ETV Bharat / state

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಮಾಧ್ಯಮ ಸಲಹೆಗಾರ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ - ಹೈಕೋರ್ಟ್‌ಗೆ ಪಿಐಎಲ್

ಮುಖ್ಯಮಂತ್ರಿಗಳ ಕಚೇರಿ ಸಾರ್ವಜನಿಕ ಕಚೇರಿಯಾಗಿದೆ. ಆದರೆ, ಇಲ್ಲಿ ಸಿಎಂ ಅವರ ಬಂಧುಗಳು ಮತ್ತು ಅವರ ರಾಜಕೀಯ ಬೆಂಬಲಿಗರಿಗೆ ಆದ್ಯತೆ ನೀಡಲು ಹುದ್ದೆಗಳನ್ನು ಸೃಜಿಸಲಾಗಿದೆ. ಕಾನೂನಿನಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ವಕೀಲರೊಬ್ಬರು ಪಿಐಎಲ್ ಸಲ್ಲಿಸಿದ್ದಾರೆ.

highcourt
highcourt
author img

By

Published : Jul 18, 2023, 7:13 AM IST

ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ನಜೀರ್ ಅಹಮದ್, ಕೆ.ಗೋವಿಂದರಾಜ್, ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ಸುನೀಲ್ ಕನಗೋಲು ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ಸಂಪುಟ ದರ್ಜೆಯ ಸ್ಥಾನಮಾನ ನೀಡಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.

ವಕೀಲ ಎಸ್.ಉಮಾಪತಿ ಸಲ್ಲಿಸಿರುವ ಅರ್ಜಿಯಲ್ಲಿ ನಜೀರ್ ಅಹ್ಮದ್, ಕೆ.ಗೋವಿಂದರಾಜ್, ಸುನೀಲ್ ಕನಗೋಲು ಹಾಗೂ ಕೆ.ವಿ.ಪ್ರಭಾಕರ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.

ಅರ್ಜಿಯಲ್ಲಿರುವ ಅಂಶಗಳು: ನಜೀರ್ ಅಹ್ಮದ್, ಕೆ.ಗೋವಿಂದರಾಜ್, ಸುನೀಲ್ ಕನಗೋಲು ಹಾಗೂ ಕೆ.ವಿ.ಪ್ರಭಾಕರ್ ಅವರಿಗೆ ಈ ಹುದ್ದೆಗಳನ್ನು ಸೃಜಿಸಿ ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. ಇವರಿಗೆ ನೀಡಲಾಗುವ ಸಂಬಳ, ಸಾರಿಗೆ, ವಸತಿ ಭತ್ಯೆ ಇತ್ಯಾದಿ ಖರ್ಚುಗಳು ರಾಜ್ಯದ ಬೊಕ್ಕಸದಿಂದ ವಿನಾ ಕಾರಣ ಭರಿಸುವಂತಾಗಿದೆ. ಇವೆಲ್ಲ ರಾಜಕೀಯ ನೇಮಕಾತಿ ಹಾಗೂ ಏಕಪಕ್ಷೀಯ ನಿರ್ಧಾರಗಳು. ಮುಖ್ಯಮಂತ್ರಿಗಳ ಕಚೇರಿ ಎಂಬುದು ಸಾರ್ವಜನಿಕ ಕಚೇರಿ. ಆದರೆ, ಇಲ್ಲೀಗ ಮುಖ್ಯಮಂತ್ರಿಗಳ ಬಂಧುಗಳು, ಅವರ ರಾಜಕೀಯ ಬೆಂಬಲಿಗರಿಗೆ ಆಸ್ಪದ ನೀಡಲಾಗಿದೆ. ಕಾನೂನಿನಲ್ಲಿ ಇಂತಹ ಹುದ್ದೆಗಳನ್ನು ರೂಪಿಸಲು ಅವಕಾಶವಿಲ್ಲ.

ಕಾನೂನಿನ ಗಂಭೀರ ಉಲ್ಲಂಘನೆಯಾಗಿದೆ. ಉತ್ತಮ ಆಡಳಿತ ನೀಡುವ ಮೂಲಭೂತ ಆಶಯಗಳಿಗೆ ವಿರುದ್ಧವಾಗಿದೆ. ಅರ್ಜಿಯಲ್ಲಿನ ಪ್ರತಿವಾದಿಗಳಾಗಿರುವ ಖಾಸಗಿ ವ್ಯಕ್ತಿಗಳಿಗೆ ಸಾರ್ವಜನಿಕ ಕಚೇರಿಯಲ್ಲಿ ಮುಂದುವರೆಯಲು ಅವಕಾಶ ನೀಡಿದಲ್ಲಿ ದುರುಪಯೋಗವಾಗಲಿದೆ. ಹೀಗಾಗಿ ತಕ್ಷಣದಿಂದ ಅವರ ಕಾರ್ಯವನ್ನು ಸ್ಥಗಿತಗೊಳಿಸಲು ಮಧ್ಯಂತರ ಆದೇಶ ನೀಡಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಮುಖ್ಯ ಸಲಹೆಗಾರನಾಗಿ ಸುನೀಲ್ ಕನುಗೋಳು ನೇಮಕ: ಯಾರಿವರು?

ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನೇಮಕವಾಗಿರುವ ಈ ವ್ಯಕ್ತಿಗಳು ಅತ್ಯಂತ ಪ್ರಭಾವ ಶಾಲಿಗಳಾಗಿದ್ದಾರೆ. ಹೀಗಾಗಿ ಮೂವರು ವ್ಯಕ್ತಿಗಳನ್ನು ನೇಮಕ ಮಾಡಿರುವುದು ಸಂವಿಧಾನ ವಿರೋಧಿಯಾಗಿದೆ. ಹೀಗಾಗಿ ತಕ್ಷಣ ನೇಮಕಾತಿ ಆದೇಶಗಳನ್ನು ರದ್ದುಗೊಳಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಇದನ್ನೂ ಓದಿ: ಮೇಲ್ಮನೆ ಸದಸ್ಯರಾದ ಗೋವಿಂದ ರಾಜು, ನಜೀರ್ ಅಹಮ್ಮದ್ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಗಳಾಗಿ ನೇಮಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.