ETV Bharat / state

ಕ್ರಿಮಿನಲ್ ಪ್ರಕರಣಗಳಲ್ಲಿ ಮೇಲ್ಮನವಿ ಬಾಕಿ ಇದೆ ಎಂಬ ಕಾರಣಕ್ಕೆ ಪೆರೋಲ್ ನಿರಾಕರಿಸುವಂತಿಲ್ಲ : ಹೈಕೋರ್ಟ್

ಕ್ರಿಮಿನಲ್ ಮೇಲ್ಮನವಿ ಹಾಗೂ ಜಾಮೀನು ಅರ್ಜಿ ಬಾಕಿ ಇದೆ ಎಂಬ ಕಾರಣಕ್ಕೆ ಪೆರೋಲ್ ಅರ್ಜಿ ತಿರಸ್ಕಾರ ಮಾಡುವಂತಿಲ್ಲ ಎಂದು ಹೈಕೋರ್ಟ್​ ಹೇಳಿದೆ.

parole-cannot-be-denied-because-appeal-is-pending-in-criminal-cases-high-court
ಕ್ರಿಮಿನಲ್ ಪ್ರಕರಣಗಳಲ್ಲಿ ಮೇಲ್ಮನವಿ ಬಾಕಿ ಇದೆ ಎಂಬ ಕಾರಣಕ್ಕೆ ಪೆರೋಲ್ ನಿರಾಕರಿಸುವಂತಿಲ್ಲ : ಹೈಕೋರ್ಟ್
author img

By

Published : Aug 13, 2023, 7:08 AM IST

ಬೆಂಗಳೂರು : ಕ್ರಿಮಿನಲ್ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬ ಶಿಕ್ಷೆಗೆ ಗುರಿಯಾದ ಬಳಿಕ ಸಲ್ಲಿಕೆಯಾಗಿರುವ ಮೇಲ್ಮನವಿ ವಿಚಾರಣಾ ಹಂತದಲ್ಲಿದೆ ಎಂಬ ಕಾರಣಕ್ಕೆ ಪೆರೋಲ್ ಮನವಿ ತಿರಸ್ಕರಿಸುವಂತಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಬೆಳಗಾವಿಯ ಅರ್ಜುನ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೆ, ಮುಂದಿನ 15 ದಿನಗಳಲ್ಲಿ ಕಾರಾಗೃಹದ ಅಧಿಕಾರಿಗಳು ಪೆರೋಲ್ ಅರ್ಜಿಯನ್ನು ಪರಿಗಣಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದೆ. ಜೊತೆಗೆ, ಈ ಆದೇಶವನ್ನು ಎಡಿಜಿಪಿ (ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ)ಗೆ ತಲುಪಿಸಬೇಕು, ಅವರು ಎಲ್ಲ ಕಾರಾಗೃಹಗಳಿಗೆ ಈ ಬಗ್ಗೆ ಮಾಹಿತಿ ನೀಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿದ್ದರೆ, ಆಗ ಪೆರೋಲ್ ಅರ್ಜಿಯನ್ನು ಪರಿಗಣಿಸಬೇಕಾಗುತ್ತದೆ. ಆಗಲೂ ಸಹ ಒಂದು ವೇಳೆ ಪೆರೋಲ್ ಅರ್ಜಿ ತಿರಸ್ಕಾರವಾಗಿದ್ದರೂ ಸಹ ಪೆರೋಲ್ ಅರ್ಜಿಯನ್ನು ಪರಿಶೀಲಿಸಿ ಯಾವ ಆಧಾರದಲ್ಲಿ ಮನವಿ ಸಲ್ಲಿಸಲಾಗಿದೆ ಎಂಬುದನ್ನು ಆಧರಿಸಿ ನೈಜ ಕಾರಣವಿದ್ದರೆ ಮಾತ್ರ ತಿರಸ್ಕರಿಸಬೇಕೇ ಹೊರತು ಇಲ್ಲವಾದರೆ ಅರ್ಜಿ ಪುರಸ್ಕರಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕಾನೂನು ರೀತಿಯಲ್ಲಿ ಅರ್ಜಿದಾರರು ತಮಗೆ ಅಧೀನ ನ್ಯಾಯಾಲಯ ಶಿಕ್ಷೆಗೆ ಒಳಪಡಿಸಿರುವುದನ್ನು ಪ್ರಶ್ನಿಸಿದ್ದಾರೆ. ಆದರೆ ಮೇಲ್ಮನವಿ ಬಾಕಿ ಇದೆ ಎಂಬ ಕಾರಣ ನೀಡಿ ಪೆರೋಲ್ ನಿರಾಕರಿಸಲಾಗಿದೆ. ಹಾಗಾಗಿ ನ್ಯಾಯಾಲಯ ಪೆರೋಲ್ ತಿರಸ್ಕರಿಸಿರುವ ಹಿಂಬರಹ ರದ್ದುಗೊಳಿಸಿ, ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಬೇಕು ಎಂದು ನ್ಯಾಯಾಲಯವನ್ನು ಕೋರಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲರು, ಕರ್ನಾಟಕ ಕಾರಾಗೃಹ ನಿಯಮ 1974ರ ನಿಯಮ 191 ಅಡಿ ನ್ಯಾಯಾಲಯದ ಮುಂದೆ ಕೇಸ್ ಬಾಕಿದ್ದರೆ ಪರೋಲ್ ಸಲ್ಲಿಸಲು ಅನರ್ಹರು ಎಂದಿದೆ. ಜೊತೆಗೆ 2022ರ ಮಾರ್ಚ್​ 16ರಂದು ಮಾಡಿರುವ ತಿದ್ದುಪಡಿಯಂತೆ ಜಾಮೀನು ಅರ್ಜಿ ಬಾಕಿ ಇದ್ದರೂ ಪೆರೋಲ್ ಕೇಳಲು ಅನರ್ಹರು ಎಂಬ ನಿಯಮ ಜಾರಿಯಾಗಿದೆ. ಹಾಗಾಗಿ ಎರಡೂ ಕಾರಣಗಳನ್ನು ಆಧರಿಸಿ ಅರ್ಜಿದಾರರ ಪೆರೋಲ್ ಅರ್ಜಿ ತಿರಸ್ಕೃತವಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ- ಪ್ರತಿವಾದ ಆಲಿಸಿದ ನ್ಯಾಯಪೀಠ, ಕಾನೂನು ಪ್ರಕಾರ ಪೆರೋಲ್ ಅರ್ಜಿ ಪರಿಗಣಿಸುವಂತೆ ನಿರ್ದೇಶನ ನೀಡಿದೆ.

ಪ್ರಕರಣದ ಹಿನ್ನೆಲೆ: ಅರ್ಜಿದಾರರು 2018ರ ಏಪ್ರಿಲ್ 6ರಿಂದ ಜೈಲಿನಲ್ಲಿದ್ದಾರೆ ಮತ್ತು ಅವರು ಹಲವು ಕಾರಣಗಳನ್ನು ನೀಡಿ 2022ರ ಡಿಸೆಂಬರ್​ 7ರಂದು ಪೆರೋಲ್ ಅರ್ಜಿ ಸಲ್ಲಿಸಿದ್ದರು. ಆದರೆ ಕ್ರಿಮಿನಲ್ ಮೇಲ್ಮನವಿ ಹಾಗೂ ಜಾಮೀನು ಅರ್ಜಿ ಬಾಕಿ ಇದೆ ಎಂಬ ಕಾರಣ ನೀಡಿದ ಜೈಲಿನ ಅಧೀಕ್ಷಕರು ಪೆರೋಲ್ ಅರ್ಜಿಯನ್ನು ತಿರಸ್ಕರಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು.

ಇದನ್ನೂ ಓದಿ: ಕೋರ್ಟ್‌ ಆದೇಶ ಪಾಲಿಸದ ತಹಶೀಲ್ದಾರ್ ವಿರುದ್ಧ ದೋಷಾರೋಪ ನಿಗದಿಗೆ ತೀರ್ಮಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.