ETV Bharat / state

ದೂರವಾಣಿ ಕದ್ದಾಲಿಕೆ ಆರೋಪ; ಬೆಲ್ಲದ್​​ಗೆ ಬುದ್ಧಿವಾದ ಹೇಳಿದ ಸದಾನಂದಗೌಡ - Aravind Bellad Phone eavesdropping

ರಾಜ್ಯ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಫೋನ್​ ಕದ್ದಾಲಿಕೆ ಆರೋಪ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಶಾಸಕ ಅರವಿಂದ ಬೆಲ್ಲದ್ ಅವರನ್ನು ಮನೆಗೆ ಕರೆಸಿಕೊಂಡು ಬುದ್ಧಿ ಹೇಳಿ ಕಳುಹಿಸಿದ್ದಾರೆ ಎನ್ನಲಾಗುತ್ತಿದೆ. ಬೆಲ್ಲದ್​ ಹೇಳಿಕೆಯಿಂದ ಆಡಳಿತಾರೂಢ ಪಕ್ಷಕ್ಕೆ ತೀವ್ರ ಮುಖಭಂಗಕ್ಕೀಡಾಗಿದ್ದು ಮುಂದಾಲೋಚನೆಯಿಂದ ಪಕ್ಷದ ಮೇಲೆ ಇನ್ನಷ್ಟು ಕೆಟ್ಟ ಪರಿಣಾಮ ಬೀರಬಾರದು ಎಂಬ ದೃಷ್ಟಿಯಿಂದ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ.

KN_BNG_07_BELLAD_DVS_MEET_SCRIPT_7208080
Phone-tapping; Sadananda Gowda warned to MLA Arvind Bellad
author img

By

Published : Jun 17, 2021, 10:36 PM IST

ಬೆಂಗಳೂರು: ಆಡಳಿತ ಪಕ್ಷದ ಸದಸ್ಯರಾಗಿದ್ದುಕೊಂಡು ಬಹಿರಂಗವಾಗಿ ದೂರವಾಣಿ ಕದ್ದಾಲಿಕೆ ಆರೋಪ ಮಾಡಿದ್ದು ಸರಿಯಲ್ಲ, ಇಂತಹ ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸಬೇಕು ಎಂದು ಶಾಸಕ ಅರವಿಂದ ಬೆಲ್ಲದ್​ಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ. ಸದಾನಂದಗೌಡ ಬುದ್ಧಿವಾದ ಹೇಳಿದ್ದಾರೆ.

ರಾಜ್ಯ ಸರ್ಕಾರದಲ್ಲಿ ತಮ್ಮ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಶಾಸಕ ಅರವಿಂದ ಬೆಲ್ಲದ್ ಅವರನ್ನು ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ತಮ್ಮ ನಿವಾಸಕ್ಕೆ ಕರೆಸಿಕೊಂಡು ಚರ್ಚೆ ನಡೆಸಿದ್ದಾರೆ. ಈ ರೀತಿಯ ಗಂಭೀರ ಆರೋಪ ಮಾಡುವುದರಿಂದ ಪಕ್ಷ ಮತ್ತು ಸರ್ಕಾರದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಈ ರೀತಿಯ ಹೇಳಿಕೆಗಳನ್ನು ನೀಡುವಾಗ ಎಚ್ಚರಿಕೆಯಿಂದ ಇರಬೇಕು ಎಂದು ಬುದ್ಧಿವಾದ ಹೇಳಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಪಕ್ಷದ ವರ್ಚಸ್ಸಿಗೆ ಧಕ್ಕೆ ಉಂಟು ಮಾಡುವವರ ವಿರುದ್ಧ ಕಠಿಣ ಕ್ರಮ: ಅರುಣ್ ಸಿಂಗ್ ಖಡಕ್​ ಎಚ್ಚರಿಕೆ

ಅಲ್ಲದೇ ಸಮಯಾವಕಾಶ ನೀಡಿದ್ದರೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡದೇ ಅಂತರ ಕಾಪಾಡಿಕೊಂಡಿರುವ ಬೆಲ್ಲದ್ ಅವರಿಗೆ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿ ಚರ್ಚಿಸುವಂತೆ ಸದಾನಂದಗೌಡ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.