ETV Bharat / state

ಇನ್ಮುಂದೆ ಗ್ರಾಮೀಣ ಪ್ರದೇಶಗಳಲ್ಲಿ ಪಿಡಿಓಗಳೇ ನೀಡಲಿದ್ದಾರೆ ಜನನ-ಮರಣ ಪ್ರಮಾಣ ಪತ್ರ - ಪಿಡಿಓಗಳಿಗೆ ಜನನ-ಮರಣ ಪ್ರಮಾಣ ಪತ್ರ ನೀಡುವ ಅಧಿಕಾರ

ಇಲ್ಲಿಯವರೆಗೆ ಕಂದಾಯ ಇಲಾಖೆ ನೀಡುತ್ತಿದ್ದ ಜನನ, ಮರಣ ಪತ್ರಗಳನ್ನು ಗ್ರಾಮೀಣ ಅಭಿವೃದ್ಧಿ ಇಲಾಖೆ ನೀಡುವಂತೆ‌ ಆದೇಶಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

pdos-to-issue-birth-and-death-certificates-in-rural-areas
ಜನನ-ಮರಣ ಪ್ರಮಾಣ ಪತ್ರ
author img

By

Published : Jul 19, 2020, 4:38 AM IST

ಬೆಂಗಳೂರು: ಗ್ರಾಮೀಣ ಪ್ರದೇಶಗಳಲ್ಲಿ ಇನ್ನು ಮುಂದೆ ಜನನ ಮತ್ತು ಮರಣ ಪ್ರಮಾಣ ಪತ್ರಗಳನ್ನು ಪಿಡಿಓಗಳೇ ನೀಡಲಿದ್ದಾರೆ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸರ್ಕಾರ ಈಗ ಜನನ ಮತ್ತು ಮರಣ ಪ್ರಮಾಣ ಪತ್ರಗಳ ವಿತರಣಾಧಿಕಾರಿಗಳನ್ನಾಗಿ‌ ಸಹ ನೇಮಕ ಮಾಡಿದೆ.

ಇಲ್ಲಿಯವರೆಗೆ ಕಂದಾಯ ಇಲಾಖೆ ನೀಡುತ್ತಿದ್ದ ಜನನ, ಮರಣ ಪತ್ರಗಳನ್ನು ಗ್ರಾಮೀಣ ಅಭಿವೃದ್ಧಿ ಇಲಾಖೆ ನೀಡುವಂತೆ‌ ಆದೇಶಿಸಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳು ಗ್ರಾಮ ಪಂಚಾಯತಿಗಳಿಗೆ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡುವ ಅಧಿಕಾರ ನೀಡಬಹುದೆಂದು ಅಭಿಪ್ರಾಯ ನೀಡಿದ ಹಿನ್ನೆಲೆಯಲ್ಲಿ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ.

pdos-to-issue-birth-and-death-certificates-in-rural-areas
ಅಧಿಸೂಚನೆ ಪ್ರತಿ

ರಾಷ್ಟ್ರೀಯ ಜನನ ಮತ್ತು ಮರಣ ಕಾಯ್ದೆ 1969ರ ಅಧ್ಯಾಯ 5ರ ಪ್ರಕರಣ 27ರ ಅಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಇ-ತಂತ್ರಾಂಶದಲ್ಲಿ ತಮ್ಮ ಡಿಜಿಟಲ್ ಸಹಿಯ ಮೂಲಕ ವ್ಯಕ್ತಿಗಳ ಜನನ ಮತ್ತು ಮರಣ ಪ್ರಮಾಣ ಪತ್ರ ನೀಡಬಹುದು ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಧಿಸೂಚನೆಯಲ್ಲಿ ತಿಳಿಸಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.