ಬೆಂಗಳೂರು: ನೂರಕ್ಕೂ ಅಧಿಕ ಬಾರಿ ಸಂಚಾರಿ ನಿಯಮ ಉಲ್ಲಂಘಿಸಿದ್ದ ವಾಹನ ಸವಾರನಿಗೆ ದಂಡ ಹಾಕುವ ಮೂಲಕ ಆಡುಗೋಡಿ ಸಂಚಾರಿ ಪೊಲೀಸರು ಬುದ್ಧಿ ಕಲಿಸಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ರಾಜೇಶ್ ಎಂಬಾತ ಎಂದಿನಂತೆ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಚಲಾಯಿಸುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಈ ವೇಳೆ ತಪಾಸಣೆ ನಡೆಸಿದಾಗ ಸಿಗ್ನಲ್ ಜಂಪ್, ಹೆಲ್ಮೆಟ್ ಧರಿಸದೆ ಸಂಚಾರ, ಒನ್ ವೇ ಹೀಗೆ ಸುಮಾರು 103 ಬಾರಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿರುವುದು ಕಂಡುಬಂದಿದೆ. ಈ ಬಗ್ಗೆ ಪೊಲೀಸರು ಕ್ರಮ ಜರುಗಿಸಿದ್ದಾರೆ.
ಹೀಗೆ ನೂರಕ್ಕೂ ಅಧಿಕ ಬಾರಿ ನಿಮಯ ಉಲ್ಲಂಘಿಸಿದ್ದರಿಂದ ಪೊಲೀಸರು, 103 ಪ್ರಕರಣಗಳಿಗೆ 58,200 ರೂ. ದಂಡ ಕಟ್ಟಿಸಿಕೊಂಡಿದ್ದಾರೆ.