ETV Bharat / state

ಪೇಸ್​​​ಬುಕ್​​ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ವಿಡಿಯೋ ಪೋಸ್ಟ್ ಮಾಡಿದ್ದ ವ್ಯಕ್ತಿ ವಿರುದ್ಧ ಪ್ರಕರಣ ರದ್ದು ಮಾಡಿದ ಹೈಕೋರ್ಟ್ - ETV Bharath Kannada news

ರಾಯಚೂರಿನ ಮಾನ್ವಿಯ ಭಾಷಾ ಎಂಬುವವರು ಪಾಕಿಸ್ತಾನ ಜಿಂದಾಬಾದ್​ ಎಂಬ ಪೋಸ್ಟ್​ ಮಾಡಿದ್ದಕ್ಕಾಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಕೇಸ್​ ಸಂಬಂಧ ತೀರ್ಪು ನೀಡಿದ ಕೋರ್ಟ್ ​ಪ್ರಕರಣ ರದ್ದು ಮಾಡಿದೆ.

Etv Bharatpakistan-zindabad-video-post-on-facebook-high-court-quashed-the-case
Etv Bharatಪೇಸ್ ಬುಕ್ನಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ವಿಡಿಯೋ ಪೋಸ್ಟ್ ಮಾಡಿದ್ದ ವ್ಯಕ್ತಿ ವಿರುದ್ಧ ಪ್ರಕರಣ ರದ್ದು ಮಾಡಿದ ಹೈಕೋರ್ಟ್
author img

By

Published : Jan 27, 2023, 10:41 PM IST

ಬೆಂಗಳೂರು: ಸಾಮಾಜಿಕ ಜಾಲಾತಾಣ ಪೇಸ್​​​​ಬುಕ್​​​ ಖಾತೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂಬ ಸಂದೇಶವುಳ್ಳ ದೃಶ್ಯ ಪೋಸ್ಟ್ ಮಾಡಿದ್ದ ರಾಯಚೂರಿನ ವ್ಯಕ್ತಿಯೊಬ್ಬರ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ರಾಯಚೂರು ಜಿಲ್ಲೆಯ ಮಾನ್ವಿಯ ಕರ್ನಾಟಕ ಹೌಸಿಂಗ್ ಬೋರ್ಡ್ ಕಾಲೋನಿಯ ನಿವಾಸಿ ಕೆ.ಎಂ.ಭಾಷಾ ತನ್ನ ವಿರುದ್ಧದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ.

ಐಪಿಸಿ ಸೆಕ್ಷನ್ 505 ರಡಿ ದಾಖಲಾಗಿದ್ದ ಪ್ರಕರಣದಲ್ಲಿ ಮ್ಯಾಜಿಸ್ಟ್ರೇಟ್ ಕಾಗ್ನಿಜೆನ್ಸ್​ ತೆಗೆದುಕೊಳ್ಳುವುದಕ್ಕೂ ಮುನ್ನ ಅಪರಾಧ ದಂಡ ಸಂಹಿತೆ ಸೆಕ್ಷನ್ 196(1)(ಎ) ಅಡಿ ಪೂರ್ವಾನುಮತಿ ಪಡೆಯಬೇಕು ಎಂಬ ನಿಯಮವಿದೆ. ಆದರೆ, ತನಿಖಾಧಿಕಾರಿಗಳು ಈ ನಿಯಮವನ್ನು ಪಾಲಿಸಿಲ್ಲ. ಅಲ್ಲದೆ, ಭಾರತೀಯ ದಂಡ ಸಂಹಿತೆ ಸೆಕ್ಷನ್ 505ರಡಿ ಕಾಗ್ನಿಜೆನ್ಸ್ ತೆಗೆದುಕೊಂಡು ವಿಚಾರಣೆ ಮುಂದುವರಿಸಿದ್ದ ಮತ್ತು ಆರೋಪಪಟ್ಟಿ ಸಲ್ಲಿಸಿದ್ದನ್ನು ರದ್ದುಗೊಳಿಸಲಾಗುವುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ವಿವರಿಸಿದೆ.

ಜೊತೆಗೆ, ನಿಯಮಾವಳಿ ಪ್ರಕಾರ ಅಂತಹ ಪೂರ್ವಾನುಮತಿ ಪಡೆಯುವ ಮುನ್ನ ಸಿಆರ್‌ಪಿಸಿ ಸೆಕ್ಷನ್ 196(3) ಅಡಿ ಸೂಚಿಸಲಾಗಿರುವ ಸಕ್ಷಮ ಪ್ರಕಾರದ ವ್ಯಕ್ತಿ ಸೆಕ್ಷನ್ 505ರಡಿ ಹೊರಿಸಿರುವ ಆರೋಪಗಳ ಬಗ್ಗೆ ಪ್ರಾಥಮಿಕ ತನಿಖೆ ನಡೆಸಬೇಕಿತ್ತು. ಆದನ್ನು ಮಾಡಿಲ್ಲ ಎಂದು ಹೇಳಿರುವ ನ್ಯಾಯಪೀಠ, ತನಿಖಾ ಸಂಸ್ಥೆ ಕಾನೂನು ಪ್ರಕಾರ ಹೊಸದಾಗಿ ಆರೋಪದ ಬಗ್ಗೆ ಸಿಆರ್‌ಪಿಸಿ ಸೆಕ್ಷನ್ 196 ಅನ್ವಯ ತನಿಖೆ ನಡೆಸಬಹುದು, ಅದಕ್ಕೆ ವಿಚಾರಣಾ ನ್ಯಾಯಾಲಯಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣ ಸಂಬಂಧ ಹೊಸದಾಗಿ ನಡೆಸುವ ತನಿಖೆಯಲ್ಲಿ ಆರೋಪಗಳನ್ನು ಪುಷ್ಠೀಕರಿಸುವ ಸಾಕಷ್ಟು ದಾಖಲೆಗಳು ದೊರತೆರೆ, ತನಿಖಾ ಸಂಸ್ಥೆ ಕಾನೂನು ಪ್ರಕಾರ ಅಗತ್ಯ ರೀತಿಯಲ್ಲಿ ಆರೋಪ ಪಟ್ಟಿ ಸಲ್ಲಿಸಲು ಮತ್ತು ಕಾನೂನು ಪ್ರಕ್ರಿಯೆ ಮುಂದುವರಿಸಲು ಎಲ್ಲ ರೀತಿಯ ಸ್ವಾತಂತ್ರ್ಯ ಹೊಂದಿದೆ ಎಂದೂ ನ್ಯಾಯಪೀಠ ಹೇಳಿದೆ.

ಪ್ರಕರಣದದ ಹಿನ್ನೆಲೆ ಏನು?: ಅರ್ಜಿದಾರ ಬಾಷಾ ಅಕ್ಟೋಬರ್ 2020ರಲ್ಲಿ ತಮ್ಮ ಫೇಸ್​​ಬುಕ್ ಪುಟದಲ್ಲಿ ಪಾಕಿಸ್ತಾನದ ಯೋಧನೊಬ್ಬ ಮಹಿಳೆಯೊಂದಿಗೆ ಮಾತನಾಡುತ್ತಾ ‘ಹರ್ ದಿಲ್ ಕಾ ಆವಾಜ್ ಪಾಕಿಸ್ತಾನ ಜಿಂದಾಬಾದ್’ ಎಂದು ಹೇಳುವ ದೃಶ್ಯಗಳನ್ನು ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ಹಂಚಿಕೊಂಡಿದ್ದರು. ಜೊತೆಗೆ ಅದನ್ನು ಇತರ ಗೆಳೆಯರಿಗೆ ಶೇರ್ ಮಾಡಿದ್ದರು. ಆ ಕುರಿತು ಮಾಹಿತಿ ಸ್ವೀಕರಿಸಿದ ಮಾನ್ವಿ ಪೊಲೀಸ್ ಇನ್​ಸ್ಪೆಕ್ಟರ್​ ಆರೋಪಿಯನ್ನು ಬಂಧಿಸಿ ತಹಸೀಲ್ದಾರ್ ಕಚೇರಿಗೆ ಹಾಜರು ಪಡಿಸಿದರು. ಅಲ್ಲಿದ್ದ ವ್ಯಕ್ತಿಯನ್ನು ವಿಚಾರಣೆ ನಡೆಸಿದರು. ಆತ ತನ್ನ ಹೆಸರು ಭಾಷಾ ಎಂದು ಹೇಳಿ ಫೇಸ್ ಬುಕ್​ನಲ್ಲಿ ಪಾಕಿಸ್ತಾನ ಜಿಂದಾಬಾದ್ ಪೋಸ್ಟ್ ಹಂಚಿಕೊಂಡಿರುವುದನ್ನು ಒಪ್ಪಿಕೊಂಡಿದ್ದನು.

ನಂತರ ಪೊಲೀಸರು, ಇಂತಹ ಪೋಸ್ಟ್ ಮೂಲಕ ದೇಶದ ಯೋಧರಿಗೆ ಅಗೌರವ ತೋರಲಾಗುತ್ತಿದೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೇ, ಇದರಿಂದ ಸಮಾಜದಲ್ಲಿನ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಆಗುತ್ತದೆ ಎಂಬುದಾಗಿ ಹೇಳಿ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ’’ದೇವೇಗೌಡರು ಪ್ರಧಾನಿಯಾಗಿ ಜನರ ಮನ ಗೆಲ್ಲಲಿಲ್ಲ‘‘.. ಡಿಕೆಶಿ ಹೇಳಿಕೆಗೆ ಜೆಡಿಎಸ್ ಕೆಂಡಾಮಂಡಲ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.