ಬೆಂಗಳೂರು: ಕೆಆರ್ಪುರದಲ್ಲಿ ಕೊರೋನಾ ವೈರಸ್ ಮಾರಕ ಕಾಯಿಲೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸಲಾಯಿತು.
ನಗರದ ಕೆಆರ್ಪುರಂನಲ್ಲಿರುವ ಶ್ರೀ ಲಕ್ಷ್ಮೀ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿಂದು ಉಚಿತ ಆರೋಗ್ಯ ಶಿಬಿರ ಹಾಗೂ ಕೊರೋನಾ ವೈರಸ್ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದ ಮೂಲಕ ನೂರಾರು ರೋಗಿಗಳು ಅನುಕೂಲವನ್ನು ಪಡೆದುಕೊಂಡರು. ಉಚಿತ ಶಿಬಿರದಲ್ಲಿ ಭಾಗವಹಿಸಿದ ಎಲ್ಲಾ ಜನರಿಗೆ ಕೊರೋನಾ ಕಾಯಿಲೆಯ ಲಕ್ಷಣಗಳ ಬಗ್ಗೆ ಮಾಹಿತಿಯನ್ನು ನೀಡಿದರು.
ಅದು ಬರದಂತೆ ಜನ ಯಾವ ರೀತಿ ಕ್ರಮಗಳನ್ನು ಅನುಸರಿಸಬೇಕು ಹಾಗೂ ಬಂದ ಮೇಲೆ ಯಾವ ರೀತಿಯಲ್ಲಿ ಚಿಕಿತ್ಸೆಯನ್ನು ಪಡೆಯಬೇಕು ಎಂಬುದರ ಬಗ್ಗೆ ಮಾಹಿತಿಯನ್ನು ಒದಗಿಸಿದರು.
ಪದೇ ಪದೇ ಕೆಮ್ಮು , ಜ್ವರ ಹೆಚ್ಚಾಗಿ ಕಾಣಿಸಿಕೊಂಡರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡದೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಿ ಹಾಗೂ ಮನೆಗಳಲ್ಲಿ ಶುಚಿತ್ವವನ್ನು ಕಾಪಾಡಿಕೊಂಡು ಕೆಮ್ಮುವ ಸಂದರ್ಭಗಳಲ್ಲಿ ಕರವಸ್ತ್ರಗಳನ್ನು ಬಳಸಿ, ಇದಕ್ಕೆ ಯಾವುದೇ ಔಷಧಿಗಳನ್ನು ಕಂಡುಹಿಡಿದಿಲ್ಲವಾದರೂ ಮುನ್ನೆಚ್ಚರಿಕೆ ಕ್ರಮಗಳಿಂದಷ್ಟೇ ತಡೆಗಟ್ಟಬಹುದಾಗಿದೆ ಎಂದು ಮಾಹಿತಿ ನೀಡಿದರು.