ETV Bharat / state

ಪಿಯು ಪರೀಕ್ಷೆ.. ಪುನರಾವರ್ತಿತ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ​ ಕೋರಿ ಪಿಐಎಲ್​ - SV Singaregowda

ಪ್ರಸ್ತಕ ಸಾಲಿನಲ್ಲಿ 7 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಕೋವಿಡ್ ಹಿನ್ನೆಲೆ ಪರೀಕ್ಷೆ ಇಲ್ಲದೆಯೇ ಉತ್ತೀರ್ಣಗೊಳಿಸಲು ಸರ್ಕಾರ ಮುಂದಾಗಿದೆ. ಪ್ರಥಮ ಪಿಯು ಪರೀಕ್ಷೆ ಅಂಕ ಪರಿಗಣಿಸಿ ಉತ್ತೀರ್ಣಗೊಳಿಸುವುದಾಗಿ ಜೂನ್ 3ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ..

pil-in-hc-requesting-repeat-students-to-pass
ಪುನರಾವರ್ತಿತ ವಿದ್ಯಾರ್ಥಿಗಳನ್ನು ಪಾಸ್ ಮಾಡುವಂತೆ​ ಕೋರಿ ಪಿಐಎಲ್​
author img

By

Published : Jun 8, 2021, 9:20 PM IST

ಬೆಂಗಳೂರು : ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳನ್ನು ಕೈಬಿಟ್ಟು ಕೇವಲ ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸುವುದು ಸರಿಯಲ್ಲ. ಹೀಗಾಗಿ, ರಾಜ್ಯ ಸರ್ಕಾರ ಈ ಸಂಬಂಧ ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಬೆಂಗಳೂರಿನ ಜ್ಞಾನಮಂದಿರ ಎಜುಕೇಷನ್ ಟ್ರಸ್ಟ್ ಕಾರ್ಯದರ್ಶಿ ಎಸ್.ವಿ ಸಿಂಗ್ರೇಗೌಡ ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಕಾರ್ಯದರ್ಶಿ, ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರನ್ನು ಪ್ರತಿವಾದಿಗಳನ್ನಾಗಿ ಸೇರಿಸಲಾಗಿದೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ.

ಅರ್ಜಿದಾರರ ಕೋರಿಕೆ : ಪ್ರಸ್ತಕ ಸಾಲಿನಲ್ಲಿ 7 ಲಕ್ಷ ದ್ವಿತೀಯ ಪಿಯು ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿತ್ತು. ಕೋವಿಡ್ ಹಿನ್ನೆಲೆ ಪರೀಕ್ಷೆ ಇಲ್ಲದೆಯೇ ಉತ್ತೀರ್ಣಗೊಳಿಸಲು ಸರ್ಕಾರ ಮುಂದಾಗಿದೆ. ಪ್ರಥಮ ಪಿಯು ಪರೀಕ್ಷೆ ಅಂಕ ಪರಿಗಣಿಸಿ ಉತ್ತೀರ್ಣಗೊಳಿಸುವುದಾಗಿ ಜೂನ್ 3ರಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಆದರೆ, ಈ ಅನುಕೂಲವನ್ನು ನಪಾಸಾಗಿರುವ 95 ಸಾವಿರ ಪುನರಾವರ್ತಿತ ಅಭ್ಯರ್ಥಿಗಳಿಗೆ ನೀಡಿಲ್ಲ. ಸರ್ಕಾರದ ನಿರ್ಧಾರ ತಾರತಮ್ಯದಿಂದ ಕೂಡಿದೆ. ಆದ್ದರಿಂದ ಅನುತ್ತೀರ್ಣಗೊಂಡಿರುವ ಪುನರಾವರ್ತಿತ ವಿದ್ಯಾರ್ಥಿಗಳನ್ನೂ ಕೂಡ ಪ್ರಥಮ ಪಿಯು ಅಂಕಗಳ ಆಧಾರದ ಮೇಲೆ ಪರೀಕ್ಷೆ ಇಲ್ಲದೆ ಪಾಸ್​ ಮಾಡಬೇಕು. ಇಲ್ಲವಾದರೆ, ಸರ್ಕಾರ ಜೂನ್ 3ರಂದು ಹೊರಡಿಸಿರುವ ನೋಟಿಫಿಕೇಷನ್ ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಓದಿ:ವೃದ್ಧೆಯ ಕಣ್ಣಿನಿಂದ 9 ಸೆಂ.ಮೀ. ಉದ್ದದ ಜೀವಂತ ಹುಳು ಹೊರ ತೆಗೆದ ಉಡುಪಿಯ ವೈದ್ಯರು!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.