಳ ಅನುಸರಣೆ ಮಾಡಿದ್ದಾರೆ.

ಹುಟ್ಟು, ಬೆಳವಣಿಗೆ: ಸಿದ್ದಲಿಂಗಯ್ಯನವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ಮಾಗಡಿ ತಾಲೂಕಿನ ಮಂಚನ ಬೆಲೆ ಗ್ರಾಮದಲ್ಲಿ 1954ರಲ್ಲಿ ಜನಿಸಿದರು. ತಂದೆ ದೇವಯ್ಯ, ತಾಯಿ ವೆಂಕಮ್ಮ. ಮಲ್ಲೇಶ್ವರಂನ ಸರ್ಕಾರಿ ಪ್ರೌಢಶಾಲೆ ಇವರ ವಿದ್ಯಾಕೇಂದ್ರವಾಗಿತ್ತು. ಆ ವೇಳೆಗಾಗಲೇ ಕವಿತೆ ಬರೆವ ಅಭ್ಯಾಸ ಇವರಿಗಿತ್ತು. ವಿದ್ಯಾರ್ಥಿ ದೆಸೆಯಲ್ಲಿಯೇ ಇವರು ಉತ್ತಮ ಭಾಷಣಕಾರರಾಗಿದ್ದರು. ಅಂಬೇಡ್ಕರ್, ಪೆರಿಯಾರ್, ವಸುದೇವಭೂಪಾಲ, ಲೋಹಿಯಾ ಮುಂತಾದವರ ವಿಚಾರಧಾರೆಗಳಿಂದ ಆಕರ್ಷಿತರಾಗಿದ್ದರು.

ಮೃಧುಭಾಷಿ, ಹಾಸ್ಯಪ್ರಿಯ, ದಲಿತ ಪ್ರಜ್ಞೆ, ಕ್ರಾಂತಿ ಗೀತೆಯ ಹರಿಕಾರ

ಸೇವೆ: ವೃತ್ತಿಯಲ್ಲಿ ಅಧ್ಯಾಪಕ, ಪ್ರಾಧ್ಯಾಪಕ, ಕವಿ, ಹೋರಾಟಗಾರರಾದ ಇವರು ಬಿ.ಕೃಷ್ಣಪ್ಪ ಅವರೊಂದಿಗೆ ದಲಿತ ಸಂಘರ್ಷ ಸಮಿತಿಯ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದರು. 1988 ರಲ್ಲಿ ತಮ್ಮ 34 ನೇ ವಯಸ್ಸಿನಲ್ಲಿ ಕರ್ನಾಟಕ ವಿಧಾನಪರಿಷತ್ ಸದಸ್ಯರಾದರು ಮತ್ತು 1995 ರಿಂದ 2001 ರ ಅವಧಿಗೆ ಜನತಾ ಪರಿವಾರದಿಂದ ವಿಧಾನ ಪರಿಷತ್​ಗೆ ನಾಮನಿರ್ದೇಶನಗೊಂಡಿದ್ದರು.

2006 ರಲ್ಲಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದ ಅವರು 2008 ರವರೆಗೆ ಕ್ಯಾಬಿನೆಟ್ ಶ್ರೇಣಿಯನ್ನು ಹೊಂದಿದ್ದರು. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿರುವ ಅವರು, ಹಂಪಿಯ ಕನ್ನಡ ವಿಶ್ವವಿದ್ಯಾಲಯದ ವಿಶ್ವವಿದ್ಯಾಲಯ ಸಿಂಡಿಕೇಟ್ ಸದಸ್ಯರಾಗಿಯೂ ತಮ್ಮ ಛಾಪು ಮೂಡಿಸಿದ್ದರು.

ಹಸಿವಿನಿಂದ ಸತ್ತೋರು ಸೈಜುಗಲ್ಲು ಹೊತ್ತೋರು ಎಂದು ದಲಿತರ ನೋವುಗಳನ್ನು ವರ್ಣಿಸಿದವರು

ಅವರನ್ನು ದಲಿತ ಚಳವಳಿಯ ಸಂಕೇತ ಮತ್ತು ಪ್ರಮುಖ ಸಾರ್ವಜನಿಕ ಬುದ್ಧಿಜೀವಿ ಮತ್ತು ಕನ್ನಡ ಕವಿ ಎಂದು ಗುರುತಿಸಲಾಗಿದೆ.

ಕೃತಿಗಳು: ಪಿ ಎಚ್ ಡಿ ಸಂಶೋಧನಾ ಪ್ರಬಂಧ, ಗ್ರಾಮ ದೇವತೆಗಳು, ಕವನ ಸಂಕಲನಗಳು- ಹೊಲೆ ಮಾದಿಗರ ಹಾಡು, ಮೆರವಣಿಗೆ, ಸಾವಿರಾರು ನದಿಗಳು, ಕಪ್ಪು ಕಾಡಿನ ಹಾಡು, ಆಯ್ದಕವಿತೆಗಳು, ಅಲ್ಲೆಕುಂತವರೆ, ನನ್ನ ಜನಗಳು ಮತ್ತು ಇತರ ಕವಿತೆಗಳು, ಸಮಕಾಲೀನ ಕನ್ನಡ ಕವಿತೆ ಭಾಗ-3,4(ಸಂಪಾದನೆ ಇತರರೊಂದಿಗೆ), ವಿಮರ್ಶನಾ ಕೃತಿಗಳು- ಹಕ್ಕಿ ನೋಟ, ರಸಗಳಿಗೆಗಳು, ಎಡಬಲ, ಉರಿಕಂಡಾಯ, ಲೇಖನಗಳ ಸಂಕಲನ- ಅವತಾರಗಳು, ಸದನದಲ್ಲಿ ಸಿದ್ದಲಿಂಗಯ್ಯ ಭಾಗ -1, ಸದನದಲ್ಲಿ ಸಿದ್ದಲಿಂಗಯ್ಯ ಭಾಗ -2, ಜನಸಂಸ್ಕೃತಿ, ನಾಟಕಗಳು- ಏಕಲವ್ಯ, ನೆಲಸಮ, ಪಂಚಮ, ಆತ್ಮಕಥೆ- ಊರುಕೇರಿ- ಭಾಗ-1, ಊರುಕೇರಿ- ಭಾಗ-2. ಇವರ ಸಾಧನೆಗಳು.

ವೃತ್ತಿಯಲ್ಲಿ ಅಧ್ಯಾಪಕ, ಪ್ರಾಧ್ಯಾಪಕ, ಕವಿ, ಹೋರಾಟಗಾರರಾಗಿ ಸೇವೆ

ಗೌರವ, ಪ್ರಶಸ್ತಿಗಳು: ಉತ್ತಮ ಚಲನಚಿತ್ರಗೀತ ರಚನೆಗಾಗಿ ಕರ್ನಾಟಕ ಸರ್ಕಾರ ಪ್ರಶಸ್ತಿ-1984, ರಾಜ್ಯೋತ್ಸವ ಪ್ರಶಸ್ತಿ -ಕರ್ನಾಟಕ ಸರ್ಕಾರ-1986, ಡಾ.ಅಂಬೇಡ್ಕರ್ ಶತಮಾನೋತ್ಸವ ವಿಶೇಷ ಪ್ರಶಸ್ತಿ -1992, ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ -1996, ಜಾನಪದ ತಜ್ಞ ಪ್ರಶಸ್ತಿ -2001, 2 ಬಾರಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸದಸ್ಯ. ಸಂದೇಶ್ ಪ್ರಶಸ್ತಿ -2001, ಡಾ.ಅಂಬೇಡ್ಕರ್ ಪ್ರಶಸ್ತಿ -2002, ಸತ್ಯಕಾಮ ಪ್ರತಿಷ್ಠಾನ ಪ್ರಶಸ್ತಿ -2002, ಬಾಬುಜಗಜೀವನರಾಮ್ ಪ್ರಶಸ್ತಿ -2005, ನಾಡೋಜ ಪ್ರಶಸ್ತಿ -2007, ಪ್ರೆಸಿಡೆನ್ಸಿ ಇನ್ಷಿಟ್ಯೂಷನ್ ಪ್ರಶಸ್ತಿ -2012, ಆಳ್ವಾಸ್ ನುಡಿಸಿರಿ ಪ್ರಶಸ್ತಿ -2012, ಶ್ರವಣಬೆಳಗೊಳದಲ್ಲಿ ನಡೆದ 81ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರು. ನೃಪತುಂಗ ಪ್ರಶಸ್ತಿ -2018 ಹಾಗೂ ಪಂಪ ಪ್ರಶಸ್ತಿ - 2019.

2021ರ ಜೂ. 11 ರಂದು ತಮ್ಮ 66 ನೇ ವಯಸ್ಸಿನಲ್ಲಿ ಕೊರೊನಾ ಮಹಾಮಾರಿಯ ಆಘಾತದಿಂದ ಚೇತರಿಸಿಕೊಳ್ಳಲಾಗದೇ ಇಹಲೋಕ ತ್ಯಜಿಸಿದರು.

ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.