ETV Bharat / state

ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಳಿಸಿದ ಸಿಎಂ ಬಿಎಸ್​​ವೈ

ಪಶುಸಂಗೋಪನೆ ಇಲಾಖೆಯ 15 ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ 'ಪಶು ಸಂಜೀವಿನಿ'ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಈ ಸುಸಜ್ಜಿತವಾದ ಪಶು ಶಸ್ತ್ರಚಿಕಿತ್ಸಾ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಿದೆ.

pashu sanjeevini
pashu sanjeevini
author img

By

Published : Aug 20, 2020, 5:33 PM IST

Updated : Aug 20, 2020, 5:41 PM IST

ಬೆಂಗಳೂರು: ಪಶುಸಂಗೋಪನೆ ಇಲಾಖೆ ರೈತರ ಆದಾಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ ತೊಡಗಿದವರು ಜಾನುವಾರು ಆರೋಗ್ಯ ಕಾಪಾಡುವಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಪಶುಸಂಗೋಪನೆ ಇಲಾಖೆಯ 15 ಸುಸಜ್ಜಿತ ಪಶು ಶಸ್ತ್ರಚಿಕಿತ್ಸಾ ವಾಹನ 'ಪಶು ಸಂಜೀವಿನಿ'ಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ನಂತರ ಮಾತನಾಡಿದ ಸಿಎಂ, ಪಶು ಸಂಜೀವಿನಿ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ರೈತರು ಈ ಯೋಜನೆಯ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಪಶುಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್, ಈ ಸುಸಜ್ಜಿತವಾದ ಪಶು ಶಸ್ತ್ರಚಿಕಿತ್ಸಾ ವಾಹನ ರೈತರ ಮನೆಮನೆ ಬಾಗಿಲಿಗೆ ತೆರಳಿ ಚಿಕಿತ್ಸೆ ನೀಡಲಿದೆ. ಸದ್ಯ 15 ಜಿಲ್ಲೆಗಳಿಗೆ ಪಶು ಸಂಜೀವಿನಿ ನೀಡಲಾಗುತ್ತಿದ್ದು, ಮುಂದಿನ ದಿನದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಈ ಸೇವೆ ವಿಸ್ತರಿಸಲಾಗುವುದು ಎಂದರು.

ಪಶು ಸಂಜೀವಿನಿ ವಾಹನ ಲೋಕಾರ್ಪಣೆ

ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಇಂತಹ ಸೇವೆ ಜಾರಿಗೆ ತರಲಾಗುತ್ತಿದ್ದು, ಜಾನುವಾರಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಈ ಸೇವೆಗಳನ್ನು ಇಲಾಖೆಯ ಹೆಲ್ಪ್‌ಲೈನ್ ಸೇವೆಗಳಿಗೆ ಲಿಂಕ್ ಮಾಡಿ 24 x 7 ಜಾನುವಾರುಗಳ ರಕ್ಷಣೆ ಮಾಡುವ ಉದ್ದೇಶವಿದೆ ಎಂದರು.

ಯೋಜನೆಯ ಸಮಗ್ರ ವಿವರ

ಅನುದಾನ:

2019-20ನೇ ಸಾಲಿನ ಬಜೆಟ್ ಘೋಷಣೆಯ ರೂ 2.00 ಕೋಟಿ ಅನುದಾನ ಮತ್ತು ಇಲಾಖೆಯ ಇತರ ಅನುದಾನದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಪಶು ಚಿಕಿತ್ಸಾ ವಾಹನದ ( ಆ್ಯಂಬುಲೆನ್ಸ್​) ವಿಶೇಷತೆಗಳು:

  • ಸುಸಜ್ಜಿತ ಆ್ಯಂಬುಲೆನ್ಸ್ ವಾಹನದಲ್ಲಿ ಆಧುನಿಕ ಪಶುವೈದ್ಯಕೀಯ ಸೇವೆಗಳಾದ ಶಸ್ತ್ರಚಿಕಿತ್ಸಾ ಘಟಕ, ಪ್ರಯೋಗಶಾಲೆ, ಸ್ಕ್ಯಾನಿಂಗ್ ಉಪಕರಣ ಅಳವಡಿಕೆ.
  • 250 ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್.
  • 200 ಕೆ.ಜಿ. ತೂಕ ಸಾಮರ್ಥ್ಯದ ಶಸ್ತ್ರಚಿಕಿತ್ಸಾ ಟೇಬಲ್, ಎ.ಸಿ ವ್ಯವಸ್ಥೆ, ಪಶುವೈದ್ಯರು ಮತ್ತು ಸಿಬ್ಬಂದಿ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ.
  • ವಾಶ್ ಬೇಸಿನ್, 100 ವ್ಯಾಟ್ ಎಲ್​ಇಡಿ ಲೈಟ್, ಆಮ್ಲಜನಕ ಸಪೋರ್ಟ್ ಸಿಸ್ಟಮ್, ಆಕಸ್ಮಿಕ ಬೆಂಕಿ ಅನಾಹುತ ನಿವಾರಣೆ ವ್ಯವಸ್ಥೆ (fire extinguisher) ಇದೆ.
  • ಶಸ್ತ್ರಚಿಕಿತ್ಸಾ ಉಪಕರಣಗಳ ಕಿಟ್ (surgical kit), ಮರಣೋತ್ತರ ಪರೀಕ್ಷೆ ಉಪಕರಣಗಳ ಕಿಟ್ (PM kit), ಪ್ರಸೂತಿ ಕಿಟ್ (dystocia kit) ಮತ್ತು ಇತರ ಉಪಕರಣಗಳನ್ನು ಇಡಲು ಕಪಾಟುಗಳ ವ್ಯವಸ್ಥೆ ಇದೆ.
    pashusanjeevini-vehicles-launched-by-cm-yadiyurappa
    ಪಶು ಸಂಜೀವಿನಿ ವಾಹನ ಲೋಕಾರ್ಪಣೆ

ರೈತನ ಮನೆ ಬಾಗಿಲಿಗೆ ಪಶು ಆಸ್ಪತ್ರೆ (ಚಿಕಿತ್ಸಾ ವಿವರ) :

  • ಸಾಮಾನ್ಯವಾಗಿ ಜಾನುವಾರುಗಳಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳಿಗೆ ತುರ್ತಾಗಿ ಸ್ಪಂದಿಸುವ ಉದ್ದೇಶ ಹೊಂದಿದೆ.
  • ವಿಷಪ್ರಾಶನ, ಪ್ರಸವಕ್ಕೆ ಸಂಬಂಧಿಸಿದ ತೊಂದರೆಗಳು, ಹೊಟ್ಟೆ ಉಬ್ಬರ, ಉಸಿರುಗಟ್ಟುವುದಕ್ಕೆ ತುರ್ತು ಚಿಕಿತ್ಸೆ ನಿಡಲಾಗುವುದು.
  • ಅಪಘಾತ, ಮೂಳೆ ಮುರಿತ, ಬೆಬೇಸಿಯೋಸಿನ್, ಆಂಥ್ರಾಕ್ಸ್, ಚಪ್ಪೆರೋಗ, ಗಳಲೇ ರೋಗ, ಹಾಲುಜ್ವರ, ಕೆಚ್ಚಲು ಬಾವು, ವಿವಿಧ ರೋಗೊದ್ರೇಕಗಳು ಹಾಗೂ ಇನ್ನಿತರ ಆರೋಗ್ಯ ಸಮಸ್ಯೆಗಳಿರುವ ಜಾನುವಾರುಗಳನ್ನು ವಾಹನದಲ್ಲಿ ಹಾಕಿಕೊಂಡು ಹೋಗಿ ಚಿಕಿತ್ಸೆ ಪಡೆಯಬಹುದು.
  • ತಜ್ಞ ಪಶುವೈದ್ಯರು ಹಾಗೂ ಸುಸಜ್ಜಿತ ಪಶು ಚಿಕಿತ್ಸಾ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ದನ, ಎಮ್ಮೆ, ಕುರಿ, ಮೇಕೆ, ಹಾಗೂ ಇನ್ನಿತರ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಪ್ರಾಣ ಹಾನಿ ಆಗುವುದನ್ನು ತಡೆಗಟ್ಟಿ ರೈತರಿಗೆ ಎದುರಾಗುವ ಆರ್ಥಿಕ ಸಂಕಷ್ಟವನ್ನು ತಪ್ಪಿಸುವುದು ಇದರ ಗುರಿಯಾಗಿದೆ.
  • ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ತ್ರಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ಪಶುವೈದ್ಯಕೀಯ ಸೇವೆ ನೀಡಲಿದ್ದಾರೆ.

ರಾಜ್ಯದ 15 ಜಿಲ್ಲೆಗಳಲ್ಲಿ ಕಾರ್ಯಾರಂಭ:

ರಾಯಚೂರು, ಕಲಬುರಗಿ, ಧಾರವಾಡ, ಬಿಜಾಪುರ, ಬೆಳಗಾವಿ, ಮಂಗಳೂರು, ಹಾಸನ, ಮಂಡ್ಯ, ಮೈಸೂರು, ಶಿವಮೊಗ್ಗ, ಚಿತ್ರದುರ್ಗ, ಯಾದಗಿರಿ, ಬೀದರ್, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಪಶುವೈದ್ಯಕೀಯ ಪಾಲಿಕ್ಲಿನಿಕ್‌ಗಳಿಗೆ ಈ ವಾಹನಗಳನ್ನು ನೀಡಲಾಗುತ್ತಿದೆ. ಸದ್ಯ ಇದು ರಾಜ್ಯದ 15 ಜಿಲ್ಲೆಗಳಲ್ಲಿ ಕಾರ್ಯಾರಂಭ ಮಾಡಲಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಈ ಸೇವೆಯನ್ನು ವಿಸ್ತರಿಸಲಾಗುತ್ತದೆ.

ಸಹಾಯವಾಣಿ:

ಪಶುಪಾಲಕರ ಸಹಾಯವಾಣಿ ಸಂಖ್ಯೆ 1962 ಆಗಿದೆ. ಅವಶ್ಯಕ ಮತ್ತು ತುರ್ತು ಸೇವೆಗಾಗಿ ಈ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ವಾಹನದ ಮಾದರಿ:

Tata winger 3488 WB, AIS- 125 Part-1 Type-B ಮಾದರಿಯ 8 ವಾಹನಗಳು ಮತ್ತು Tata winger Shell 3488 WB, 2.2L Dicor ABS, AC,BS-IV, ಮಾದರಿಯ 7 ವಾಹನಗಳಿವೆ.

ಪಶು ಶಸ್ತ್ರಚಿಕಿತ್ಸಾ ವಾಹನವನ್ನು ಉಪಯೋಗಿಸಿಕೊಂಡು ಜಿಲ್ಲಾದ್ಯಂತ ವಾರದಲ್ಲಿ 1 ದಿನ ಪಶುವೈದ್ಯಕೀಯ ಶಸ್ರ್ತಚಿಕಿತ್ಸಾ ತಜ್ಞರು ಮತ್ತು ಪ್ರಸೂತಿ ತಜ್ಞರು ಬರಡು ರಾಸುಗಳ ಚಿಕಿತ್ಸಾ ಶಿಬಿರ ಮತ್ತು ಅನುಪಾಲನಾ ಶಿಬಿರಗಳಲ್ಲಿ ಭಾಗವಹಿಸಿ ತಜ್ಞ ಪಶುವೈದ್ಯಕೀಯ ಸೇವೆಯನ್ನು ದೊರಕಿಸಿ ಕೊಡಲಿದ್ದಾರೆ.

Last Updated : Aug 20, 2020, 5:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.