ETV Bharat / state

ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ನವಿಲು ಗರಿಗೆ ವಿನಾಯಿತಿ ಇದೆ: ಸಚಿವ ಈಶ್ವರ್ ಖಂಡ್ರೆ - forest protection act

ನವಿಲು ಗರಿಯಿಂದ ತಯಾರಿಸಿದ ವಸ್ತುಗಳನ್ನು ವಿದೇಶಕ್ಕೆ ರಫ್ತು ಮಾಡಲು ನಿಷೇಧವಿದೆ. ಆದರೆ ನವಿಲುಗಳಿಗೆ ಹಿಂಸೆ ನೀಡದೇ ಉದುರಿಬಿದ್ದ ಗರಿಗಳನ್ನು ಸಂಗ್ರಹಿಸಿ ದೇಶದೊಳಗೆ ಮಾರಾಟ ಮಾಡುವುದು ಕಾನೂನು ಬಾಹಿರವಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

Minister Eshwar khandre
ಸಚಿವ ಈಶ್ವರ್ ಖಂಡ್ರೆ
author img

By ETV Bharat Karnataka Team

Published : Oct 28, 2023, 7:30 AM IST

Updated : Oct 28, 2023, 10:41 AM IST

ಬೆಂಗಳೂರು: 1972ರ ಸೆಕ್ಷನ್ 43ರ ಅಡಿ ನವಿಲು ಗರಿಗಳಿಗೆ ವಿನಾಯಿತಿ ನೀಡಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ನವಿಲು ಗರಿಗಳಿಂದ ತಯಾರಿಸಿದ ಯಾವುದೇ ವಸ್ತುಗಳನ್ನು ರಫ್ತು ಮಾಡುವುದನ್ನು ಭಾರತ ಸರ್ಕಾರ ಮತ್ತು ಅಳಿವಿನಂಚಿನಲ್ಲಿರುವ ಪ್ರಭೇದಗಳಲ್ಲಿ ಅಂತಾರಾಷ್ಟ್ರೀಯ ವ್ಯಾಪಾರದ ಸಮಾವೇಶ - ಸಿಐಟಿಇಎಸ್ ನಿಷೇಧಿಸಿದೆ. ಆದರೆ ನೈಸರ್ಗಿಕವಾಗಿ ನವಿಲುಗಳಿಂದ ಉದುರಿದ ಗರಿಗಳನ್ನು ಸಂಗ್ರಹಿಸುವುದು ಮತ್ತು ದೇಶದೊಳಗೆ ಮಾರಾಟ ಮಾಡುವುದು ಕಾನೂನುಬಾಹಿರವಲ್ಲ. ಆದರೆ, ನವಿಲುಗಳಿಗೆ ಹಿಂಸೆ ನೀಡಿ ಗರಿ ಕಿತ್ತರೆ ಅದು ಶಿಕ್ಷಾರ್ಹ ಅಪರಾಧ ಎಂದು ಸ್ಪಷ್ಟಪಡಿಸಿದ್ದಾರೆ.

'ಕೇವಲ ಹಿಂದೂ ನಂಬಿಕೆಗಳನ್ನೇ ಟಾರ್ಗೆಟ್ ಮಾಡಬೇಡಿ. ನವಿಲು ಗರಿಗಳನ್ನು ಇಟ್ಕೊಂಡಿರುವ ದರ್ಗಾಗಳಲ್ಲಿಯೂ ಪರಿಶೀಲನೆ ನಡೆಸಿ. ಆಗ ನಿಮ್ಮ ಅರಣ್ಯ ರಕ್ಷಣೆ ಕಾಳಜಿ ಎಷ್ಟಿದೆ ಅಂತ ಗೊತ್ತಾಗುತ್ತೆ. ಈ ಸಂಬಂಧ ಸರ್ಕಾರಕ್ಕೆ ನಾವು ಪತ್ರ ಬರೆದು ಆಗ್ರಹಿಸುತ್ತೇವೆ. ಸತ್ತ ಪ್ರಾಣಿಗಳ ಚರ್ಮ ಇಟ್ಕೊಳ್ಳುವುದು ನಮ್ಮ ಸಾಧು ಸಂತರು ಮೊದಲಿಂದಲೂ ಪಾಲಿಸಿಕೊಂಡು ಬಂದ ಪದ್ಧತಿ. ಸಲ್ಮಾನ್ ಖಾನ್ ಥರ ಜಿಂಕೆ ಸಾಯಿಸಿ ಅದರ ಚರ್ಮ ಬಳಸಲ್ಲ. ಕಾನೂನು ಪಾಲಿಸಿದರೆ ಶೇ100 ರಷ್ಟು ಪಾಲಿಸಿ' ಎಂದು ಬಿಜೆಪಿ ಶಾಸಕ ಅರವಿಂದ‌ ಬೆಲ್ಲದ್ ಶುಕ್ರವಾರ ಆಗ್ರಹಿಸಿದ್ದರು.

'ಕಾನೂನು ಕೇವಲ ಹಿಂದೂ ಸಮಾಜಕ್ಕೆ ಅನ್ವಯಿಸಲ್ಲ. ಹುಲಿ ಉಗುರು ಧರಿಸಿರುವ ಆರೋಪದಲ್ಲಿ ಹಿಂದೂಗಳ ವಿರುದ್ಧ ಟಾರ್ಗೆಟ್ ಮಾಡಲಾಗ್ತಿದೆ. ಕಾನೂನಿನಲ್ಲಿ ಎಲ್ಲರ ವಿರುದ್ಧ ಸಮಾನವಾಗಿಯೇ ಕ್ರಮ ತೆಗೆದುಕೊಳ್ಳಬೇಕು. ದರ್ಗಾಗಳಲ್ಲಿ ನವಿಲು ಗರಿಗಳನ್ನು ಬಳಕೆ ಮಾಡ್ತಾರೆ. ಇದು ಕೂಡಾ ಕಾನೂನಿಗೆ ವಿರುದ್ಧವಾಗಿದ್ದು, ಕ್ರಮ ತೆಗೆದುಕೊಳ್ಳಬೇಕು. ಕೇವಲ ಹಿಂದೂ ಧರ್ಮ ಟಾರ್ಗೆಟ್ ಮಾಡಿ ಕೇಸ್ ಹಾಕುವಂತಾಗಬಾರದು' ಎಂದು ಶಾಸಕ ಬೆಲ್ಲದ್ ದೂರಿದ್ದರು.

ಅರಣ್ಯಾಧಿಕಾರಿಗಳು ಧರಿಸಿದರೆ ಕಠಿಣ ಕ್ರಮ: ಹುಲಿ ಉಗುರಿನ ಲಾಕೆಟ್​​ನ್ನು ಅರಣ್ಯಾಧಿಕಾರಿಗಳೇ ಧರಿಸುವುದು ಅಕ್ಷಮ್ಯ ಅಪರಾಧ. ಅರಣ್ಯಾಧಿಕಾರಿಗಳು ಹುಲಿ ಉಗುರಿನ ಲಾಕೆಟ್ ಧರಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಇದೇ ವೇಳೆ ಸಚಿವರು ಸ್ಪಷ್ಟಪಡಿಸಿದ್ದಾರೆ.

ಹುಲಿ ಉಗುರು ಮಾದರಿ ಪೆಂಡೆಂಟ್ ಧರಿಸಿದ ಪ್ರಕರಣದ ಮಧ್ಯೆ ನವಿಲು ಗರಿಯ ಬಗ್ಗೆ ಬಿಜೆಪಿ ಶಾಸಕ ಮಾತನಾಡಿದ್ದಾರೆ. ಹುಲಿ ಉಗುರು ಮಾದರಿ ಪೆಂಡೆಂಟ್ ಪ್ರಕರಣದಲ್ಲಿ ಬಿಗ್ ಬಾಸ್ ಮನೆಯಿಂದ ಸ್ಪರ್ಧಿ ವರ್ತೂರು ಸಂತೋಷ್ ಬಂಧನದ ಬಳಿಕ ರಾಜ್ಯದಲ್ಲಿ ಅರಣ್ಯಾಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಹುಲಿ ಗುರು ಮಾದರಿ ಪೆಂಡೆಂಟ್ ಧರಿಸಿದವರ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಚಿಕ್ಕಮಗಳೂರು: ಶಾಖಾದ್ರಿ ಮನೆಯಲ್ಲಿ ಚಿರತೆ, ಜಿಂಕೆ ಚರ್ಮ ವಶಕ್ಕೆ ಪಡೆದ ಅರಣ್ಯಾಧಿಕಾರಿಗಳು

Last Updated : Oct 28, 2023, 10:41 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.