ಯಲಹಂಕ: ವಿಶೇಷಚೇತನ ವ್ಯಕ್ತಿಯೊಬ್ಬ ಅಪಘಾತದಿಂದ ಗಾಯಗೊಂಡು ಬಿದ್ದು ಒದ್ದಾಡುತ್ತಿದ್ದರೂ ಕೂಡ ಕೊರೊನಾ ಭಯದಿಂದ ಜನರು ರಕ್ಷಣೆಗೆ ಮುಂದಾಗದೆ ಅಸಹಾಯಕರಂತೆ ನೋಡುತ್ತ ನಿಂತ ಘಟನೆ ಬೆಂಗಳೂರು ಉತ್ತರ ತಾಲೂಕಿನ ಯಲಹಂಕ ಬಳಿಯ ರಾಜಾನುಕುಂಟೆ ಬಳಿ ನಡೆದಿದೆ. ಘಟನೆಯಲ್ಲಿ ವಿಶೇಷಚೇತನ ರಾಜು (40) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ವ್ಯಕ್ತಿಯು ಬೆಂಗಳೂರಿನ ಶ್ರೀರಾಂಪುರ ನಿವಾಸಿ ಎಂದು ತಿಳಿದುಬಂದಿದೆ. ವಿಶೇಷಚೇತನರ ಗಾಡಿಯಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸಲೆಂದು ಬಂದಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಅಪಘಾತದಿಂದ ತೀವ್ರ ಗಾಯಗೊಂಡು ರಕ್ತದ ಮಡುವಿನಲ್ಲಿ ನರಳಾಡುತ್ತಿದ್ಧರೂ ಜನರು ಯಾರೂ ಸಹಾಯಕ್ಕೆ ಬಂದಿಲ್ಲ.
ಕೊರೊನಾ ಭಯವೇ ಜನರು ಸಹಾಯಕ್ಕೆ ಹಿಂದೇಟು ಹಾಕಲು ಕಾರಣ ಎನ್ನಲಾಗಿದ್ದು, ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಇದನ್ನೂ ಓದಿ: ಮುಂಜಾಗೃತೆಯಿಂದ ಸೋಂಕಿತರಿಗೆ ಸಹಾಯ ಮಾಡಲು ಇಲ್ಲಿವೆ 9 ಮಾರ್ಗಗಳು...