ಬೆಂಗಳೂರು: ಈಶ್ವರಪ್ಪ ವಿರುದ್ಧದ ಹೋರಾಟವನ್ನು ದೊಡ್ಡಮಟ್ಟದಲ್ಲಿ ಮಾಡಬೇಕಾದ ಅನಿವಾರ್ಯತೆ ಇದ್ದರೂ, ಕೋರ್ಟ್ ನಿರ್ಬಂಧವಿದೆ. ಆದರೂ ದೇಶ ಹಾಗೂ ರಾಜ್ಯಕ್ಕೆ ನ್ಯಾಯ ಒದಗಿಸಿ, ಭ್ರಷ್ಟ ಬಿಜೆಪಿ ಸರ್ಕಾರವನ್ನು ಜನರು ಕಿತ್ತೊಗೆಯಬೇಕಿದೆ. ಹೀಗಾಗಿ ಜನರಲ್ಲಿ ಜಾಗೃತಿ ಮೂಡಿಸುವುದು ನಮ್ಮ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಸಂಸ್ಥೆಗಳು ಸಂವಿಧಾನದ ಧ್ಯೇಯೋದ್ದೇಶದಂತೆ ಆಡಳಿತ ನಡೆಸಬೇಕು ಎಂದರು. ಇನ್ನು, ಬಿಜೆಪಿ ಹಾಗೂ ಅದರ ಸರ್ಕಾರದ ಹಿರಿಯ ಸಚಿವ ಈಶ್ವರಪ್ಪನವರು ಸಂತೋಷ್ ಕೆ.ಪಾಟೀಲ್ ಸಾವಿಗೆ ಕಾರಣರಾಗಿದ್ದಾರೆ. ಈ ಬಗ್ಗೆ ಮೃತ ಸಂತೋಷ್ ಅವರೇ ತಿಳಿಸಿದ್ದಾರೆ ಎಂದರು.
ಇದನ್ನೂ ಓದಿ:ಗುತ್ತಿಗೆದಾರ ಆತ್ಮಹತ್ಯೆ ಕೇಸ್... ಈಶ್ವರಪ್ಪ ವಜಾಕ್ಕೆ ಆಗ್ರಹಿಸಿ ಅಹೋರಾತ್ರಿ ಧರಣಿಗೆ ಕಾಂಗ್ರೆಸ್ ನಿರ್ಧಾರ
ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮಾತನಾಡಿ, ಸಂವಿಧಾನದ ಹೆಸರಲ್ಲಿ ಪ್ರಮಾಣ ಮಾಡಿದ ಸಚಿವ ಕೊಲೆ ಆರೋಪ ಹೊತ್ತುಕೊಂಡಾಗ ಅಧಿಕಾರದಲ್ಲಿ ಮುಂದುವರಿಯಲು ಹೇಗೆ ಸಾಧ್ಯ? ಸಂವಿಧಾನದಲ್ಲಿ ಇದಕ್ಕೆ ಎಲ್ಲಿ ಅವಕಾಶ ಕಲ್ಪಿಸಿದೆ? ಅವರನ್ನು ಬಂಧಿಸಿ, ಜೈಲಿಗೆ ಹಾಕದಿರಲು ಹೇಗೆ ಸಾಧ್ಯ? ಎಂದರು.