ETV Bharat / state

ಸೇಫ್ ಸಿಟಿ ಪ್ರಾಜೆಕ್ಟ್ ವಿವಾದ; ಸಿಬಿಐ ತನಿಖೆ ಕೋರಿ ಪಿಐಎಲ್

ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಪ್ರಕ್ರಿಯೆ ವೇಳೆ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು. ಪ್ರಕರಣದ ತನಿಖೆ ನಡೆಯುವವರೆಗೆ ಟೆಂಡರ್ ಪ್ರಕ್ರಿಯೆಯನ್ನು ಮುಂದುವರೆಸದಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸಬೇಕು ಎಂದು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

PIL in HC about safe city project tender row
ಹೈಕೋರ್ಟ್​
author img

By

Published : Dec 30, 2020, 7:26 PM IST

ಬೆಂಗಳೂರು : ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ನಡುವೆ ಜಟಾಪಟಿ ನಡೆಯುತ್ತಿದೆ. ಇದರ ನಡುವೆಯೇ ವಕೀಲೆಯೊಬ್ಬರು ಈ ಕುರಿತು ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು ಸೇಫ್ ಸಿಟಿ ಪ್ರಾಜೆಕ್ಟ್ ಟೆಂಡರ್ ಅವ್ಯವಹಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ನಗರದ ಸಾಮಾಜಿಕ ಕಾರ್ಯಕರ್ತೆ ಹಾಗೂ ವಕೀಲೆ ಗೀತಾ ಮಿಶ್ರಾ ಅವರು ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಇಂದು ಈ ಅರ್ಜಿಯನ್ನು ನ್ಯಾ, ಆರ್. ದೇವದಾಸ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ ವಿಚಾರಣೆಯನ್ನು ಜನವರಿಗೆ ಮುಂದೂಡಿತು.

ಅರ್ಜಿದಾರರ ಕೋರಿಕೆ : ನಿರ್ಭಯ ಪ್ರಕರಣದ ಬಳಿಕ ಕೇಂದ್ರ ಸರ್ಕಾರ ನಗರದಲ್ಲಿ ಮಹಿಳೆಯರ ಸುರಕ್ಷತೆಗಾಗಿ 2019ರ ಮಾರ್ಚ್ 2 ರಂದು 667 ಕೋಟಿ ವೆಚ್ಚದಲ್ಲಿ ಬೆಂಗಳೂರು ಸೇಫ್ ಸಿಟಿ ಯೋಜನೆ ಪ್ರಕಟಿಸಿದೆ. ಯೋಜನೆ ಜಾರಿಗೆ ಕೂಡಲೇ 167 ಕೋಟಿ ರೂ. ನೀಡಲಾಗಿದೆ. ಆದರೆ, ಯೋಜನೆ ಜಾರಿಗಾಗಿ ಕರೆಯಲಾಗಿರುವ ಟೆಂಡರ್ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದ ಆರೋಪಗಳು ಕೇಳಿ ಬಂದಿವೆ. ಹೀಗಾಗಿಯೇ 2019ರ ನ. 7ರಂದು ಕರೆದಿದ್ದ ಟೆಂಡರ್​ ಅನ್ನು ಮರುದಿನವೇ ಹಿಂಪಡೆಯಲಾಗಿದೆ.

ಇದನ್ನೂ ಓದಿ : ಸೇಫ್ ಸಿಟಿ ನಿರ್ಭಯಾ ಪ್ರಾಜೆಕ್ಟ್ ವಿಚಾರ : ತಣ್ಣಗಾಗದ ಐಪಿಎಸ್ ಅಧಿಕಾರಿಗಳ ಕೋಲ್ಡ್ ವಾರ್

ಈ ಟೆಂಡರ್ ವಿಚಾರಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳ ನಡುವೆ ಆರೋಪ ಪ್ರತ್ಯಾರೋಪಗಳು ವ್ಯಕ್ತವಾಗುತ್ತಿವೆ. ಇದರ ನಡುವೆಯೂ ಹೊಸ ಟೆಂಡರ್ ಪ್ರಕ್ರಿಯೆಯನ್ನು ಮುಂದುವರೆಸಲಾಗುತ್ತಿದೆ. ಸದ್ಯ ಯೋಜನೆ ಅಂದಾಜು ವೆಚ್ಚ 1067 ಕೋಟಿ ತಲುಪಲಿದೆ. ಆದ್ದರಿಂದ, ಟೆಂಡರ್ ಪ್ರಕ್ರಿಯೆ ವೇಳೆ ಆಗಿರುವ ಅವ್ಯವವಾರ ಆರೋಪಗಳನ್ನು ತನಿಖೆ ನಡೆಸಲು ಸಿಬಿಐಗೆ ವಹಿಸಬೇಕು. ಪ್ರಕರಣದ ತನಿಖೆ ನಡೆಸುವವರೆಗೆ ಟೆಂಡರ್ ಪ್ರಕ್ರಿಯೆಯನ್ನು ಮುಂದುವರೆಸದಂತೆ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ನಿರ್ದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.