ETV Bharat / state

ವೇತನ ಪರಿಷ್ಕರಣೆಗೆ ಪಟ್ಟು: ಸಂಧಾನ ಸಭೆ ವಿಫಲ.. ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ

author img

By

Published : Mar 1, 2023, 7:20 AM IST

ಏಳನೇ ಪರಿಷ್ಕೃತ ವೇತನ ಜಾರಿಗಾಗಿ ಪಟ್ಟು ಹಿಡಿದ ನೌಕರರು- ನೌಕರರೊಂದಿಗೆ ಸರ್ಕಾರ ಮಾತುಕತೆ ವಿಫಲ- ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ

Pay Revision issue  Government meeting failed  employees strike from today  Government employees strike  ಏಳನೇ ಪರಿಷ್ಕೃತ ವೇತನ ಜಾರಿಗಾಗಿ ಪಟ್ಟು ಹಿಡಿದ ನೌಕರರು  ನೌಕರರೊಂದಿಗೆ ಸರ್ಕಾರ ಮಾತುಕತೆ ವಿಫಲ  ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ  ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರಾಗಿ ಮುಷ್ಕರ  ಸರ್ಕಾರಿ ನೌಕರರ ಸಂಧಾನ ಸಭೆ ವಿಫಲ  ಬಹುತೇಕ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯ  ಇಲಾಖೆಗಳ ಸೇವೆಯಲ್ಲಿ ವ್ಯತ್ಯಯ  ಯಾವ ಸೇವೆಯಲ್ಲಿ ವ್ಯತ್ಯಯ ಇಲ್ಲ  ಸಂಧಾನ ಸಭೆ ವಿಫಲ  ವೇತನ ಪರಿಷ್ಕರಣೆಗೆ ಪಟ್ಟು
ಇಂದಿನಿಂದ ರಾಜ್ಯ ಸರ್ಕಾರಿ ನೌಕರರು ಮುಷ್ಕರ

ಬೆಂಗಳೂರು : ಇಂದಿನಿಂದ ಸರ್ಕಾರಿ ನೌಕರರು ಏಳನೇ ಪರಿಷ್ಕೃತ ವೇತನ ಜಾರಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಕರ್ತವ್ಯಕ್ಕೆ ಗೈರಾಗಿ ಮುಷ್ಕರ ನಡೆಸಲಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಜೊತೆಗೆ ಮಂಗಳವಾರ ಸರ್ಕಾರಿ ನೌಕರರ ಸಂಧಾನ ಸಭೆ ವಿಫಲವಾದ ಕಾರಣ ನೌಕರರು ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಹೀಗಾಗಿ ಇಂದು ಬಹುತೇಕ ಸರ್ಕಾರಿ ಸೇವೆಗಳಲ್ಲಿ ವ್ಯತ್ಯಯವಾಗಲಿದೆ.

ಸರ್ಕಾರಿ ಕಚೇರಿಗಳು ಬಹುತೇಕ ಕಾರ್ಯಸ್ಥಗಿತವಾಗುವ ಸಾಧ್ಯತೆಯೂ ಇದೆ. ರಾಜ್ಯದ ಜನರಿಗೆ ಸರ್ಕಾರಿ ಸೇವೆಗಳು ಸಿಗುವುದು ಅನುಮಾನ. ಯಾಕೆಂದರೆ ಸುಮಾರು 10 ಲಕ್ಷ ಸರ್ಕಾರಿ ನೌಕರರು ಕರ್ತವ್ಯಕ್ಕೆ ಗೈರಾಗಿ ಆಕ್ರೋಶ ಹೊರಹಾಕಲಿದ್ದಾರೆ. ಸರ್ಕಾರದ ಯಾವುದೇ ಇಲಾಖೆಗಳು ಇಂದು ಕಾರ್ಯನಿರ್ವಹಿಸಲ್ಲ. ಸುಮಾರು 42 ಸರ್ಕಾರಿ ಇಲಾಖೆಗಳು ಮುಷ್ಕರಕ್ಕೆ ಬೆಂಬಲ ಸೂಚಿಸಿವೆ.

ಈ ಇಲಾಖೆಗಳ ಸೇವೆಯಲ್ಲಿ ವ್ಯತ್ಯಯ?: ವಿಧಾನಸೌಧದ ಎಲ್ಲಾ ಕಚೇರಿಗಳು, ಸಚಿವಾಲಯದ ಎಲ್ಲಾ ಕಚೇರಿಗಳು, ಬಿಬಿಎಂಪಿ, ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಗ್ರಾಮ ಪಂಚಾಯಿತಿ, ಸರ್ಕಾರಿ ಶಾಲೆಗಳು, ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಪುರಸಭೆ, ಸರ್ಕಾರಿ ಹಾಸ್ಟೆಲ್ ಗಳು, ತಾಲೂಕು ಕಚೇರಿ, ಜಿಲ್ಲಾ ಕಚೇರಿ, ಆರೋಗ್ಯ ಇಲಾಖೆ, ಕಂದಾಯ ಇಲಾಖೆಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಬಹುದಾಗಿದೆ.

ಕಂದಾಯ ಇಲಾಖೆ ವ್ಯಾಪ್ತಿಯ ಖಾತೆ, ಪಹಣಿ, ತೆರಿಗೆ ಪಾವತಿ, ದೃಢೀಕರಣ ಪತ್ರ, ಜನನ, ಮರಣ ಪತ್ರ, ವಂಶವೃಕ್ಷ, ಸರ್ವೆಯರ್​ ಸಿಗುವುದು ಅನುಮಾನ. ಜಲಮಂಡಳಿ ಸೇವೆ, ಆರೋಗ್ಯ ಸೇವೆಗಳಲ್ಲೂ ವ್ಯತ್ಯಯ ಉಂಟಾಗಲಿದೆ. ಯಾವುದೇ ಓಪಿಡಿ ಸೇವೆಗಳೂ ಇರುವುದಿಲ್ಲ.

ಮುಷ್ಕರದಲ್ಲಿ ಸರ್ಕಾರಿ ವೈದ್ಯರು, ನರ್ಸ್‌ಗಳು, ಲ್ಯಾಬ್ ಟೆಕ್ನಿಷಿಯನ್ಸ್, ಶಿಕ್ಷಣ ಇಲಾಖೆ ನೌಕರರು ಭಾಗಿಯಾಗಲಿದ್ದಾರೆ. ಇದರಿಂದ ಆಸ್ಪತ್ರೆಗೆ ಬರುವ ರೋಗಿಗಳಿಗೆ ಮತ್ತು ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಶಿಕ್ಷಕರ ಕೊರತೆ ಉಂಟಾಗುವ ಸಾಧ್ಯತೆ ಇದೆ. ಎಲ್ಲ ಸರ್ಕಾರಿ ಶಿಕ್ಷಕರು ಮುಷ್ಕರದಲ್ಲಿ ಭಾಗಿಯಾಗುವ ಹಿನ್ನೆಲೆ ಶಾಲೆಗೆ ಗೈರಾಗುವ ಸಾಧ್ಯತೆ ಹೆಚ್ಚಿದೆ.

ಯಾವ ಸೇವೆಯಲ್ಲಿ ವ್ಯತ್ಯಯ ಇಲ್ಲ: ಬಿಎಂಟಿಸಿ, ಕೆಎಸ್​​ಆರ್​ಟಿಸಿ ಬಂದ್​ಗೆ ಬಾಹ್ಯ ಬೆಂಬಲ ನೀಡಿದ್ದು, ಸಾರಿಗೆ ಸೇವೆಯಲ್ಲಿ ಹೆಚ್ಚಿನ ವ್ಯತ್ಯಯವಾಗುವುದಿಲ್ಲ. ತುರ್ತು ಸೇವೆಗಳು, ಅಪಘಾತ, ಡೆಲಿವರಿ, ಪೋಸ್ಟ್ ಮಾರ್ಟಮ್ ಸೇರಿದಂತೆ ಇತರೆ ತುರ್ತು ಸೇವೆಗಳು ಲಭ್ಯ ಇರಲಿವೆ. ಆದರೆ, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರಲಿದೆ. ಸ್ಮಶಾನ ಸೇರಿದಂತೆ ಕೆಲ ನೌಕರರು ಕಾರ್ಯ ಮಾಡಲಿದ್ದಾರೆ. ಪೌರ ಕಾರ್ಮಿಕರ ಸೇವೆಯೂ ಅಬಾಧಿತ.

ಓದಿ: ವೇತನ ಪರಿಷ್ಕರಣೆಗೆ ಪಟ್ಟು: ಮಾತುಕತೆ ನಡೆಸದ ಸರ್ಕಾರ, ನೌಕರರ ಮುಷ್ಕರ

ಆಸ್ಪತ್ರೆ ಸೇವೆಗಳ ಕುರಿತು ಮಾಹಿತಿ ನೀಡಿದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿ ಸಂಘದ ಅಧ್ಯಕ್ಷ ವಿವೇಕ್​ ದೊರೆ, ಬೆಂಗಳೂರಿನಲ್ಲಿ ಸುಮಾರು ಮೂರು ಮೇಜರ್​ ಆಸ್ಪತ್ರೆಗಳು, ಮೂರು ತಾಲೂಕು ಮಟ್ಟದ ಆಸ್ಪತ್ರೆಗಳು, 105 ಪಿಎಸ್​ಇಗಳಿದ್ದಾವೆ. ಇನ್ನು ರಾಜ್ಯಗಳಲ್ಲಿ 19 ಜಿಲ್ಲಾ ಆಸ್ಪತ್ರೆಗಳು, 176 ತಾಲೂಕು ಆಸ್ಪತ್ರೆಗಳು, 2600 ಪಿಎಸ್​ಗಳು ಮತ್ತು 220 ಸಿಎಸ್​ಇಗಳು ಇವೆ. ಈ ಎಲ್ಲ ಆಸ್ಪತ್ರೆಗಳಲ್ಲಿ ನಾವು ತುರ್ತು ಸೇವೆ ಒದಗಿಸುತ್ತೇವೆ. ಅಷ್ಟೇ ಅಲ್ಲ, ಸಂಪೂರ್ಣವಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದೇವೆ ಎಂದು ಹೇಳಿದರು.

ನಾವು ಮಾನವೀಯತೆ ದೃಷ್ಟಿಯಿಂದ ಮತ್ತು ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ನಾವೂ ಎಲ್ಲ ಆಸ್ಪತ್ರೆಗಳಲ್ಲಿ ತುರ್ತು ಸೇವೇಗಳನ್ನು ಒದಗಿಸುತ್ತೇವೆ. ಆದ್ರೆ ತುರ್ತು ಸೇವೆ ಹೊರತುಪಡಿಸಿ ಇತರ ಸೇವೆಗಳನ್ನು ನಾವು ಸ್ಥಗಿತಗೊಳಿಸುತ್ತೇವೆ ಎಂದು ವಿವೇಕ್​ ದೊರೆ ಮಾಧ್ಯಮಗೋಷ್ಟಿಯಲ್ಲಿ ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.