ಬೆಂಗಳೂರು: ಬಂದ್ ಆಗಿದ್ದ ಅಂಗಡಿಗೆ ಪೆಟ್ರೋಲ್ ಹಾಕಿ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.
ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪರಮೇಶ್ ಎಂಬುವವರಿಗೆ ಸೇರಿದ ಕಾಂಡಿಮೆಂಟ್ಸ್ಗೆ ಬೆಂಕಿ ಇಡಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತಾದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.
ಘಟನಾ ಸ್ಥಳಕ್ಕೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದಾರೆ. ಹೊರಭಾಗದಲ್ಲಿ ಬೆಂಕಿ ಹಚ್ಚಿರುವುದರಿಂದ ಕೇವಲ ಭಯ ಹುಟ್ಟಿಸುವ ಪ್ರಯತ್ನವಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ: Shocking Video: ಕದ್ದ ಫೋನ್ ಜೊತೆ ಮಹಿಳೆಯನ್ನೂ ರಸ್ತೆಯಲ್ಲಿ ಎಳೆದೊಯ್ದು ಬಿಸಾಡಿದ ದುರುಳರು!