ನೆಲಮಂಗಲ: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆ ಬಳಿ ನಡೆಯಿತು. ಬಿಲ್ಲಿನಕೋಟೆ ನಿವಾಸಿ ಸಾಬುಲಾಲ್ (26) ಮೃತರು. ಇವರು ರಸ್ತೆ ದಾಟುತ್ತಿದ್ದಾಗ ಬೆಂಗಳೂರು ಕಡೆಯಿಂದ ತುಮಕೂರು ಮಾರ್ಗವಾಗಿ ತೆರಳುತ್ತಿದ್ದ ಕಾರು ವೇಗವಾಗಿ ಬಂದಪ್ಪಳಿಸಿದೆ. ಕಾರು ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಸಮೀಪದ ಸಿಸಿಟಿವಿ ದೃಶ್ಯ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಬೈಕ್ಗೆ ಬಸ್ ಡಿಕ್ಕಿ: ಪತ್ನಿ ಮುಂದೆಯೇ ಪ್ರಾಣ ಬಿಟ್ಟ ಪತಿ