ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಿಂದ ಹಿಡಿದು, ಸಾವಿನ ಸಂಖ್ಯೆಯೂ ಏರುತ್ತಲೇ ಇದೆ. ಇಂದು ಒಂದೇ ದಿನ 87 ಜನ ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 842ಕ್ಕೆ ಏರಿಕೆಯಾಗಿದೆ. ನಾಲ್ಕು ಜನ ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. 2,496 ಹೊಸ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 44,077ಕ್ಕೆ ಏರಿಕೆಯಾಗಿದೆ. ಸದ್ಯ 17,390 ಮಂದಿ ಗುಣಮುಖರಾಗಿದ್ದು, 25,839 ಸಕ್ರಿಯ ಪ್ರಕರಣಗಳಿವೆ. 540 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರೋಗ್ಯ ಇಲಾಖೆಗೆ ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ:
ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಅರೆ ವೈದ್ಯಕೀಯ ಸಿಬ್ಬಂದಿ ಕೊರತೆ ಎದುರಾಗುತ್ತಿದೆ. ಅರೆ ವೈದ್ಯಕೀಯ ಸಿಬ್ಬಂದಿ ಪಾತ್ರ ಮುಖ್ಯವಿದ್ದು, ಗುತ್ತಿಗೆ- ಹೊರಗುತ್ತಿಗೆ ಮೂಲಕ ಭರ್ತಿ ಮಾಡುವಂತೆ ಸೂಚಿಸಲಾಗಿದೆ. ಶುಶ್ರೂಷಕರು-1419, ಲ್ಯಾಬ್ ಟೆಕ್ನಿಷಿಯನ್-506, ಫಾರ್ಮಾಸಿಸ್ಟ್ 906 ಹಾಗೂ ಗ್ರೂಪ್ ಡಿ ಹುದ್ದೆಗಳು ಖಾಲಿ ಇವೆ. ಸಮರ್ಪಕ ವೈದ್ಯಕೀಯ ಸೇವೆಯನ್ನು ಒದಗಿಸಲು ಅನುಕೂಲವಾಗುವಂತೆ ಇಲಾಖೆಯಲ್ಲಿ ಖಾಲಿ ಇರುವ ಮೇಲಿನ ಹುದ್ದೆಗಳನ್ನ ತಾತ್ಕಾಲಿಕವಾಗಿ ಆರು ತಿಂಗಳ ಮಟ್ಟಿಗೆ ಅಥವಾ ನೇರ ನೇಮಕಾತಿ ಮುಖೇನ ಭರ್ತಿ ಮಾಡುವಂತೆ ಆದೇಶಿಸಲಾಗಿದೆ.