ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನು ರದ್ದು ಮಾಡುವಂತೆ ಮಾಜಿ ಸ್ಪೀಕರ್ ಕೆ.ಬಿ ಬೋಪಯ್ಯ ಸಿಎಂ ಬಿ ಎಸ್ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.
ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಣೆಗೆ ಜನರ ವಿರೋಧವಿದೆ. ಕೊಡಗು ಜಿಲ್ಲೆಯಲ್ಲಿ ಜನರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ, ಅನೇಕ ಸಾವುಗಳು ಸಂಭವಿಸಿದ್ದು, ಸಾರ್ವಜನಿಕ ಸರ್ಕಾರಿ ಆಸ್ತಿಗೆ ಹಾನಿಯಾಗಿದೆ, ಆದ್ದರಿಂದ ಟಿಪ್ಪು ಜಯಂತಿಯನ್ನ ಸರ್ಕಾರಿ ಆಚರಣೆಯಿಂದ ರದ್ದು ಮಾಡಬೇಕೆಂದು ಪತ್ರದ ಮೂಲಕ ಬೋಪಯ್ಯ ಒತ್ತಾಯಿಸಿದ್ದಾರೆ.
![K G Bopayya](https://etvbharatimages.akamaized.net/etvbharat/prod-images/3987068_tippu.jpg)
ನವೆಂಬರ್ 10 ರಂದು ನಡೆಯುವ ಟಿಪ್ಪು ಜಯಂತಿ ಆಚರಣೆ ಬಿಜೆಪಿ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದು ಇದಕ್ಕೆ ಸರ್ಕಾರವೂ ಸ್ಪಂದಿಸಿದೆ. ಇದೇ ವೇಳೆ, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನೂ ರದ್ದು ಪಡಿಸಿ ಆದೇಶ ಹೊರಡಿಸಿದೆ.