ETV Bharat / state

ಕೆಎಸ್​​ಆರ್​ಟಿಸಿಯಲ್ಲಿ ಟಿಕೆಟ್ ಪಡೆಯದೆ ಪ್ರಯಾಣ: 5935 ಪ್ರಯಾಣಿಕರಿಗೆ ದಂಡ!

ಟಿಕೆಟ್ ಇಲ್ಲದೆ ಕೆಎಸ್​ಆರ್​ಟಿಸಿ ಬಸ್​​ನಲ್ಲಿ ಪ್ರಯಾಣಿಸಿದ 5935 ಪ್ರಯಾಣಿಕರಿಗೆ ದಂಡ ವಿಧಿಸಿ ನಿಗಮದ ಅಧಿಕಾರಿಗಳು ಭಾರೀ ಮೊತ್ತದ ಹಣವನ್ನು ವಸೂಲಿ ಮಾಡಿದ್ದು, ಈ ಮೂಲಕ ನಿಗಮದ ಆದಾಯದಲ್ಲಿ ಆಗುತ್ತಿದ್ದ ಸೋರಿಕೆಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಟಿಕೇಟ್ ಇಲ್ಲದೆ ಪ್ರಯಾಣಿಸಿದ 5935 ಪ್ರಯಾಣಿಕರಿಗೆ ದಂಡ!
author img

By

Published : Aug 27, 2019, 4:28 PM IST

ಬೆಂಗಳೂರು: ಕೆಎಸ್​ಆರ್​​ಟಿಸಿ ಬಸ್​ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 5935 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತನಿಖಾ ತಂಡಗಳು ಜುಲೈನಲ್ಲಿ ತಪಾಸಣೆ ನಡೆಸಿ, ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 46,458 ವಾಹನಗಳನ್ನು ತನಿಖೆಗೊಳಪಡಿಸಿತ್ತು. ಆ ಸಮಯದಲ್ಲಿ 4,844 ಪ್ರಕರಣಗಳನ್ನು ಪತ್ತೆ ಹಚ್ಚಿ, ಒಟ್ಟು 5,935 ಟಿಕೆಟ್ ರಹಿತ ಪ್ರಯಾಣಿಕರಿಂದ 7,35,523 ರೂಪಾಯಿಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ.‌

ಜೊತೆಗೆ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ ಇತರ 89,043 ರೂ.ಗಳನ್ನೂ ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಹಾಗೂ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಂಡಿದ್ದಾರೆ. ಆದ್ದರಿಂದ ಇಂತಹ ಪ್ರಕರಣಗಳು ಮರುಕಳಿಸದಂತೆ ತಡೆಯಲು ಪ್ರಯಾಣಿಕರು ಬಸ್​​ನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್ ಮತ್ತು ಪಾಸ್ ಪಡೆದು ಪ್ರಯಾಣ ಮಾಡುವಂತೆ ಸಂಸ್ಥೆಯು ಪ್ರಕಟಣೆಯಲ್ಲಿ ಕೋರಿದೆ.

Intro:ಟಿಕೇಟ್ ಇಲ್ಲದೆ ಪ್ರಯಾಣಿಸಿದ 5935 ಪ್ರಯಾಣಿಕರಿಗೆ ದಂಡ..

ಬೆಂಗಳೂರು: ಕೆಎಸ್ ಆರ್ ಟಿಸಿ ಬಸ್ ನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ 5935 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ.. ನಿಗಮದ ತನಿಖಾ ತಂಡಗಳಿಂದ ಜುಲೈ ತಿಂಗಳಲ್ಲಿ ತಪಾಸಣೆ ನಡೆಸಿದಾಗ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 46,458 ವಾಹನಗಳನ್ನು ತನಿಖೆ ಗೊಳಪಡಿಸಲಾಗಿದೆ. ಆ ಸಮಯದಲ್ಲಿ 4844 ಪ್ರಕರಣಗಳನ್ನು ಪತ್ತೆಹಚ್ಚಿ, 5935 ಟಿಕೇಟ್ ರಹಿತ ಪ್ರಯಾಣಿಕರಿಂದ 7,35,523 ರೂಪಾಯಿ ಗಳನ್ನು ದಂಡದ ರೂಪದಲ್ಲಿ ವಸೂಲಿ ಮಾಡಲಾಗಿದೆ..‌

ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 89,043ರೂ ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ ಹಾಗೂ ತಪ್ಪಿತಸ್ಥರ ವಿರುದ್ದ ಇಲಾಖಾ ರೀತಿಯ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ.. ಸಾರ್ವಜನಿಕ ಪ್ರಯಾಣಿಕರು, ಬಸ್ಸಿನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೇಟ್/ ಪಾಸ್ ಪಡೆದು ಪ್ರಯಾಣ ಮಾಡುವಂತೆ, ಸಂಸ್ಥೆಯು ಪ್ರಕಟಣೆಯಲ್ಲಿ ಪ್ರಯಾಣಿಕರಿಗೆ ಕೋರಿದೆ..

KN_BNG_02_KSRTC_TICKET_FINE_SCRIPT_7201801
Body:..Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.