ETV Bharat / state

ಕಾನೂನು ಸುವ್ಯವಸ್ಥೆ ಕಾಪಾಡಲು ಸರ್ಕಾರಕ್ಕೆ ಸೂಚಿಸುವಂತೆ‌ ನಾಳೆ ರಾಜ್ಯಪಾಲರಿಗೆ ಮನವಿ: ಬೊಮ್ಮಾಯಿ - ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಹೀರೆಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿ ಅವರನ್ನು ಅಮಾನವೀಯ ರೀತಿಯಲ್ಲಿ ‌ಕೊಲೆ ಮಾಡಿದ್ದು, ಇಷ್ಟೆಲ್ಲಾ ನಡೆದರೂ ಈ ಪ್ರಕರಣವನ್ನು ಕೂಡ ರಾಜ್ಯ ಸರ್ಕಾರ ಹಗುರವಾಗಿ ತೆಗೆದುಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.

Former CM Basavaraj Bommai
ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
author img

By

Published : Jul 11, 2023, 11:02 PM IST

ಬೆಂಗಳೂರು: ಹೀರೆಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿಗಳ ಕೊಲೆ ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ನಾಳೆ ಮನವಿ ಸಲ್ಲಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೀರೆಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿ ಅವರನ್ನು ಅಮಾನವೀಯ ರೀತಿಯಲ್ಲಿ ‌ಕೊಲೆ ಮಾಡಿದ್ದು, ಇಷ್ಟೆಲ್ಲಾ ನಡೆದರೂ ಈ ಪ್ರಕರಣವನ್ನು ಕೂಡ ರಾಜ್ಯ ಸರ್ಕಾರ ಹಗುರವಾಗಿ ತೆಗೆದುಕೊಂಡಿದ್ದಾರೆ. ಸಾರ್ವಜನಿಕರ ವಲಯದಲ್ಲಿ ಈ ಪ್ರಕರಣ ಸಿಬಿಐಗೆ ಕೊಡಬೇಕೆಂಬ ಆಗ್ರಹ ಇದೆ‌. ನಾವು ಈ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಅಗ್ರಹಿಸಿದ್ದೇವೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಟಿ ನರಸೀಪುರದಲ್ಲಿಯೂ ಹಿಂದು ಕಾರ್ಯಕರ್ತನ ಹತ್ಯೆಯಾಗಿದೆ. ಸಕಲೇಶಪುರದಲ್ಲೂ ಹತ್ಯೆಯಾಗಿದೆ. ಕಲಬುರ್ಗಿಯಲ್ಲಿ ಹೆಡ್ ಕಾನ್ ಸ್ಟೇಬಲ್ ಅಕ್ರಮ ಮರಳು ದಂಧೆ ಮಾಡುವುದನ್ನು ತಡೆಯಲು ತೆರಳಿದವನ ಕೊಲೆ ಮಾಡುತ್ತಾರೆ. ಹಪ್ತಾ ವಸೂಲಿಗೆ ಹಿರಿಯ ಅಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ.

ಈ ಸರ್ಕಾರದಲ್ಲಿ ಸಮಾಜ ಘಾತುಕರಿಗೆ ಯಾರೂ ಏನೂ ಮಾಡಲು ಆಗುವುದಿಲ್ಲ ಎಂಬ ಧೈರ್ಯ ಬಂದಿದೆ. ಈ ಸರ್ಕಾರ ಒಂದೂವರೆ ತಿಂಗಳಲ್ಲಿ ಕಾನೂನು ಸುವ್ಯವಸ್ಥೆ ಇಷ್ಟೊಂದು ಹದಗೆಟ್ಟಿದೆ. ಇವರು ಐದು ದೊಖಾಗಳ ನಡುವೆ ಕಾನೂನು ಸುವ್ಯವಸ್ಥೆ ದೋಖಾ ಕೊಡುಗೆ ನೀಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ನಾಳೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

ಇನ್ನು ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್ ಪ್ರತಿಭಟನೆ ಮಾಡುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿ ವಿರುದ್ದ ನ್ಯಾಯಾಲಯ ಆದೇಶ ನೀಡಿದೆ. ಕಾಂಗ್ರೆಸ್ ನವರು ನ್ಯಾಯಾಲಯದ ಆದೇಶದ ವಿರುದ್ದ ಪ್ರತಿಭಟನೆ ಮಾಡುವುದು ನ್ಯಾಯಾಂಗ‌ ನಿಂದನೆ ಆಗಲಿದೆ ಎಂದು ಅಭಿಮತ ವ್ಯಕ್ತಪಡಿಸಿದರು.

ನಿಷ್ಪಕ್ಷಪಾತ ತನಿಖೆಗೆ ಆಗ್ರಹ:ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಜೈನಮುನಿ‌ ಶ್ರೀ ಕಾಮಕುಮಾರ ನಂದಿ ಮಹಾರಾಜರನ್ನು ಬರ್ಬರವಾಗಿ ಹತ್ಯೆ ಮಾಡಿದ್ದು ಖಂಡನೀಯ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಪ್ರಕರಣದ ಸತ್ಯಾಸತ್ಯತೆ ಬಯಲಿಗೆ ತರಬೇಕು ಎಂದು ವಿಶ್ವ ಹಿಂದೂ ಪರಿಷತ್ ಉತ್ತರ ಕರ್ನಾಟಕ‌ ಪ್ರಾಂತ ಕೋಶಾಧ್ಯಕ್ಷ ಕೃಷ್ಣ ಭಟ್ ಆಗ್ರಹಿಸಿದ್ದಾರೆ.

ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, ಹಣಕಾಸಿನ‌ ವಿಚಾರದಲ್ಲಿ ಮುನಿಗಳ ಹತ್ಯೆ ಆಗಲು ಸಾಧ್ಯವೇ ಇಲ್ಲ. ಯಾಕೆಂದರೆ ನಿರ್ವಾಣ ಮುನಿಗಳು ಕೈಯಲ್ಲಿ ದುಡ್ಡು ಹಿಡಿಯುವುದೇ ಇಲ್ಲ. ಇದು ವೈಚಾರಿಕ ಹತ್ಯೆಯಾಗಿದ್ದು, ವಿದೇಶಿ ಕುತಂತ್ರದ ಸಂಶಯ ಮೂಡಿದೆ. ಇವರೆಲ್ಲ ಯಾವ ರೀತಿ ಆಶ್ರಮಕ್ಕೆ ಬರುತ್ತಾರೆ ಅನ್ನೋದು ಗೊತ್ತಾಗಲ್ಲ. ಚಾಲಕರಾಗಿ, ಸೇವಕರಾಗಿಯೂ ಬರುವ ಸಾಧ್ಯತೆಯಿದೆ. ಹಾಗಾಗಿ ತನಿಖೆ ಅಡ್ಡದಾರಿ ಹಿಡಿಯಬಾರದು. ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂಓದಿ:ಜೈನ ಮುನಿ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡುವ ಅಗತ್ಯ ಇಲ್ಲ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.