ETV Bharat / state

ಅದಾನಿ ಗ್ರೂಪ್​ಗೆ ಮಂಗಳೂರು ವಿಮಾನ ನಿಲ್ದಾಣ ಹಸ್ತಾಂತರ ಪ್ರಶ್ನಿಸಿ ಪಿಐಎಲ್: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್ - Mangalore airport handover to Adani Group

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣನ್ನು ಅದಾನಿ ಎಂಟರ್‌ ಪ್ರೈಸೆಸ್ ಲಿಮಿಟೆಡ್‌ಗೆ ಹಸ್ತಾಂತರಿಸುವುದನ್ನು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಪಿಐಎಲ್​ ಸಲ್ಲಿಸಲಾಗಿತ್ತು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಹೈಕೋರ್ಟ್,​ ಕೇಂದ್ರ ಸರ್ಕಾರಕ್ಕೆ ನೋಟಿಸ್​ ನೀಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Feb 3, 2021, 7:33 PM IST

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್​ಗೆ ಹಸ್ತಾಂತರಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ನೋಟಿಸ್ ಜಾರಿ ಮಾಡಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಎಂಟರ್‌ ಪ್ರೈಸೆಸ್ ಲಿಮಿಟೆಡ್‌ಗೆ ಹಸ್ತಾಂತರಿಸಲು ಒಪ್ಪಂದ ಮಾಡಿಕೊಳ್ಳಲಾಗಿದೆ. ದೇಶದ ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಮುಂದಾಗಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಉದ್ಯೋಗಿಗಳ ಸಂಘ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೆ.

ಈ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ಪೀಠ, ಪ್ರತಿವಾದಿಗಳಾದ ನಾಗರಿಕ ವಿಮಾನಯಾನ ಸಚಿವಾಲಯ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕ ಮತ್ತು ಅದಾನಿ ಎಂಟರ್‌ ಪೈಸೆಸ್ ಲಿಮಿಟೆಡ್‌ಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿದೆ.

ಅರ್ಜಿದಾರರ ಕೋರಿಕೆ: ಸರ್ಕಾರಿ-ಖಾಸಗಿ ಸಹಭಾಗಿತ್ವ ಯೋಜನೆಯಡಿ ಅಹಮದಾಬಾದ್, ಜೈಪುರ, ಲಕ್ನೋ, ಗೋವಾ, ಗುವಾಹಾಟಿ ಮತ್ತು ಮಂಗಳೂರು ವಿಮಾನ ನಿಲ್ದಾಣಗಳ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿಗೆ 2018ರ ನ. 8ರಂದು ಕೇಂದ್ರ ಸಚಿವ ಸಂಪುಟ ನಿರ್ಣಯ ಕೈಗೊಂಡಿತ್ತು. ಅದನ್ನು ಆಧರಿಸಿ ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಬಿಡ್ಡಿಂಗ್ ಪ್ರಕ್ರಿಯೆ ನಡೆಸಲಾಗಿತ್ತು. ಮಂಗಳೂರು ಅಂತಾರಾಷ್ಟ್ರೀಯ ವಿಮಾಣ ನಿಲ್ದಾಣದ ನಿರ್ವಹಣೆಗೆ ಅದಾನಿ ಎಂಟರ್ ‌ಪ್ರೈಸೆಸ್‌ ಮಾಡಿದ್ದ ಬಿಡ್ಡಿಂಗ್​ಗೆ ಕೇಂದ್ರ ಸಚಿವ ಸಂಪುಟ 2019ರ ಮಾ. 7ರಂದು ಒಪ್ಪಿಗೆ ನೀಡಿತ್ತು. ಇದು ಕಾನೂನು ಬಾಹಿರ ಕ್ರಮ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರ ಕಾಯ್ದೆಯ ಉಲ್ಲಂಘನೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಓದಿ:ಚಿತ್ರರಂಗದ ಒಗ್ಗಟ್ಟಿಗೆ ಮಣಿದ ಸರ್ಕಾರ.. ಥಿಯೇಟರ್‌ನಲ್ಲಿ 'ಹೌಸ್​​ಫುಲ್​​​​'ಗೆ ಅವಕಾಶ..

ವಿಮಾನ ನಿಲ್ದಾಣ ಪ್ರಾಧಿಕಾರ ಕಾಯ್ದೆ ಪ್ರಕಾರ ಗುತ್ತಿಗೆಗೆ ಹೊರತುಪಡಿಸಿ ಯಾವುದೇ ರೀತಿಯಲ್ಲೂ ವಿಮಾನ ನಿಲ್ದಾಣದ ಆಸ್ತಿ ವರ್ಗಾವಣೆ ಮಾಡುವಂತಿಲ್ಲ. ಈ ನಿಯಮ ಉಲ್ಲಂಘಿಸಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿ ಹೊಣೆಯನ್ನು ಅದಾನಿ ಎಂಟರ್ ‌ಪ್ರೈಸೆಸ್ ಲಿಮಿಟೆಡ್‌ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ವಿಮಾನ ನಿಲ್ದಾಣದ ಸ್ವಾಧೀನ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಯಾರೊಂದಿಗೂ ಒಪ್ಪಂದ ಮಾಡಿಕೊಳ್ಳಲು ನಾಗರಿಕ ವಿಮಾನಯಾನ ಸಚಿವಾಲಯ ಅಥವಾ ವಿಮಾನ ನಿಲ್ದಾಣ ಪ್ರಧಿಕಾರಕ್ಕೆ ಅಧಿಕಾರವಿಲ್ಲ. ವಿಮಾನ ನಿಲ್ದಾಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಈಗಾಗಲೇ ದೊಡ್ಡ ಮೊತ್ತದ ಹಣ ಖರ್ಚು ಮಾಡಿದೆ.

ಇದೀಗ ಖಾಸಗಿ ಸಂಸ್ಥೆಗಳಿಗೆ ವಿಮಾನ ನಿಲ್ದಾಣ, ಅದರ ಜಮೀನು ಮತ್ತು ಕಟ್ಟಡಗಳನ್ನು ವಹಿಸುವುದು ದೇಶದ ಹಿತಾಸಕ್ತಿಗೆ ವಿರುದ್ಧವಾಗಿದೆ. ರಾಜ್ಯ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದಂತಾಗುತ್ತದೆ. ಆದ್ದರಿಂದ ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸಲು ಕೇಂದ್ರ ಸಚಿವ ಸಂಪುಟ ಕೈಗೊಂಡ ನಿರ್ಣಯ, ಆ ಸಂಬಂಧ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಮತ್ತು ಅದಾನಿ ಕಂಪನಿ ಮಾಡಿಕೊಂಡಿರುವ ಒಪ್ಪಂದವನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.