ಬೆಂಗಳೂರು: ರಾಜ್ಯದಲ್ಲಿಂದು 1,41,240 ಜನರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು, ಇದರಲ್ಲಿ 24,172 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 38,09,467 ಏರಿಕೆ ಆಗಿದೆ.
30,869 ಸೋಂಕಿತರು ಗುಣಮುಖರಾಗಿದ್ದು, ಈ ತನಕ 35,26,108 ಡಿಸ್ಚಾರ್ಜ್ ಆಗಿದ್ದಾರೆ. 56 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 38,998 ಕ್ಕೆ ಏರಿಕೆ ಕಂಡಿದೆ. ಸದ್ಯ ಸಕ್ರಿಯ ಪ್ರಕರಣಗಳು 2,44,331 ರಷ್ಟಿದೆ.
ಇವತ್ತಿನ ಪಾಸಿಟಿವ್ ರೇಟು 17.11% ರಷ್ಟಿದ್ದರೆ, ಡೆತ್ ರೇಟ್ 0.23% ರಷ್ಟಿದೆ. ವಿಮಾನ ನಿಲ್ದಾಣದಲ್ಲಿ 1,102 ಪ್ರಯಾಣಿಕರು ತಪಾಸಣೆಗೆ ಒಳಪಟ್ಟಿದ್ದಾರೆ. 602 ವಿದೇಶಿಗರು ಹೈ ರಿಸ್ಕ್ ದೇಶಗಳಿಂದ ಆಗಮಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ 10,692 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 17,20,890 ಕ್ಕೆ ಏರಿದೆ. 8813 ಜನರು ಡಿಸ್ಚಾರ್ಜ್ ಆಗಿದ್ದು, 15,70,258 ಗುಣಮುಖರಾಗಿದ್ದಾರೆ. 12 ಸೋಂಕಿತರು ಮೃತಪಟ್ಟಿದ್ದರೆ, ಸಾವಿನ ಸಂಖ್ಯೆ 16,593ಕ್ಕೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,34,038 ರಷ್ಟಿದೆ.
ರೂಪಾಂತರಿ ವೈರಸ್ ಅಪಡೇಟ್ಸ್:
- ಅಲ್ಪಾ- 156
- ಬೀಟಾ-08
- ಡೆಲ್ಟಾ ಸಬ್ ಲೈನೇಜ್- 4431
- ಇತರೆ- 286
- ಒಮಿಕ್ರಾನ್-1115
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ