ಬೆಂಗಳೂರು : ಕೊವೀಡ್-19 ಹಿನ್ನೆಲೆಯಲ್ಲಿ ಮುಚ್ಚಿದ್ದ ಸಾರ್ವಜನಿಕ ಗ್ರಂಥಾಲಯಗಳನ್ನು ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಇತರೆಡೆ ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
![Permission to open a public library other than the containment zone](https://etvbharatimages.akamaized.net/etvbharat/prod-images/kn-bng-04-government-order-script-7208083_11092020205141_1109f_1599837701_202.jpg)
ಕಂಟೈನ್ಮೆಂಟ್ ವಲಯದಲ್ಲಿನ ಸಾರ್ವಜನಿಕ ಗ್ರಂಥಾಲಯಗಳನ್ನು ತೆರೆಯದಂತೆ ಸೂಚನೆ ನೀಡಲಾಗಿದೆ. ಉಳಿದ ವಲಯದಲ್ಲಿ ಸಾರ್ವಜನಿಕ ಗ್ರಂಥಾಲಯಗಳ ಸೇವೆಯನ್ನು ಸಾರ್ವಜನಿಕರಿಗೆ ಒದಗಿಸಬೇಕು. ಕೊರೊನಾ ಸೋಂಕು ನಿಯಂತ್ರಣ ಮಾಡುವ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು. ಗ್ರಂಥಾಲಯ ಪ್ರವೇಶಿಸುವವರನ್ನು ಥರ್ಮಲ್ ಸ್ಕ್ಯಾನಿಂಗ್ ತಪಾಸಣೆ ನಡೆಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.
![Permission to open a public library other than the containment zone](https://etvbharatimages.akamaized.net/etvbharat/prod-images/kn-bng-04-government-order-script-7208083_11092020205141_1109f_1599837701_732.jpg)
ಕಂಟೈನ್ಮೆಂಟ್ ವಲಯಗಳನ್ನು ಹೊರತುಪಡಿಸಿ ಇತರೆ ಕಡೆಗಳಲ್ಲಿ ಆರ್ಥಿಕ ಚಟುವಟಿಕೆ ಸೇರಿದಂತೆ ಇತರೆ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಕೇಂದ್ರ ಸರ್ಕಾರದ ಸೂಚನೆ ಮೇರೆಗೆ ಅನ್ಲಾಕ್ 4.0 ಜಾರಿಗೊಳಿಸಿ ಕ್ರಮ ಕೈಗೊಳ್ಳಲಾಗುತ್ತಿದೆ. ಕಂಟೈನ್ಮೆಂಟ್ ವಲಯದಲ್ಲಿ ಸೆ.30 ರವರೆಗೆ ಮಾರ್ಗಸೂಚಿ ಮುಂದುವರಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.