ದೇವನಹಳ್ಳಿ: ಏರ್ಪೋರ್ಟ್ನಲ್ಲಿ ಬಾಂಬ್ ಹಾಕುವುದಾಗಿ ಬೆದರಿಕೆ ಟ್ವೀಟ್ ಮಾಡಿದ ವ್ಯಕ್ತಿಯನ್ನ ಈಶಾನ್ಯ ವಿಭಾಗದ ಸೈಬರ್ ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ, ಕೃತ್ಯಕ್ಕೆ ಬಳಸಿದ್ದ ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಬೆಂಗಳೂರಿನ ಕೊಡ್ಲು ಗೇಟ್ ನಿವಾಸಿ ವೈಭವ್ ಗಣೇಶ್ (20) ಬಂಧಿತ ಆರೋಪಿ.
ಈತ ಡಿ. 10ರಂದು ಆರೋಪಿ ತನ್ನ ಟ್ವಿಟರ್ ಖಾತೆಯಲ್ಲಿ ನಾನು ಬೆಂಗಳೂರು ಏರ್ಪೋರ್ಟ್ಗೆ ಬಾಂಬ್ ಹಾಕುತ್ತೇನೆ ಎಂದು ಇಂಗ್ಲಿಷ್ನಲ್ಲಿ ಟ್ವೀಟ್ ಮಾಡಿದ್ದ. ಈ ಟ್ವೀಟ್ ಅನ್ನು ಬೆಂಗಳೂರು ವಿಮಾನ ನಿಲ್ದಾಣದ ಅಧಿಕೃತ ಟ್ವಿಟರ್ ಖಾತೆಗೂ ಟ್ಯಾಗ್ ಮಾಡಿದ್ದನು.
ಬಾಂಬ್ ಬೆದರಿಕೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಏರ್ ಪೋರ್ಟ್ ಮ್ಯಾನೇಜರ್ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ಕುರಿತು ಸೈಬರ್ ಕ್ರೈಮ್ ಪೊಲೀಸರ ಸಹಯೋಗದೊಂದಿಗೆ ಸಿಟಿ ಪೊಲೀಸರು ತನಿಖೆ ಆರಂಭಿಸಿದ್ದರು. ಬಾಂಬ್ ಬೆದರಿಕೆ ಹಾಕಿದ ಆರೋಪಿಯನ್ನು ಪೊಲೀಸರು ಪತ್ತೆ ಮಾಡಿ ಬಂಧಿಸಿದ್ದಾರೆ.
ಇದನ್ನೂ ಓದಿ: ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಟ್ವೀಟ್