ETV Bharat / state

ವಿಶ್ವೇಶ್ವರಯ್ಯ ವಿವಿ ಕುಲಪತಿ ನೇಮಕ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿ ಡಿಸೆಂಬರ್​ 2ಕ್ಕೆ ವಿಚಾರಣೆ

author img

By

Published : Nov 9, 2022, 8:17 AM IST

ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಎಸ್.ವಿದ್ಯಾಶಂಕರ್ ನೇಮಕದ ಸಿಂಧುತ್ವ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ವಿದ್ಯಾಶಂಕರ್ ಅವರ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣ ಬಾಕಿ ಇವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

pil-against-appointment-of-belagavi-university-chancellor
ವಿಶ್ವೇಶ್ವರಯ್ಯ ವಿವಿ ಕುಲಪತಿ ನೇಮಕ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿ ಡಿಸೆಂಬರ್​ 2ಕ್ಕೆ ವಿಚಾರಣೆ

ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಯನ್ನಾಗಿ ಎಸ್.ವಿದ್ಯಾಶಂಕರ್ ಅವರನ್ನು ನೇಮಕ ಮಾಡಿರುವ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು(ಪಿಐಎಲ್) ಡಿ.2ರಂದು ವಿಚಾರಣೆ ನಡೆಸಲು ಹೈಕೋರ್ಟ್ ಸಮ್ಮತಿಸಿದೆ.

ಮೈಸೂರು ವಿವಿಯ ಮಾಜಿ ಹಂಗಾಮಿ ಉಪಕುಲಪತಿ ಹಾಗೂ ನಿವೃತ್ತ ಪ್ರೊ. ಬಿ. ಶಿವರಾಜ್ ಸಲ್ಲಿಸಿದ್ದ ಅರ್ಜಿಯು ಮುಖ್ಯನ್ಯಾಯಮೂರ್ತಿ ಪಿ.ಬಿ.ವರಾಲೆ ಅವರಿದ್ದ ವಿಭಾಗೀಯ ಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತು.

ವಿಚಾರಣೆ ವೇಳೆ, ಸೇವಾ ವಿಚಾರದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸ್ವೀಕಾರಾರ್ಹವಲ್ಲ. ಜೊತೆಗೆ ಅರ್ಜಿದಾರರು ಕುಲಪತಿ ಹುದ್ದೆಯ ಆಕಾಂಕ್ಷಿಯಲ್ಲ. ಆದರೂ ಸಹ ಸುಪ್ರೀಂ ಕೋರ್ಟ್‌ನ ಆದೇಶದಂತೆ ನೇಮಕದಿಂದ ಭಾದಿತರಾಗದವರು ಅದನ್ನು ಪ್ರಶ್ನಿಸುವಂತಿಲ್ಲ ಎಂದು ಹೇಳಿದ ನ್ಯಾಯಪೀಠ, ಡಿ.2ಕ್ಕೆ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಹೇಳಿ ಮುಂದೂಡಿದೆ.

ಅರ್ಜಿದಾರರ ಪರ ವಕೀಲರು, ವಿಟಿಯು ಕುಲಪತಿ ನೇಮಕಕ್ಕೆ ಶೋಧನಾ ಸಮಿತಿ ರಚನೆ ಮಾಡಿರುವುದು ಅಕ್ರಮ, ಅದರಲ್ಲಿ ನಿಯಮ ಪಾಲನೆ ಮಾಡಿಲ್ಲ. ನಿಯಮದಂತೆ ಸಮಿತಿಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ)ಯ ಪ್ರತಿನಿಧಿ ನಾಮನಿರ್ದೇಶನ ಮಾಡಿಲ್ಲ. ಅಲ್ಲದೆ, ಸಮಿತಿಯಲ್ಲಿ ವಿಟಿಯುಗೆ ಸಂಬಂಧಿಸಿದವರೇ ಇಬ್ಬರು ಸದಸ್ಯರು ಇದ್ದರು. ನಿಯಮದಂತೆ ಆ ರೀತಿ ಯಾವ ವಿಶ್ವವಿದ್ಯಾಲಯಕ್ಕೆ ನೇಮಕ ಮಾಡಲಾಗುತ್ತದೆಯೋ ಆಂತಹ ವಿವಿಗೆ ಸಂಬಂಧಿಸಿದವರು ಸಮಿತಿಯಲ್ಲಿ ಇರುವಂತಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಅಲ್ಲದೆ, ವಿದ್ಯಾಶಂಕರ್ ಅವರ ವಿರುದ್ಧ ಹಲವು ಕ್ರಿಮಿನಲ್ ಪ್ರಕರಣ ಬಾಕಿ ಇವೆ. ಅವರು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿಯಾಗಿದ್ದ ಅವಧಿಯಲ್ಲಿ ಹಲವು ಅಕ್ರಮ ಎಸಗಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ: ಆಂಬ್ಯುಲೆನ್ಸ್‌ಗಳಿಗೆ ಜಿಪಿಎಸ್ ಅಳವಡಿಸಿ: ಹೈಕೋರ್ಟ್ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.