ಬೆಂಗಳೂರು: ರಾಜ್ಯದಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆ ಅಭ್ಯರ್ಥಿಗಳ ವಿಚಾರದಲ್ಲಿ ಬಿಜೆಪಿ ಹೈಕಮಾಂಡ್ ಅಚ್ಚರಿ ಎನ್ನುವಂತೆ ಅಭ್ಯರ್ಥಿಗಳ ಹೆಸರು ಘೋಷಿಸಿತ್ತು.
ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಯಡಿಯೂರಪ್ಪ, ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶ ಸಿಗುವುದು ಎಂದು ವರಿಷ್ಠರ ನಿರ್ಧಾರವನ್ನ ಸಮರ್ಥಿಸಿಕೊಂಡರು.
ಕೋರ್ ಕಮಿಟಿ ಸಭೆಯಲ್ಲಿ ಬೇರೆ ಹೆಸರುಗಳ ಬಗ್ಗೆ ಚರ್ಚೆ ಮಾಡಲಾಗಿತ್ತು. ಆದರೆ, ಸಾಮಾನ್ಯ ಕಾರ್ಯಕರ್ತರ ಹೆಸರು ಕೊಡಿ ಎಂದು ಸಂಸದೀಯ ಮಂಡಳಿ ಸೂಚನೆ ಕೊಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಾಮಾನ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಿ ಕೊಡಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.
ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.