ಬೆಂಗಳೂರು: ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಬಹು ನಿರೀಕ್ಷಿತ 'ನಮ್ಮ ಮೆಟ್ರೊ' ಮಾರ್ಗದ ಕಾಮಗಾರಿಗೆ ಇನ್ನೂ 49 ಆಸ್ತಿಗಳ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. 38 ಖಾಸಗಿ ಆಸ್ತಿಗಳನ್ನು ಸ್ವಾಧೀನಪಡಿಸಿಕೊಳ್ಳಬೇಕಿದ್ದು, 11 ಸರ್ಕಾರಿ ಆಸ್ತಿಗಳ ಹಸ್ತಾಂತರ ಆಗಬೇಕಿದೆ ಎಂದು ಸಂಸ್ಥೆ ತಿಳಿಸಿದೆ.
ಕೆ.ಆರ್. ಪುರದಿಂದ ಹೆಬ್ಬಾಳ ಮಾರ್ಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲು 38 ಕಿಲೋ ಮೀಟರ್ ಉದ್ದದ ಮೆಟ್ರೊ ರೈಲು ಮಾರ್ಗ ನಿರ್ಮಾಣದ ಯೋಜನೆ ರೂಪಿಸಲಾಗಿದೆ ಎಂದು ಹೇಳಿದೆ.
ಈ ಪೈಕಿ 225 ಆಸ್ತಿಗಳಲ್ಲಿನ 2.09 ಲಕ್ಷ ಚದರ್ ಮೀಟರ್ ಸ್ವಾಧೀನಕ್ಕೆ ಪಡೆದು 2021ರ ಡಿಸೆಂಬರ್‌ನಲ್ಲೇ ಎಂಜಿನಿಯರಿಂಗ್ ವಿಭಾಗಕ್ಕೆ ಹಸ್ತಾಂತರ ಮಾಡಲಾಗಿದೆ. ಉಳಿದ ಆಸ್ತಿಗಳ ಸ್ವಾಧೀನ ಪ್ರಕ್ರಿಯೆ ನಡೆಯುತ್ತಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಮಾಹಿತಿ ನೀಡಿದೆ.
ಜಾಹೀರಾತು-ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ