ETV Bharat / state

ಪಕ್ಷದ ಮುಖಂಡರು ಸ್ಥಳೀಯ ಸಂಸ್ಥೆ ಚುನಾವಣೆಗೆ ಕಾಂಗ್ರೆಸ್​​​​​ ಜತೆ ಹೊಂದಾಣಿಕೆ ಬೇಡವೆಂದಿದ್ದಾರೆ: ಹೆಚ್​ಡಿಡಿ - H.D.devegowda

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆ ಯಾವುದೇ ಹೊಂದಾಣಿಕೆ ಬೇಡ ಎಂಬ ಅಭಿಪ್ರಾಯವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ಪಕ್ಷದ ಮುಖಂಡರು ಕಾಂಗ್ರೆಸ್ ಜೊತೆ ಹೊಂದಾಣಿಕೆ ಬೇಡವೆಂದಿದ್ದಾರೆ:ಹೆಚ್​ಡಿಡಿ
author img

By

Published : Jul 31, 2019, 8:33 PM IST

ಬೆಂಗಳೂರು: ಮುಂದೆ ಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆ ಯಾವುದೇ ಹೊಂದಾಣಿಕೆ ಬೇಡ ಎಂಬ ಅಭಿಪ್ರಾಯವನ್ನು ಪಕ್ಷದ ಮುಖಂಡರು ವ್ಯಕ್ತಪಡಿಸಿದ್ದಾರೆಂದು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ತಿಳಿಸಿದ್ದಾರೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಸಭೆ ಬಳಿಕ ಮಾತನಾಡಿದ ಅವರು, ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್-ಜೆಡಿಎಸ್ ಕಾರ್ಯಕರ್ತರಲ್ಲಿ ಹೊಂದಾಣಿಕೆಯಾಗದ ಹಿನ್ನೆಲೆ ಪ್ರತ್ಯೇಕವಾಗಿ ಚುನಾವಣೆ ಎದುರಿಸುವ ಅಭಿಪ್ರಾಯವನ್ನು ನಾಯಕರು ವ್ಯಕ್ತಪಡಿಸಿದ್ದಾರೆ.

ಈ ಹಿಂದಿನ ಸ್ಪೀಕರ್ ರಮೇಶ್ ​ಕುಮಾರ್ ಅನರ್ಹ ಮಾಡಿರುವ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್​ನ ತೀರ್ಪು ನೋಡಿಕೊಂಡು ಮುಂದಿನ ಹೆಜ್ಜೆ ತೆಗೆದುಕೊಳ್ತೇವೆ. ನಮ್ಮ ಮುಖಂಡರು ಈ ಬಗ್ಗೆ ನಿಮ್ಮ ತೀರ್ಮಾನವೇ ಅಂತಿಮ ಎಂದಿದ್ದಾರೆ. ಚುನಾವಣೆ ಮೂರು ತಿಂಗಳಿಗೆ ಬರುವುದೋ, ಆರು ತಿಂಗಳಿಗೆ ಬರುವುದೋ ಗೊತ್ತಿಲ್ಲ. ಆದರೆ ನಾವು ಮಾತ್ರ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ರಾಜ್ಯ ಪ್ರವಾಸ ಮಾಡಲು ಎಲ್ಲಾ ನಾಯಕರಿಗೆ ಸೂಚನೆ ಕೊಟ್ಟಿದ್ದೇನೆ. ಜೊತೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಹದಿನಾಲ್ಕು ತಿಂಗಳ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸಲು ಸೂಚಿಸಿದ್ದೇನೆ ಎಂದರು.

ಬೆಂಗಳೂರಿನಲ್ಲಿ ಆಗಸ್ಟ್ 7ರಂದು ಜೆಡಿಎಸ್ ಸಮಾವೇಶ ನಡೆಸುತ್ತೇವೆ. ಅಲ್ಲಿ ನೂತನ ಜಿಲ್ಲಾ ಅಧ್ಯಕ್ಷರನ್ನ ನೇಮಕ ಮಾಡುತ್ತೇವೆ. ನಿಷ್ಕ್ರಿಯಗೊಂಡಿರುವ ಇತರ ಘಟಕಗಳನ್ನೂ ಪುನಶ್ಚೇತನ ಮಾಡುತ್ತೇವೆ. ಹಾಗೆಯೇ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಜೆಡಿಎಸ್ ಸಕ್ರಿಯಗೊಳ್ಳಲಿದೆ. ಪಕ್ಷ ಬಿಟ್ಟು ಹೊರ ಹೋಗಿರುವ ಮೂವರು ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದೇವೆ ಎಂದರು.

ಇನ್ನು, ಇದೇ ಸಂದರ್ಭದಲ್ಲಿ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿರುವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಿಂದೆ ಅವರು ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದಾರೆ. ಪಕ್ಷಾತೀತವಾಗಿ ಅವರು ಕೆಲಸ ಮಾಡುತ್ತಾರೆ ಎಂಬ ಭರವಸೆ ಇದೆ. ಮತ್ತೊಮ್ಮೆ ಅವರಿಗೆ ನನ್ನ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

Intro:ಬೆಂಗಳೂರು : ಮುಂದೆ ಬರಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ ಜೊತೆ ಯಾವುದೇ ಹೊಂದಾಣಿಕೆ ಬೇಡ ಎಂಬ ಅಭಿಪ್ರಾಯವನ್ನು ಮುಖಂಡರು ವ್ಯಕ್ತಪಡಿಸಿದ್ದಾರೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಹೇಳಿದ್ದಾರೆ.Body:ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಸಭೆ ಬಳಿಕ ಮಾತನಾಡಿದ ಗೌಡರು, ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್- ಜೆಡಿಎಸ್ ಕಾರ್ಯಕರ್ತರ ಹೊಂದಾಣಿಕೆ ಆಗದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ಚುನಾವಣೆ ಎದುರಿಸುವ ಅಭಿಪ್ರಾಯವನ್ನು ನಾಯಕರು ವ್ಯಕ್ತಪಡಿಸಿದ್ದಾರೆ. ನೀವು ರಾಜ್ಯ ಮಟ್ಟದಲ್ಲಿ ಒಂದಾಗಿ ಅಧಿಕಾರ ಅನುಭವಿಸಿದಿರಿ. ಆದರೆ ಸ್ಥಳೀಯ ಮಟ್ಟದಲ್ಲಿ ಆ ರೀತಿ ಇಲ್ಲ. ಈಗ ಹೊಂದಾಣಿಕೆ ಬೇಡವೆಂದು ಎಲ್ಲರ ಒಮ್ಮತದ ಅಭಿಪ್ರಾಯವಾಗಿದೆ ಎಂದರು.
ಈ ಹಿಂದಿನ ಸ್ಪೀಕರ್ ರಮೇಶ್ ಕುಮಾರ್ ಅನರ್ಹ ಮಾಡಿರುವ ಶಾಸಕರ ಬಗ್ಗೆ  ಸುಪ್ರೀಂ ಕೋರ್ಟ್ ನ ತೀರ್ಮಾನ ನೋಡಿಕೊಂಡು ಮುಂದಿನ ಹೆಜ್ಜೆ. ಈ ಬಗ್ಗೆ ನಿಮ್ಮ ತೀರ್ಮಾನವೇ ಅಂತಿಮ ಅಂದಿದ್ದಾರೆ ನಮ್ಮ ಮುಖಂಡರು ಎಂದು ಹೇಳಿದರು.
ಚುನಾವಣೆ ಮೂರು ತಿಂಗಳಿಗೆ ಬರುವುದೋ, ಆರು ತಿಂಗಳಿಗೆ ಬರುವುದೋ ಗೊತ್ತಿಲ್ಲ. ಆದರೆ ನಾವು ಮಾತ್ರ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ರಾಜ್ಯ ಪ್ರವಾಸ ಮಾಡಲು ಎಲ್ಲ ನಾಯಕರಿಗೆ ಸೂಚನೆ ಕೊಟ್ಟಿದ್ದೇನೆ. ಜೊತೆಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಹದಿನಾಲ್ಕು ತಿಂಗಳ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಆಗಸ್ಟ್ 7 ರಂದು ಜೆಡಿಎಸ್ ಸಮಾವೇಶ ನಡೆಸುತ್ತೇವೆ.  ಅಲ್ಲಿ ನೂತನ ಜಿಲ್ಲಾ ಅಧ್ಯಕ್ಷರುಗಳನ್ನು ನೇಮಕ ಮಾಡುತ್ತೇವೆ. ನಿಷ್ಕ್ರಿಯಗೊಂಡಿರುವ ಇತರ ಘಟಕಗಳನ್ನೂ ಪುನಶ್ಚೇತನ ಮಾಡುತ್ತೇವೆ. ಹಾಗೆಯೇ ಇನ್ನು ಮುಂದೆ ಸಾಮಾಜಿಕ ಜಾಲತಾಣಗಳಲ್ಲಿಯೂ ಜೆಡಿಎಸ್ ಸಕ್ರಿಯ ಗೊಳ್ಳಲಿದೆ ಎಂದು ಮಾಹಿತಿ ನೀಡಿದರು.  
ಪಕ್ಷ ಬಿಟ್ಟು ಹೊರ ಹೋಗಿರುವ  ಮೂವರು ಅನರ್ಹ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ನೂತನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಹಿಂದೆ ಅವರು ಶಿಕ್ಷಣ ಸಚಿವರಾಗಿ ಕೆಲಸ ಮಾಡಿದ್ದಾರೆ. ಪಕ್ಷಾತೀತವಾಗಿ ಅವರು ಕೆಲಸ ಮಾಡುತ್ತಾರೆ ಎಂಬ ಭರವಸೆ ಇದೆ. ಮತ್ತೊಮ್ಮೆ ಅವರಿಗೆ ನನ್ನ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ ಎಂದು ದೇವೇಗೌಡರು ಹೇಳಿದರು.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.