ದೊಡ್ಡಬಳ್ಳಾಪುರ: ಲಗೇಜ್ ವಿಚಾರಕ್ಕೆ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಆರೋಪ ಪ್ರಕರಣ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಬೆಂಗಳೂರಿಗೆ ಹೊರಟಿದ್ದ ಬಸ್ನಲ್ಲಿ ಕುಟುಂಬವೊಂದು ಪ್ರಯಾಣಿಸುತ್ತಿತ್ತು. ಈ ವೇಳೆ ಲಗೇಜ್ ವಿಚಾರವಾಗಿ ಸದಸ್ಯನೊಬ್ಬ ಕಂಡಕ್ಟರ್ನೊಂದಿಗೆ ಜಗಳವಾಡಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಕುಟುಂಬಸ್ಥರು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗ್ತಿದೆ.
ಓದಿ: ಪ್ರಶ್ನೆ ಪತ್ರಿಕೆ ಸೋರಿಕೆ: ಇಂದು ನಡೆಯಬೇಕಿದ್ದ ಎಫ್ಡಿಎ ಪರೀಕ್ಷೆ ಮುಂದೂಡಿಕೆ
ಘಟನೆಯಲ್ಲಿ ಕಂಡಕ್ಟರ್ ಹರೀಶ್ ಎಂಬುವರು ಗಾಯಗೊಂಡಿದ್ದು, ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.