ETV Bharat / state

ಹೆಂಡತಿಗೆ 25 ಸಾವಿರ ಪರಿಹಾರ ನೀಡಲು ನಿರಾಕರಣೆ: ಪತಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಹೈಕೋರ್ಟ್​ - ಹೈಕೋರ್ಟ್ ಅಭಿಪ್ರಾಯ

ನ್ಯಾಯಮೂರ್ತಿ ಕೃಷ್ಣ ಎಸ್​ ಧೀಕ್ಷಿತ್​ ಅವರಿದ್ದ ಪೀಠ ಅರ್ಜಿ ವಜಾಗೊಳಿಸಿ, ತೀರ್ಪು ನೀಡಿದೆ.

Highcourt
ಹೈಕೋರ್ಟ್​
author img

By

Published : Jul 29, 2023, 7:38 PM IST

ಬೆಂಗಳೂರು: ರಕ್ತಕ್ಕಿಂತ ರೊಟ್ಟಿ ಬೆಲೆ ಹೆಚ್ಚಾಗಿರುವ ಪ್ರಸ್ತುತ ದಿನಗಳಲ್ಲಿ ಇಬ್ಬರು ಮಕ್ಕಳು ಮತ್ತು ಹೆಂಡತಿಯ ನಿರ್ವಹಣೆಗೆ 25 ಸಾವಿರ ರೂ.ಗಳನ್ನು ನೀಡಲಾಗದು ಎಂಬ ವಾದವನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿ ಮತ್ತು ಇಬ್ಬರು ಮಕ್ಕಳ ಜೀವನ ನಿರ್ವಹಣೆಗಾಗಿ 25 ಸಾವಿರ ರೂ.ಗಳ ಪರಿಹಾರ ನೀಡುವಂತೆ ಆದೇಶಿಸಿದ್ದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬೆಂಗಳೂರಿನ ಮೊಹಮ್ಮದ್‌ ಅಮ್ಜದ್‌ ಪಾಷಾ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್​ ಧೀಕ್ಷಿತ್​ ಅವರಿದ್ದ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.

ಅಲ್ಲದೇ, ಪತಿಯಿಂದ ದೂರವಿರುವ ಪತ್ನಿ ಹಾಗೂ ಅಂಗವೈಕಲ್ಯಕ್ಕೆ ಗುರಿಯಾಗಿರುವ ಮಕ್ಕಳನ್ನು ನೋಡಿಕೊಳ್ಳುವುದು ಪತಿಯ ಜವಾಬ್ದಾರಿ ಎಂಬುದಾಗಿ ಪವಿತ್ರ ಕುರಾನ್‌ ಮತ್ತು ಹದಿತ್‌ ಹೇಳುತ್ತವೆ ಎಂದು ಅಭಿಪ್ರಾಯ ಪಟ್ಟು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ. ಪ್ರಸ್ತುತದ ಪ್ರಕರಣದಲ್ಲಿ ಸುಮಾರು 17 ವರ್ಷದ ಪುತ್ರಿ ಅಂಗವಿಕಲೆಯಾಗಿದ್ದು, 14 ವರ್ಷದ ಮತ್ತೊಬ್ಬ ಪುತ್ರಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವಲಂಬಿತರು ಅಲೆಮಾರಿಗಳಾಗದಿರಲಿ, ಇತರ ಅವಲಂಬಿತರಿಗೆ ಅದು ಶಿಕ್ಷೆಯಾಗದಿರಲಿ ಎಂಬ ಕಾರಣಕ್ಕೆ ಜೀವನಾಂಶಕ್ಕೆ ಆದೇಶಿಸಲಾಗುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಜತೆಗೆ, 25 ಸಾವಿರ ರೂ.ಗಳ ಪರಿಹಾರ ನೀಡುವಂತೆ ವಿಚಾರಣಾ ನ್ಯಾಯಾಲಯ ನೀಡಿರುವ ಆದೇಶನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅಲ್ಲದೇ, ಪ್ರಕರಣದಲ್ಲಿ ಪ್ರತಿವಾದಿಯಾಗಿರುವ ಪತ್ನಿಯು ಉದ್ಯೋಗದಲ್ಲಿದ್ದಾರೆ ಅಥವಾ ಆಕೆಗೆ ಬೇರೆ ಆದಾಯದ ಮೂಲ ಇದೆ ಎಂಬುದನ್ನು ಸಾಬೀತುಪಡಿಸುವುದಕ್ಕಾಗಿ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ. ಅಷ್ಟೇ ಅಲ್ಲದೆ, ಪತ್ನಿ ಮತ್ತು ಮಕ್ಕಳ ಉಸ್ತುವಾರಿ ನೋಡಿಕೊಳ್ಳುವ ಪ್ರಧಾನ ಕರ್ತವ್ಯ ಅರ್ಜಿದಾರರ ಹೆಗಲ ಮೇಲಿದೆ ಎಂದು ಪೀಠ ತಿಳಿಸಿದೆ.

ಮತ್ತೊಂದು ಪ್ರಕರಣ: ಮಗುವನ್ನು ಗಂಡನ ಸುಪರ್ದಿಗೆ ನೀಡುವಂತೆ ಸೂಚಿಸಿದ್ದ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ, ಪೊಲೀಸರ ಕಣ್ಣಿಗೆ ಮಣ್ಣೆರಚುತ್ತಿದ್ದ ಪತ್ನಿಯ ವಿರುದ್ಧ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದ್ದ ಘಟನೆ ಇತ್ತೀಚೆಗೆ ನಡೆದಿತ್ತು. ಹೈಕೋರ್ಟ್​ ಪತ್ನಿಗೆ 24 ಗಂಟೆಯೊಳಗೆ ಮಗುವನ್ನು ಪತಿಯ ಸುಪರ್ದಿಗೆ ಒಪ್ಪಿಸುವಂತೆ ಆದೇಶವನ್ನೂ ನೀಡಿತ್ತು.

ನ್ಯಾಯಾಲಯ ಹೇಳಿದಂತೆ ಮಗುವನ್ನು ತಮ್ಮ ಸುಪರ್ದಿಗೆ ಒಪ್ಪಿಸದೇ ಇದ್ದ ಪತ್ನಿಯ ವಿರುದ್ಧ ಪತಿ ಹೇಬಿಯಸ್​ ಕಾರ್ಪಸ್​ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಪೀಠ ಮಗುವನ್ನು ಪತಿಯ ಸುಪರ್ದಿಗೆ ಒಪ್ಪಿಸುವಂತೆ ಆದೇಶ ನೀಡಿತ್ತು. ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡದೇ ಇದ್ದ ಮಹಿಳೆಯ ವಿರುದ್ಧ ನ್ಯಾಯಾಲಯ ಸ್ವಯಂಪ್ರೇರಿತ ಕ್ರಿಮಿನಲ್​ ಹಾಗೂ ಸಿವಿಲ್​ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿತ್ತು.

ಇದನ್ನೂ ಓದಿ: ವಿಚ್ಚೇದನ ಪ್ರಕರಣಗಳನ್ನು ಒಂದು ವರ್ಷದಲ್ಲಿ ಇತ್ಯರ್ಥಪಡಿಸಲು ಹೈಕೋರ್ಟ್ ನಿರ್ದೇಶನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.