ETV Bharat / state

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಪಿಐಎಲ್: ಸರ್ಕಾರದ ವಿವರಣೆ ಕೇಳಿದ ಹೈಕೋರ್ಟ್

ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

High Court
ಹೈಕೋರ್ಟ್
author img

By

Published : Oct 5, 2020, 10:34 PM IST

ಬೆಂಗಳೂರು: ಭೂ ಸುಧಾರಣಾ ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿರುವ ವಿಚಾರಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ಮಾಹಿತಿ ನೀಡುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಕಾಯ್ದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಕೆಲಕಾಲ ಅರ್ಜಿದಾರರ ಪರ ವಕೀಲ ಪ್ರೊ. ರವಿವರ್ಮ ಕುಮಾರ್ ವಾದ ಆಲಿಸಿದ ಪೀಠ, ಅರ್ಜಿ ಸಂಬಂಧ ವಿವರಣೆ ಕೇಳಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಕಾಯ್ದೆಯ ನಿಯಮಗಳಿಗೆ ತಿದ್ದುಪಡಿ ತಂದಿರುವ ಬಗ್ಗೆ ವಿಧಾನಮಂಡಲದ ಉಭಯ ಸದನಗಳಲ್ಲಿ ಅನುಮೋದನೆ ಪಡೆದು ಕಾಯ್ದೆ ಆಗಿದೆಯೇ ಅಥವಾ ಇನ್ನೂ ಸುಗ್ರೀವಾಜ್ಞೆ ಆಗಿಯೇ ಮುಂದುವರೆದಿದೆಯೇ ಎಂಬ ಬಗ್ಗೆ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಅಕ್ಟೋಬರ್ 13ಕ್ಕೆ ಮುಂದೂಡಿತು.

ಅರ್ಜಿದಾರರ ಕೋರಿಕೆ:

ಉದ್ಯಮಿಗಳಿಗೆ ಹಣವಂತರಿಗೆ ಕೃಷಿ ಭೂಮಿ ಖರೀದಿ ಮಾಡಲು ಅನುಕೂಲವಾಗುವಂತೆ ಕರ್ನಾಟಕ ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 79a 79b 79 ಸಿ ಮತ್ತು 80ಕ್ಕೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ತರಲಾಗಿದೆ. ತಿದ್ದುಪಡಿ ಸಂಬಂಧ ಯಾವುದೇ ಚರ್ಚೆ ನಡೆಸದೇ ಏಕಪಕ್ಷೀಯವಾಗಿ ಸರ್ಕಾರ ಕ್ರಮಕೈಗೊಂಡಿದೆ.

ನಿಯಮಬಾಹಿರವಾಗಿ ಮಾಡಿರುವ ಈ ತಿದ್ದುಪಡಿಯಿಂದ ರೈತಾಪಿ ವರ್ಗಕ್ಕೆ ಅನ್ಯಾಯವಾಗಲಿದೆ. ಕೃಷಿ ಭೂಮಿ ಬಂಡವಾಳಗಾರರು, ಉದ್ಯಮಿಗಳು, ವ್ಯಾಪಾರಸ್ಥರ ಪಾಲಾಗದೇ ರೈತರಲ್ಲಿಯೇ ಉಳಿಯಬೇಕಿದ್ದರೆ ಕಾಯ್ದೆ ತಿದ್ದುಪಡಿಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.