ETV Bharat / state

ರೈತರ ಬೇಡಿಕೆ ಮೇರೆಗೆ ತುಂಗಭದ್ರಾದಿಂದ 5,575 ಕ್ಯೂಸೆಕ್​ ನೀರು ಹರಿಸಲು ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್ - ತುಂಗಭದ್ರಾ ಸಲಹಾ ಸಮಿತಿ

''ರೈತರ ಬೇಡಿಕೆ ಅನ್ವಯ ತುಂಗಭದ್ರಾ ಡ್ಯಾಂನಿಂದ 5,575 ಕ್ಯೂಸೆಕ್​ ನೀರು ಹರಿಸಲು ಅನುಮತಿ ಕೊಡಲಾಗಿದೆ'' ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾಹಿತಿ ನೀಡಿದರು.

DCM D K Shivakumar
ಡಿಸಿಎಂ ಡಿ.ಕೆ. ಶಿವಕುಮಾರ್
author img

By

Published : Aug 3, 2023, 4:08 PM IST

ದೆಹಲಿ/ಬೆಂಗಳೂರು: ''ರೈತರ ಬೇಡಿಕೆ, ಜಿಲ್ಲಾ ಸಚಿವರ ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5,575 ಕ್ಯೂಸೆಕ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ'' ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿ ಕರ್ನಾಟಕ ಭವನದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಅವರು, ''ದಕ್ಷಿಣ ಕರ್ನಾಟಕಕ್ಕಿಂತ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ತುಂಗಭದ್ರಾ ಡ್ಯಾಂ ಮೂಲಕ ನೀರು ಹರಿಸಲು ಬಹಳ ಒತ್ತಡ ಬಂದಿದೆ. ಜಿಲ್ಲಾ ಸಚಿವರು, ಶಾಸಕರು ನೀರು ಹರಿಸುವಂತೆ ಕೇಳುತ್ತಿದ್ದಾರೆ. ಇಲ್ಲಿ 105 ಟಿಎಂಸಿ ಶೇಖರಣಾ ಸಾಮರ್ಥ್ಯವಿದೆ. ಈಗಾಗಲೇ 83 ಟಿಎಂಸಿ ನೀರಿದೆ. ರೈತರಿಂದ ಬಹಳ ಬೇಡಿಕೆ ಇರುವ ಕಾರಣ 5,575 ಕ್ಯೂಸೆಕ್ ನೀರನ್ನು ಹರಿಸಲು ಅನುಮತಿ ನೀಡಲಾಗಿದೆ. ಟಿಎಲ್ ಬಿಸಿಗೆ ಸುಮಾರು 1,300ರಿಂದ 1,500 ಕ್ಯೂಸೆಕ್​, ಆರ್​ಬಿಎಲ್​ಸಿಯಲ್ಲಿ 1,200 ಕ್ಯೂಸೆಕ್, ಆರ್​ಎಚ್​ಬಿಎಲ್​ಸಿಗೆ 1,375 ಕ್ಯೂಸೆಕ್ ನೀರು ನೀಡಬೇಕಾಗಿದೆ. ಇದರ ಜತೆಗೆ ಆಂಧ್ರ ಪ್ರದೇಶದ ಪಾಲಿನ ನೀರನ್ನು ಬಿಡಬೇಕಾಗಿದ್ದು, ಒಟ್ಟು 5,575 ಕ್ಯೂಸೆಕ್ ನೀರು ಹರಿಸಲು ಅನುಮತಿ ನೀಡಲಾಗಿದೆ. ಆ ಮೂಲಕ ರೈತರ ಬೇಡಿಕೆಗೆ ಸ್ಪಂದಿಸಿದ್ದೇವೆ'' ಎಂದು ತಿಳಿಸಿದರು.

ಸಚಿವ ತಂಗಡಗಿ ನೇತೃತ್ವದಲ್ಲಿ ತುಂಗಭದ್ರಾ ಸಲಹಾ ಸಮಿತಿ: ತುಂಗಭದ್ರಾ ಸಲಹಾ ಸಮಿತಿಗೆ ಸಚಿವ ಶಿವರಾಜ್ ತಂಗಡಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇವರ ಅಧ್ಯಕ್ಷತೆಯಲ್ಲಿ ತುಂಗಭದ್ರಾ ಸಲಹಾ ಸಮಿತಿ ಸಭೆ ಮಾಡಿ, ರೈತರ ಬೆಳೆಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವ, ಯಾವ ಕಾಲಕ್ಕೆ ಎಷ್ಟು ನೀರು ಬಿಡಬೇಕು ಎಂಬುದನ್ನು ತೀರ್ಮಾನ ಮಾಡಲಾಗುವುದು ಎಂದು ಅವರು ತಿಳಿಸಿದರು.

ನೀರು ಹಂಚಿಕೆ ವಿವಾದ ಬಗೆಹರಿಸಲು ಪ್ರಯತ್ನ: ''ನೀರು ಹಂಚಿಕೆ ವಿವಾದ ಸಂಬಂಧ ಕಾನೂನು ತಜ್ಞರ ಜೊತೆ ಸಭೆ ಮಾಡಲಾಗಿದೆ. ಈವರೆಗೂ ನಾವು ಅಂತಿಮ ನಿರ್ಣಯಕ್ಕೆ ಬಂದಿಲ್ಲ. ಮಹದಾಯಿ, ಕಾವೇರಿ, ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಮೇಕೆದಾಟು ಯೋಜನೆ ವಿಚಾರವಾಗಿ ಮಾಹಿತಿ ಪಡೆದಿದ್ದೇನೆ. ಉಳಿದ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ, ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಉಳಿದ ನಿರ್ದೇಶನ ನೀಡಲಾಗುವುದು. ನಮಗೆ ಸಮಯ ವ್ಯರ್ಥ ಮಾಡಲು ಇಷ್ಟವಿಲ್ಲ. ಆದಷ್ಟು ಬೇಗ ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ'' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಇದನ್ನೂ ಓದಿ: ಭ್ರಷ್ಟ ಬಿಜೆಪಿ ಮಾಡಿದ್ದ ಅವ್ಯವಸ್ಥೆಯನ್ನು ಸರಿಪಡಿಸುವ ಕೆಲಸ ಜಾರಿಯಲ್ಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.