ಬೆಂಗಳೂರು: ''ಕರ್ನಾಟಕದಲ್ಲಿ ಯಾವುದೇ ರೀತಿಯ ದ್ವೇಷ ಹರಡದಂತೆ ಮತ್ತು ಅಂತಹ ಅನಪೇಕ್ಷಿತ ಘಟನೆಗಳ ಬಗ್ಗೆ ಕಣ್ಗಾವಲಿರಿಸಲು 'ಶಾಂತಿಯುತ ಕರ್ನಾಟಕ' ಎಂಬ ಹೊಸ ಸಹಾಯವಾಣಿ ಸ್ಥಾಪಿಸುವಂತೆ ಸಚಿವ ಎಂ.ಬಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್, ಪ್ರಿಯಾಂಕ್ ಖರ್ಗೆ ಹಾಗು ಡಿ.ಕೆ.ಶಿವಕುಮಾರ್ ಅವರಿಗೆ ವಿಶೇಷ ಮನವಿ ಮಾಡಿದ್ದಾರೆ. ನಮ್ಮ ಗುರಿ ಅಭಿವೃದ್ಧಿ ಮತ್ತು ಪ್ರಗತಿ ಹಾಗೂ "ಬ್ರ್ಯಾಂಡ್ ಕರ್ನಾಟಕ" ರಕ್ಷಿಸುವುದು ಎಂದು ಇದೇ ವೇಳೆ ತಿಳಿಸಿದ್ದಾರೆ.
-
ಕರ್ನಾಟಕದಲ್ಲಿ ಯಾವುದೇ ರೀತಿಯ ದ್ವೇಷ ಹರಡದಂತೆ ಮತ್ತು ಅಂತಹ ಅನಪೇಕ್ಷಿತ ಘಟನೆಗಳ ಬಗ್ಗೆ ಕಣ್ಗಾವಲು ಇರಿಸಲು "ಶಾಂತಿಯುತ ಕರ್ನಾಟಕ" ಎಂಬ ಹೊಸ ಸಹಾಯವಾಣಿಯನ್ನು ಸ್ಥಾಪಿಸುವಂತೆ ಶ್ರೀ @DrParameshwara, @PriyankKharge, @DKShivakumar, @CMofKarnataka, ಅವರಲ್ಲಿ ಮನವಿ.
— M B Patil (@MBPatil) June 5, 2023 " class="align-text-top noRightClick twitterSection" data="
ನಮ್ಮ ಗುರಿ ಅಭಿವೃದ್ಧಿ ಮತ್ತು ಪ್ರಗತಿ ಹಾಗೂ "ಬ್ರಾಂಡ್…
">ಕರ್ನಾಟಕದಲ್ಲಿ ಯಾವುದೇ ರೀತಿಯ ದ್ವೇಷ ಹರಡದಂತೆ ಮತ್ತು ಅಂತಹ ಅನಪೇಕ್ಷಿತ ಘಟನೆಗಳ ಬಗ್ಗೆ ಕಣ್ಗಾವಲು ಇರಿಸಲು "ಶಾಂತಿಯುತ ಕರ್ನಾಟಕ" ಎಂಬ ಹೊಸ ಸಹಾಯವಾಣಿಯನ್ನು ಸ್ಥಾಪಿಸುವಂತೆ ಶ್ರೀ @DrParameshwara, @PriyankKharge, @DKShivakumar, @CMofKarnataka, ಅವರಲ್ಲಿ ಮನವಿ.
— M B Patil (@MBPatil) June 5, 2023
ನಮ್ಮ ಗುರಿ ಅಭಿವೃದ್ಧಿ ಮತ್ತು ಪ್ರಗತಿ ಹಾಗೂ "ಬ್ರಾಂಡ್…ಕರ್ನಾಟಕದಲ್ಲಿ ಯಾವುದೇ ರೀತಿಯ ದ್ವೇಷ ಹರಡದಂತೆ ಮತ್ತು ಅಂತಹ ಅನಪೇಕ್ಷಿತ ಘಟನೆಗಳ ಬಗ್ಗೆ ಕಣ್ಗಾವಲು ಇರಿಸಲು "ಶಾಂತಿಯುತ ಕರ್ನಾಟಕ" ಎಂಬ ಹೊಸ ಸಹಾಯವಾಣಿಯನ್ನು ಸ್ಥಾಪಿಸುವಂತೆ ಶ್ರೀ @DrParameshwara, @PriyankKharge, @DKShivakumar, @CMofKarnataka, ಅವರಲ್ಲಿ ಮನವಿ.
— M B Patil (@MBPatil) June 5, 2023
ನಮ್ಮ ಗುರಿ ಅಭಿವೃದ್ಧಿ ಮತ್ತು ಪ್ರಗತಿ ಹಾಗೂ "ಬ್ರಾಂಡ್…
ಇನ್ನೊಂದೆಡೆ, ಚಕ್ರವರ್ತಿ ಸೂಲಿಬೆಲೆ ಅವರನ್ನು ಜೈಲಿಗೆ ಹಾಕುತ್ತೇವೆ ಎಂಬ ಎಂ.ಬಿ.ಪಾಟೀಲ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಂಸದ ತೇಜಸ್ವಿ ಸೂರ್ಯ, ಜೈಲಿಗೆ ಹಾಕುವುದಾಗಿ ಅಹಂಕಾರದಿಂದ ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಚಕ್ರವರ್ತಿ ಸೂಲಿಬೆಲೆ ಮೈಸೂರಿನಲ್ಲಿ ಸಾವರ್ಕರ್ ಕುರಿತು ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಅದಕ್ಕೆ ಅನುಮತಿ ಕೊಡಬಾರದು ಎಂದು ಕಾಂಗ್ರೆಸ್ ಸಚಿವರು ಪ್ರಯತ್ನ ಮಾಡಿದರು. ಚಕ್ರವರ್ತಿ ಅವರ ಅಭಿವ್ಯಕ್ತಿ ಸ್ವಾತಂತ್ರ್ಯ ಹತ್ತಿಕ್ಕಲಾಗುತ್ತಿದೆ. ಇದು ಹಿಟ್ಲರ್ ಸರ್ಕಾರ ಎಂದು ಅವರು ಟೀಕಿಸಿದರು. ಸಚಿವರ ಹೇಳಿಕೆಯನ್ನು ಖಂಡಿಸುತ್ತೇವೆ. ಕಾರ್ಯಕ್ರಮಗಳನ್ನು ಮೊಟಕುಗೊಳಿಸುವ ಕೆಲಸ ನಡೆದರೆ, ಸದನದ ಹೊರಗೆ ಮತ್ತು ಒಳಗೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ: ''ಗೃಹ ಲಕ್ಷ್ಮೀ ಯೋಜನೆಗೆ ಹಣಕಾಸು ಕ್ರೋಡೀಕರಣ ಸಂಬಂಧ ಹಣಕಾಸು ಇಲಾಖೆ ಪರಿಶೀಲನೆ ಮಾಡುತ್ತಿದೆ. ಆಗಸ್ಟ್ 15ಕ್ಕೆ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸುತ್ತೇವೆ'' ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿಂದು ತಮ್ಮ ಕಚೇರಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ''ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರು ಶೇ 88ರಷ್ಟು ಮಂದಿ ಇದ್ದಾರೆ. ನಮ್ಮ ಸರ್ಕಾರ ಎಪಿಎಲ್ ಕಾರ್ಡ್ ಹೊಂದಿರುವವರಿಗೂ ಗೃಹ ಲಕ್ಷ್ಮೀ ಯೋಜನೆ ಕೊಡುತ್ತಿದೆ. ಈ ಯೋಜನೆ ಸಮರ್ಪಕವಾಗಿ ಜಾರಿ ಮಾಡುವ ನಿಟ್ಟಿನಲ್ಲಿ ಸಮಗ್ರ ಚರ್ಚೆ, ಚಿಂತನೆ ನಡೆಯುತ್ತಿದೆ. ಯೋಜನೆ ಎಲ್ಲರಿಗೂ ತಲುಪಬೇಕು. ಈ ಸಂಬಂಧ ಅಂಕಿಅಂಶಗಳ ಮಾಹಿತಿಯನ್ನು ಅಧಿಕಾರಿಗಳು ಸಂಗ್ರಹ ಮಾಡುತ್ತಿದ್ದಾರೆ. ಈಗಾಗಲೇ ಸಂಪನ್ಮೂಲ ಕ್ರೋಡೀಕರಣ ಬಗ್ಗೆ ಸಿಎಂ ಚರ್ಚೆ ನಡೆಸಿದ್ದು ಮಾಹಿತಿ ನೀಡಿದ್ದಾರೆ'' ಎಂದು ತಿಳಿಸಿದರು.
ಉಸ್ತುವಾರಿ ಸಚಿವ ಸ್ಥಾನದ ಸ್ಥಾನದ ವಿಚಾರವಾಗಿ ಮಾತನಾಡಿ, ''ನನಗೆ ಯಾವುದೇ ಜವಾಬ್ದಾರಿ ನೀಡಿದರೂ ನಿಷ್ಠೆಯಿಂದ ಮಾಡುತ್ತೇನೆ ಎಂದರು. ಇದೇ ವೇಳೆ, ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ನಾನು ಟ್ರಾಫಿಕ್ ರೂಲ್ಸ್ ಪಾಲನೆ ಮಾಡಿಕೊಂಡೇ ಬಂದಿದ್ದೇನೆ. ನಾನು ಕಾರ್ ಡ್ರೈವ್ ಮಾಡಿಲ್ಲ'' ಎಂದು ಸ್ಪಷ್ಟನೆ ನೀಡಿದರು.
ಕರ್ನಾಟಕ ರಾಜ್ಯದಲ್ಲಿ ನೂತನವಾಗಿ ಬಂದ ಸರ್ಕಾರಕ್ಕೆ ಒಳ್ಳೆಯ ಹೆಸರು ಬರಲಿ ಹಾಗೂ ಜನರಿಗೆ ಒಳ್ಳೆಯ ಕಾರ್ಯಕ್ರಮ ಕೊಡಬೇಕು ಎಂದು ಕೊಠಡಿಯಲ್ಲಿ ಮಹಾಲಕ್ಷ್ಮಿ ಪೂಜೆ ಮಾಡಿದ್ದೇವೆ. ಒಳ್ಳೆಯ ಕೆಲಸ ಮಾಡುವ ಉದ್ದೇಶದಿಂದ ಪೂಜೆ ಮಾಡಿದ್ದೇವೆ'' ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಇದನ್ನೂ ಓದಿ: ಟೋಲ್ ಹಣದ ವಿಚಾರಕ್ಕೆ ಗಲಾಟೆ.. ಯುವಕನನ್ನು ಹಾಕಿ ಸ್ಟಿಕ್ನಿಂದ ಕೊಲೆ ಮಾಡಿದ ದುಷ್ಕರ್ಮಿಗಳು