ETV Bharat / state

ಮಾರಾಟ ಮಾಡಿದ ಜಮೀನಿನ ಮೇಲೆ ಹಕ್ಕು ಸಾಧಿಸಲು ಅರ್ಜಿ: 20 ಸಾವಿರ ದಂಡ ವಿಧಿಸಿದ ಹೈಕೋರ್ಟ್ - karnataka high court

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಾಯಿದೆಯ ಅಡಿ 1980ರಲ್ಲಿ ಹೊರಡಿಸಿರುವ ಅಂತಿಮ ಅಧಿಸೂಚನೆ ರದ್ದತಿ ಕೋರಿದ್ದ ಅರ್ಜಿಯನ್ನು ಕರ್ನಾಟಕ ಉಚ್ಚ ನ್ಯಾಯಾಲಯವು ತಿರಸ್ಕರಿಸಿದೆ.

petition-to-assert-claim-on-sold-land-high-court-fined-20000
ಮಾರಾಟ ಮಾಡಿದ ಜಮೀನಿನಮೇಲೆ ಹಕ್ಕು ಸಾಧಿಸಲು ಅರ್ಜಿ: 20 ಸಾವಿರ ದಂಡ ವಿಧಿಸಿದ ಹೈಕೋರ್ಟ್
author img

By

Published : Mar 25, 2023, 6:10 PM IST

ಬೆಂಗಳೂರು: ಭೂಮಿ ಮಾರಾಟ ಮಾಡಿ ನಾಲ್ಕೂವರೆ ದಶಕಗಳು ಕಳೆದ ಬಳಿಕವೂ ಅದರ ಮೇಲಿನ ಹಕ್ಕು ಸಾಧಿಸುವುದಕ್ಕಾಗಿ ಪ್ರಕರಣ ದಾಖಲಿಸಿದ್ದ ಅರ್ಜಿ ರದ್ದುಗೊಳಿಸಿರುವ ಹೈಕೋರ್ಟ್, ಅರ್ಜಿದಾರರಿಗೆ 20 ಸಾವಿರ ರೂಪಾಯಿ ದಂಡ ವಿಧಿಸಿದೆ.

ತಮ್ಮ ಭೂಮಿಯ ಸ್ವಾಧೀನ ಸಂಬಂಧ 1980ರ ಸೆಪ್ಟೆಂಬರ್ 30ರಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಾಯಿದೆ ಸೆಕ್ಷನ್ 19 (1)ರ ಹೊರಡಿಸಿದ್ದ ಅಂತಿಮ ಅಧಿಸೂಚನೆಯನ್ನು ರದ್ದುಪಡಿಸುವಂತೆ ಕೋರಿ ಬೆಂಗಳೂರಿನ ಜೀವನಹಳ್ಳಿಯ ಎ.ರಾಮಮೂರ್ತಿ, ಎ.ಅಶ್ವಥ್​ಮೂರ್ತಿ ಮತ್ತು ಕೆ.ಉಮಾಶಂಕರ್ ಎಂಬುವರು ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಅರ್ಜಿ ವಿಚಾರಣೆ ನಡೆಸಿತು.

ಭೂಸ್ವಾಧೀನ, ಪುನರ್ವಸತಿ, ನ್ಯಾಯಯುತ ಪರಿಹಾರ ಮತ್ತು ಪಾರದರ್ಶಕತೆ ಕಾಯಿದೆಯ ಸೆಕ್ಷನ್ 24 (2) ರದ್ದಾಗಿರುವುದರಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಾಯಿದೆಯ ಅಡಿ 1980ರಲ್ಲಿ ಹೊರಡಿಸಿರುವ ಅಂತಿಮ ಅಧಿಸೂಚನೆ ರದ್ದತಿ ಕೋರಿದ್ದ ಅರ್ಜಿಯನ್ನು ನ್ಯಾಯಾಲಯವು ತಿರಸ್ಕರಿಸಿದೆ. ಭೂಮಿಯನ್ನು ವಿಳಂಬವಾಗಿ ಪರಿವರ್ತಿಸಿ, ಹಲವು ಮನೆ ನಿರ್ಮಿಸಿದ್ದು, ಸೈಟ್ ಪಡದಿರುವವರು ಸಲ್ಲಿಸಿರುವ ಮಧ್ಯಪ್ರವೇಶ ಅರ್ಜಿಗೆ ಅರ್ಜಿದಾರರು ಆಕ್ಷೇಪಣೆ ಸಲ್ಲಿಸಿಲ್ಲ. 94 ಕೊಳಗೇರಿ ನಿವಾಸಿಗಳಿಗೆ ಭೂಮಿಯ ಮಾಲೀಕರು ನಿವೇಶನ ಹಂಚಿಕೆ ಮಾಡುವ ವಿವಾದ ರಹಿತವಾಗಿತ್ತು.

ಅದಾಗ್ಯೂ, ಆಕ್ಷೇಪಾರ್ಹವಾದ ಭೂಮಿಯು ತಮ್ಮ ವಶದಲ್ಲಿದೆ ಎಂದು ಅರ್ಜಿದಾರರು ಹೇಳುತ್ತಿರುವುದು ನ್ಯಾಯಾಲಯಕ್ಕೆ ಹೇಳುತ್ತಿರುವ ಸುಳ್ಳಲ್ಲದೇ ಬೇರೇನು ಅಲ್ಲ ಎಂದು ಪೀಠವು ಆದೇಶದಲ್ಲಿ ಹೇಳಿದೆ. ನಾಲ್ಕು ದಶಕಗಳ ಹಿಂದೆಯೇ ಆಕ್ಷೇಪಾರ್ಹವಾದ ಭೂಮಿ ವಶಪಡಿಸಿಕೊಂಡು ಅದನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ವಹಿಸಲಾಗಿದೆ. ಇದು ಲೇಔಟ್ ಅಭಿವೃದ್ಧಿಪಡಿಸಿ, ಸಮಾಜದ ಕೆಳ ಸ್ಥಳದಲ್ಲಿರುವ ಸಮುದಾಯ 138 ಮಂದಿಗೆ ಇಲ್ಲಿ ನಿವೇಶನ/ಮನೆ ಹಂಚಿಕೆ ಮಾಡಿದೆ.

ಫಲಾನುಭವಿಗಳಿಗೆ ಮೊದಲನೇ ಅರ್ಜಿದಾರ ನಿವೇಶನ ಹಂಚಿಕೆ ಪತ್ರ ನೀಡಿರುವ ಚಿತ್ರ ಒದಗಿಸಲಾಗಿದೆ. ಇದನ್ನು ಅರ್ಜಿದಾರರು ನಿರಾಕರಿಸಿಲ್ಲ. ಅಲ್ಲದೇ, ನಿವೇಶನ ಪಡೆದಿರುವವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಏಕೆ ಮಾಡಿಲ್ಲ ಎಂಬುದಕ್ಕೆ ಅರ್ಜಿದಾರರು ಉತ್ತರಿಸಿಲ್ಲ. ಹೀಗಾಗಿ, ಅರ್ಜಿಯು ನಿರ್ವಹಣೆಗೆ ಅರ್ಹವಾಗಿಲ್ಲ ಎಂದಿರುವ ನ್ಯಾಯಾಲಯವು ಅರ್ಜಿದಾರರಿಗೆ 20 ಸಾವಿರ ರೂಪಾಯಿ ದಂಡ ವಿಧಿಸಿದ್ದು, ಆರು ವಾರಗಳಲ್ಲಿ ಅದನ್ನು ಪಾವತಿಸಬೇಕು. ಇದನ್ನು ಉಲ್ಲಂಘಿಸಿದರೆ ಪ್ರತಿ ವಾರ ಹೆಚ್ಚುವರಿಯಾಗಿ ಒಂದು ಸಾವಿರ ರೂಪಾಯಿ ದಂಡ ಪಾವತಿಸಬೇಕು ಎಂದು ಆದೇಶದಲ್ಲಿ ಹೇಳಿದೆ.

ಪ್ರಕರಣದ ಹಿನ್ನೆಲೆ ಏನು ?: 1978ರ ಜೂನ್ 2ರಂದು ಆಕ್ಷೇಪಾರ್ಹವಾದ ಭೂಮಿಯನ್ನು ಪ್ರಾಥಮಿಕ ಅಧಿಸೂಚನೆಯ ಮೂಲಕ ವಶಪಡಿಸಿಕೊಂಡಿದ್ದು, ಈ ಸಂಬಂಧ 1980ರಲ್ಲಿ ಸೆಕ್ಷನ್ 17 (1) ಮತ್ತು 19 (1)ರ ಅಡಿ ಅಂತಿಮ ಅಧಿಸೂಚನೆ ಹೊರಡಿಸಿ ಸರ್ಕಾರ ವಶಕ್ಕೆ ಪಡೆದಿತ್ತು. ಮೂರನೇ ಅರ್ಜಿದಾರ ಉಮಾಶಂಕರ್ ಅವರ ತಂದೆ ಎ.ಕೃಷ್ಣಮೂರ್ತಿ ಅವರಿಗೆ ನೋಟಿಸ್ ಸಹ ನೀಡಲಾಗಿದೆ.

1990ರ ಮೇ 30ರಂದು ಆಕ್ಷೇಪಾರ್ಹವಾದ ಭೂಮಿಯನ್ನು ವಶಕ್ಕೆ ಪಡೆಯಲಾಗಿದೆ. ಆಕ್ಷೇಪಾರ್ಹವಾದ ಭೂಮಿ ಮತ್ತು ಇತರೆ ಭೂಮಿ ವಶಕ್ಕೆ ಪಡೆದು ಲೇಔಟ್ ಅಭಿವೃದ್ಧಿಪಡಿಸಲಾಗಿದೆ. ಈ ಮಧ್ಯೆ, ಹಿಂದೆ ಭೂಸ್ವಾಧೀನ ಪ್ರಶ್ನಿಸಿದ್ದನ್ನು ವಿಭಾಗೀಯ ಪೀಠವು ತಿರಸ್ಕರಿಸಿತ್ತು. ಅದೇ ಅರ್ಜಿಯಲ್ಲಿನ ಕೋರಿಕೆಗಳನ್ನು ನಕಲು ಮಾಡಿ, ನಾಲ್ಕೂವರೆ ದಶಕಗಳ ಬಳಿಕ 2017ರ ಫೆಬ್ರವರಿ 3ರಂದು ಅರ್ಜಿ ಸಲ್ಲಿಸಲಾಗಿದೆ.

ಇದನ್ನೂ ಓದಿ: ಅಪ್ರಾಪ್ತ ಮಗುವಿಗೆ ಪಾಸ್‌ಪೋರ್ಟ್ ನೀಡುವಂತೆ ಹೈಕೋರ್ಟ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.