ETV Bharat / state

ಬೆಂಗಳೂರಲ್ಲಿ ಮೋದಿ ರೋಡ್​ ಶೋ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಬೆಂಗಳೂರಿನಲ್ಲಿ ನಾಳೆ ನಾಡಿದ್ದು ಚುನಾವಣೆಯ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್​ ಶೋ ನಿಗದಿಯಾಗಿದೆ. ಇದೀಗ ರೋಡ್​ ಶೋ ತಡೆ ಕೋರಿ ಹೈಕೋರ್ಟ್‌ನಲ್ಲಿ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದಾರೆ.

high court
ಹೈಕೋರ್ಟ್​
author img

By

Published : May 5, 2023, 3:26 PM IST

Updated : May 5, 2023, 4:12 PM IST

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರು ನಗರದಲ್ಲಿ ಶನಿವಾರ ಮತ್ತು ಭಾನುವಾರ ನಡೆಸಲು ಉದ್ದೇಶಿಸಿರುವ 37 ಕಿ.ಮೀ ರೋಡ್ ಶೋಗೆ ತಡೆ ನೀಡಲು ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ. ವಕೀಲ ಎನ್ ಪಿ ಅಮೃತೇಶ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ವಿಜಯ್‌ಕುಮಾರ್ ಎಸ್.ಪಾಟೀಲ್ ಅವರಿದ್ದ ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಲಿದೆ.

ಅರ್ಜಿಯಲ್ಲೇನಿದೆ?: ರಾಜ್ಯ ಬಿಜೆಪಿ ವತಿಯಿಂದ ರೋಡ್ ಶೋ ನಡೆಸುವುದಕ್ಕೆ ನೀಡಿರುವ ಅನುಮತಿ, ಸಂಚಾರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳಿಗೆ ಸಂಬಂಧಿಸಿದ ದಾಖಲೆ ಸಲ್ಲಿಸಲು ರಾಜ್ಯ ಸರ್ಕಾರ, ಪೊಲೀಸ್ ಮಹಾನಿರ್ದೇಶಕರು ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಬೆಂಗಳೂರಿನಲ್ಲಿ ರೋಡ್ ಶೋ ನಡೆಸಲು ಯಾವುದೇ ರಾಜಕೀಯ ಪಕ್ಷ ಅಥವಾ ಸಂಘಟನೆಗೆ ಅನುಮತಿ ನೀಡದಂತೆ ಪೊಲೀಸ್ ಮಹಾನಿರ್ದೇಶಕರಿಗೆ ಮತ್ತು ಬೆಂಗಳೂರು ಪೊಲೀಸ್ ಆಯುಕ್ತರಿಗೆ ನಿರ್ದೇಶಿಸಬೇಕು.

ರೋಡ್ ಶೋ ನಿರ್ಬಂಧ ಮತ್ತು ಫಲಿತಾಂಶ ಪ್ರಕಟವಾದ ಬಳಿಕ ವಿಜಯೋತ್ಸವ ನಡೆಸದಂತೆ ಸರ್ಕಾರ, ಪೊಲೀಸರು ಮತ್ತು ಚುನಾವಣಾ ಆಯೋಗಕ್ಕೆ ನಿರ್ದೇಶಿಸಬೇಕು. ಇದರಿಂದ ರಾಜಕೀಯ ಪಕ್ಷಗಳ ನಡುವಿನ ಕಿತ್ತಾಟಕ್ಕೆ ಅವಕಾಶವಿರುವುದಿಲ್ಲ. ಅಲ್ಲದೇ, ಸಮಾಜಘಾತುಕ ಶಕ್ತಿಗಳಿಂದ ಅಹಿತಕರ ಘಟನೆಗೆ ಅವಕಾಶ ಇರುವುದಿಲ್ಲ ಎಂದು ಅರ್ಜಿಯಲ್ಲಿ ಪ್ರಸ್ತಾಪಿಸಲಾಗಿದೆ.

ಬೆಂಗಳೂರಿನಲ್ಲಿ 37ಕಿ.ಮೀ ವ್ಯಾಪ್ತಿಯಲ್ಲಿ ಮೋದಿ ರೋಡ್ ಶೋ ನಡೆಸಲು ಉದ್ದೇಶಿಸಲಾಗಿದ್ದು, ಇದು ಮೂರು ಲೋಕಸಭಾ ಕ್ಷೇತ್ರಗಳನ್ನು ಒಳಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ರೋಡ್ ಶೋ ಆರಂಭವಾಗಲಿದ್ದು, 45 ವಿಧಾನಸಭಾ ಕ್ಷೇತ್ರಗಳನ್ನು ಇದು ಒಳಗೊಂಡಿದೆ. ಸಂಜೆ 4ಕ್ಕೆ ಮತ್ತೆ ರೋಡ್ ಶೋ ಆರಂಭವಾಗಲಿದ್ದು, 13 ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿದೆ.

ಬೆಂಗಳೂರಿನ ಪ್ರಮುಖ 18 ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ಹಾದು ಹೋಗಲಿದ್ದು, ಇಲ್ಲಿ ಹಲವು ವಾಣಿಜ್ಯ ಮತ್ತು ಜನವಸತಿ ಪ್ರದೇಶಗಳು ಇವೆ. ರೋಡ್ ಶೋನಲ್ಲಿ 10 ಲಕ್ಷಕ್ಕೂ ಹೆಚ್ಚು ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಸಂಸದ ಪಿ ಸಿ ಮೋಹನ್ ಹೇಳಿದ್ದಾರೆ.

ಇದರಿಂದ ಭಾರಿ ಸಂಚಾರ ದಟ್ಟಣೆ ಉಂಟಾಗಲಿದ್ದು, ಜನರು ಓಡಾಡಲು ಆಗದ ಪರಿಸ್ಥಿತಿ ನಿರ್ಮಾಣವಾಗಲಿದೆ. ಇದರಿಂದ ಉಂಟಾಗುವ ನಷ್ಟವನ್ನು ರಾಜಕೀಯ ಪಕ್ಷಗಳು ತುಂಬಿಕೊಡುವುದಿಲ್ಲ ಎಂದು ವಿವರಿಸಲಾಗಿದೆ. ಜೊತೆಗೆ, ಬೀದಿ ಬದಿ ವ್ಯಾಪಾರಿಗಳು, ಕೂಲಿ ಕಾರ್ಮಿಕರು, ಕಚೇರಿಗೆ ಹೋಗುವವರಿಗೆ ಭಾರಿ ಸಮಸ್ಯೆಯಾಗಲಿದೆ. ಹೀಗಾಗಿ ರೋಡ್ ಶೋ ನಿರ್ಬಂಧಿಸುವಂತೆ ಅವರು ಅರ್ಜಿಯಲ್ಲಿ ಕೋರಿದ್ದಾರೆ.

ಮೋದಿ ರೋಡ್​ ಶೋ ವಿರುದ್ಧ ಸ್ವಯಂಪ್ರೇರಿತ ಅರ್ಜಿ ದಾಖಲಿಸಲು ವಕೀಲ ಮನವಿ: ಬೆಂಗಳೂರಿನಲ್ಲಿ ರ‍್ಯಾಲಿ, ಮೆರವಣಿಗೆಗೆ ನಿರ್ಬಂಧ ಆದೇಶವಿದ್ದರೂ ಪ್ರಧಾನಿ ಮೋದಿ ರೋಡ್​ ಶೋಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ಅರ್ಜಿ ದಾಖಲಿಸಿಕೊಳ್ಳಬೇಕೆಂದು ವಕೀಲ ಜಿ.ಆರ್.ಮೋಹನ್ ಹೈಕೋರ್ಟ್​ಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ: 'ಬೆಂಗಳೂರಿನಲ್ಲಿ ಮೋದಿ ರ‍್ಯಾಲಿ ಹೈಕೋರ್ಟ್ ಆದೇಶಕ್ಕೆ ತದ್ವಿರುದ್ಧ': ಸ್ವಯಂಪ್ರೇರಿತ ಅರ್ಜಿ ದಾಖಲಿಸಲು ಮನವಿ

Last Updated : May 5, 2023, 4:12 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.