ಕೆ.ಆರ್.ಪುರ: ಮಕರ ಸಂಕ್ರಾಂತಿ ಹಬ್ಬದ ಹೆಸರಿನಲ್ಲಿ ಹೂವು, ಹಣ್ಣು ಹಾಗು ಇತರೆ ಸಾಮಗ್ರಿ ಖರೀದಿಸಲು ಮಾರುಕಟ್ಟೆಗೆ ಮುಗಿಬಿದ್ದ ಜನರು ಮಾಸ್ಕ್, ಸಾಮಾಜಿಕ ಅಂತರ ಮರೆತು ಕೊರೊನಾ ನಿಯಮ ಉಲ್ಲಂಘಿಸಿದರು.
ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದಂತೆ 2ನೇ ವಾರವೂ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಇಂದು ರಾತ್ರಿ 10 ಗಂಟೆಯಿಂದ ಸೋಮವಾರ ಮುಂಜಾನೆ 5ಗಂಟೆವರೆಗೂ ನಿರ್ಬಂಧಗಳು ಜಾರಿಯಲ್ಲಿರಲಿದೆ.
ಮಾರುಕಟ್ಟೆಯಿಂದ ಕೂಗಳತೆ ದೂರದಲ್ಲಿ ಬಿಬಿಎಂಪಿ ಕಚೇರಿ ಇದ್ದು, ಅಧಿಕಾರಿಗಳು ಇತ್ತ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ.
ಇದನ್ನು ಓದಿ: ಕಡ್ಡಾಯ ಗ್ರಾಮೀಣ ಸೇವೆ ಪ್ರಶ್ನಿಸಿ ಅರ್ಜಿ: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್ ನೋಟಿಸ್