ಬೆಂಗಳೂರು: ಪದೆ ಪದೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ಪಕ್ಷ ಶೋಕಾಸ್ ನೋಟಿಸ್ ನೀಡಲಾಗಿದೆ.
ಸರ್ಕಾರಕ್ಕೆ ಮುಜುಗರ ತಂದ ಆರೋಪದಡಿ ನೋಟಿಸ್ ನೀಡಿರುವ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಸೂಕ್ತ ಉತ್ತರ ನೀಡುವಂತೆ ನೋಟಿಸ್ ಜಾರಿ ಮಾಡಿದೆ. ಆಡಳಿತ ಪಕ್ಷದ ಶಾಸಕರಾಗಿ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ್ದೀರಿ, ಸರ್ಕಾರಕ್ಕೆ ಮುಜುಗರ ತಂದಿದ್ದೀರಿ ಎನ್ನುವ ಆರೋಪದ ಮೇಲೆ ವಿಜಯಪುರ ಶಾಸಕ ಯತ್ನಾಳ್ಗೆ ನೋಟಿಸ್ ನೀಡಲಾಗಿದೆ.
ಪದೇ ಪದೆ ನಾಯಕತ್ವ ಬದಲಾವಣೆ, ಸರ್ಕಾರದ ವಿರುದ್ಧ ಹೇಳಿಕೆ ನೀಡಿ ಪಕ್ಷ ಹಾಗೂ ಸರ್ಕಾರಕ್ಕೆ ಮುಜುಗರ ತರುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯ ಘಟಕ ನೀಡಿದ್ದ ಶಿಸ್ತು ಉಲ್ಲಂಘನೆ ವರದಿಯಂತೆ ಯತ್ನಾಳ್ ವಿರುದ್ಧ ಪಕ್ಷದ ಕೇಂದ್ರೀಯ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.