ETV Bharat / state

ಸಿದ್ದರಾಮಯ್ಯ ಸಿಎಂ ಆಗ್ಬೇಕೆನ್ನುವುದು ಜನರ ಅಭಿಪ್ರಾಯ: ಜಮೀರ್ ಅಹಮದ್

ಸಿದ್ದರಾಮಯ್ಯ ಸಿಎಂ ಆಗಲಿ ಎಂಬುದು ಜ‌ನರು ಮತ್ತು ನನ್ನ ವೈಯಕ್ತಿಕ ಅಭಿಪ್ರಾಯ ಕೂಡ ಹೌದು. ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರಾಗಬೇಕು ಎಂಬುದನ್ನು ನಿರ್ಧರಿಸುತ್ತೆ. ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗೋದಿಲ್ಲ ಎಂದು ಶಾಸಕ ಜಮೀರ್ ಅಹಮದ್ ತಿಳಿಸಿದ್ದಾರೆ.

Jameer Ahmed
ಜಮೀರ್ ಅಹಮದ್
author img

By

Published : Oct 29, 2020, 12:44 PM IST

Updated : Oct 29, 2020, 12:53 PM IST

ಬೆಂಗಳೂರು: ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜ‌ನರ ಅಭಿಪ್ರಾಯವನ್ನು ನಾನು ಹೇಳಿದ್ದೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಕೂಡ ಹೌದು ಎಂದು ಶಾಸಕ ಜಮೀರ್ ಅಹಮದ್ ತಿಳಿಸಿದ್ದಾರೆ.

ಆರ್.​ಆರ್.ನಗರ ವಿಧಾನಸಭಾ ಕ್ಷೇತ್ರದ ಯಶವಂತಪುರ ವಾರ್ಡ್​​ನಲ್ಲಿ ರೋಡ್ ಶೋಗೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ಸಿಎಂ ಯಾರಾಗಬೇಕು ಎಂಬುದನ್ನು ನಿರ್ಧರಿಸುತ್ತದೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ ಪಕ್ಷ ವಿರೋಧಿ ಚಟುವಟಿಕೆ ಆಗೋದಿಲ್ಲ. ನನಗೆ ಶಿಸ್ತು ಕ್ರಮದ ನೋಟಿಸ್ ಕೊಟ್ಟರೆ ಅದಕ್ಕೆ ಉತ್ತರಿಸುತ್ತೇನೆ ಎಂದು ತಿಳಿಸಿದರು.

ಶಾಸಕ ಜಮೀರ್ ಅಹಮದ್

ಉಪಚುನಾವಣೆ ಬಳಿಕ ರಾಜ್ಯ ರಾಜಕೀಯ ಬದಲಾವಣೆ ಆಗಬಹುದು, ಚುನಾವಣೆ ಬರಬಹುದು. ಬಿಜೆಪಿಯಲ್ಲಿ ಆಗುತ್ತಿರುವ ಬೆಳವಣಿಗೆಯನ್ನು ಗಮನಿಸಿದ್ರೆ ಚುನಾವಣೆ ಬರುವ ಸಾಧ್ಯತೆ ಕಂಡು ಬರುತ್ತಿದೆ ಎಂದರು. ಕೇಂದ್ರದಲ್ಲಿ ಮೋದಿ ಸರ್ಕಾರ ಏನೂ ಮಾಡಿಲ್ಲ, ಬಿಜೆಪಿಯವರಿಗೆ ಸೋಲಿನ ಭಯವಿದ್ದು, ನಮ್ಮ ಪ್ರಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈಗಷ್ಟೇ ನಾನು ಆರ್​​ಆರ್ ನಗರದಲ್ಲಿ ಮತ ಪ್ರಚಾರ ಆರಂಭಿಸುತ್ತಿದ್ದು, ಅಭ್ಯರ್ಥಿ ಕುಸುಮಾ ಪರ ಜನಾಭಿಪ್ರಾಯ ಕೇಳಿ ಬರುತ್ತಿದೆ. ಹಾಗಾಗಿ ಅವರ ಗೆಲುವು ಖಚಿತ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Last Updated : Oct 29, 2020, 12:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.