ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಜಿಗಣಿ ಬಳಿಯ ಕಲ್ಲುಬಾಳು ಬಳಿ ನಡೆದಿದೆ.
ರಮೇಶ್(45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎನ್ನಲಾಗಿದೆ. ಕಾಂಕ್ರೀಟ್ ಛಾವಣಿ ಕೆಲಸ ಮಾಡುತ್ತಿದ್ದ ಈತ ರಾಯಚೂರಿನ ಮಾನ್ವಿ ತಾಲೂಕಿನ ನೀರಮಾನ್ವಿ ಗ್ರಾಮದವನು ಎಂದು ತಿಳಿದು ಬಂದಿದೆ. ತನ್ನ ಕುಟುಂಬದ ಜೊತೆಗೆ ಜಿಗಣಿ ಬಳಿಯ ಕಲ್ಲುಬಾಳು ಬಳಿ ಶೆಡ್ನಲ್ಲಿ ವಾಸವಿದ್ದ.
ಇಂದು ಬೆಳಗಿನ ಜಾವ ಜಾಹೀರಾತು ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.