ETV Bharat / state

ಬೆಂಗಳೂರು ಲಾಕ್​​ಡೌನ್: ತಂತಮ್ಮ ಊರುಗಳಿಗೆ ಹೊರಟ ಜನ! - ಬೆಂಗಳೂರು ಲಾಕ್​​ಡೌನ್ ಹಿನ್ನೆಲೆ

ನಾಳೆ ರಾತ್ರಿ 8 ಗಂಟೆಯಿಂದ ಒಂದು ವಾರಗಳ ಕಾಲ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜನತೆ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

People are traveling their village due to lockdown at Bangalore
ಊರು ಕಡೆ ಹೊರಟ ಜನತೆ
author img

By

Published : Jul 13, 2020, 12:34 PM IST

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪ್ರತಿದಿನ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟುತ್ತಿದೆ. ಈ ಹಿನ್ನೆಲೆಯಲ್ಲಿ ತಜ್ಞರ ಸಲಹೆಯಂತೆ ಒಂದು ವಾರ ಲಾಕ್​​ಡೌನ್​​ಗೆ ಸರ್ಕಾರ ಮುಂದಾಗಿದೆ. ಇತ್ತ ಜನರು ಗಂಟುಮೂಟೆ ಕಟ್ಟಿ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

ಊರ ಕಡೆ ಹೊರಟ ಜನತೆ

ನಾಳೆ ರಾತ್ರಿ 8 ಗಂಟೆಯಿಂದ ಬೆಂಗಳೂರು ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್​​ಡೌನ್ ಜಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಜನರು ಗಂಟುಮೂಟೆ ಕಟ್ಟಿಕೊಂಡು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈಗಾಗಲೇ ಪ್ರಮುಖ ಬಸ್​​ ನಿಲ್ದಾಣಗಳಲ್ಲಿ ಜನರು ದೌಡಾಯಿಸುತ್ತಿದ್ದು, ತಮ್ಮ ಊರುಗಳಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.

ರಾಜ್ಯದಲ್ಲಿ ಸುಮಾರು 16 ಜಿಲ್ಲೆಗಳಲ್ಲಿ ಮಾತ್ರ ಖಾಸಗಿ ಬಸ್​ಗಳು ಸಂಚಾರ ನಡೆಸುತ್ತಿದ್ದು, ಮೆಜೆಸ್ಟಿಕ್ ಬಸ್​ ನಿಲ್ದಾಣ, ಸ್ಯಾಟಲೈಟ್ ಬಸ್​ ನಿಲ್ದಾಣದಲ್ಲಿ ಜನರು ಬಸ್​ಗಳಿಗಾಗಿ ಕಾದು ಕುಳಿತಿರುವ ದೃಶ್ಯ ಕಂಡು ಬಂತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.