ETV Bharat / state

ರಸ್ತೆಗೆ ಅಡ್ಡಲಾಗಿದ್ದ ದೇವಸ್ಥಾನ ತೆರವು ಕೋರಿ ಪಿಐಎಲ್: ಹೈಕೋರ್ಟ್​ಗೆ ಬಿಬಿಎಂಪಿ ಮಾಹಿತಿ - BBMP information to the High Court

ಬೆಂಗಳೂರಿನ ಜಯನಗರದ ನಾಲ್ಕನೇ ಬ್ಲಾಕ್​​ನಲ್ಲಿ ಪಾದಚಾರಿ ಮಾರ್ಗಕ್ಕೆ ಅಡ್ಡಿಯಾಗಿದ್ದ ನಾಗರಕಲ್ಲು ಮುನೇಶ್ವರ ಸ್ವಾಮಿ ದೇವಸ್ಥಾನವನ್ನು ದೇವಾಲಯದ ಆಡಳಿತ ಮಂಡಳಿಯೇ ಸ್ವಯಂಪ್ರೇರಿತವಾಗಿ ತೆರವು ಮಾಡಲು ಕ್ರಮ ಕೈಗೊಂಡಿದೆ ಎಂದು ಬಿಬಿಎಂಪಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

High Court
ಹೈಕೋರ್ಟ್​ಗೆ ಬಿಬಿಎಂಪಿ ಮಾಹಿತಿ
author img

By

Published : Jul 30, 2020, 9:11 PM IST

ಬೆಂಗಳೂರು: ಜಯನಗರದ ನಾಲ್ಕನೇ ಬ್ಲಾಕ್​​ನಲ್ಲಿ ಪಾದಚಾರಿ ಮಾರ್ಗಕ್ಕೆ ಅಡ್ಡಿಯಾಗಿದ್ದ ನಾಗರಕಲ್ಲು ಮುನೇಶ್ವರ ಸ್ವಾಮಿ ದೇವಸ್ಥಾನವನ್ನು ದೇವಾಲಯದ ಆಡಳಿತ ಮಂಡಳಿಯೇ ಸ್ವಯಂಪ್ರೇರಿತವಾಗಿ ತೆರವು ಮಾಡಲು ಕ್ರಮ ಕೈಗೊಂಡಿದೆ ಎಂದು ಬಿಬಿಎಂಪಿ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ನೂರಾರು ಜನ ಓಡಾಡುವ ಪಾದಚಾರಿ ಮಾರ್ಗಕ್ಕೆ ಅಡ್ಡಿಯಾಗಿರುವ ನಾಗರಕಲ್ಲು ಮುನೇಶ್ವರಸ್ವಾಮಿ ದೇವಸ್ಥಾನವನ್ನು ತೆರವು ಮಾಡಲು ಬಿಬಿಎಂಪಿಗೆ ನಿರ್ದೇಶಿಸುವಂತೆ ಕೋರಿ ಸನಾತನ ಕಲಾಕ್ಷೇತ್ರ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಈ ವೇಳೆ ಬಿಬಿಎಂಪಿ ಪರ ವಕೀಲರು ಪೀಠಕ್ಕೆ ಮಾಹಿತಿ ನೀಡಿ, ಜಯನಗರದ 4ನೇ ಬ್ಲಾಕ್ 9ನೇ ಮುಖ್ಯರಸ್ತೆಯಲ್ಲಿ ಪಾದಚಾರಿ ಮಾರ್ಗಕ್ಕೆ ಅಡ್ಡಲಾಗಿ ಮುನೇಶ್ವರ ಸ್ವಾಮಿ ದೇವಸ್ಥಾನವನ್ನು ತೆರವು ಮಾಡಲು ದೇವಾಲಯದ ಆಡಳಿತ ಮಂಡಳಿ ಸ್ವಯಂಪ್ರೇರಿತವಾಗಿ ಮುಂದಾಗಿದೆ. ಜುಲೈ 30ರ ಬೆಳಗ್ಗೆ ಪೊಲೀಸ್ ಬಂದೋಬಸ್ತ್​​ನಲ್ಲಿ ದೇವಾಲಯದ ತೆರವು ಕಾರ್ಯಾಚರಣೆ ಆರಂಭವಾಗಿದೆ ಎಂದು ವಿವರಿಸಿ, ತೆಲುಗು ಕಾರ್ಯಾಚರಣೆಯ ಫೋಟೋಗಳನ್ನು ಪೀಠಕ್ಕೆ ಸಲ್ಲಿಸಿದರು.

ಬಿಬಿಎಂಪಿ ಪರ ವಕೀಲರ ಹೇಳಿಕೆ ಮತ್ತು ಫೋಟೋಗಳನ್ನು ದಾಖಲಿಸಿಕೊಂಡ ಪೀಠ ತೆರವು ಕಾರ್ಯಾಚರಣೆ ಪೂರ್ಣಗೊಂಡ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಪಾಲಿಕೆಗೆ ನಿರ್ದೇಶನ ನೀಡಿ ವಿಚಾರಣೆಯನ್ನು ಆಗಸ್ಟ್ 13ಕ್ಕೆ ಮುಂದೂಡಿತು. ಹಿಂದಿನ ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ನ್ಯಾಯಾಲಯಕ್ಕೆ ಕಾಲಾವಕಾಶ ಕೋರಿ ಮನವಿ ಸಲ್ಲಿಸಿದ್ದರು. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಪೊಲೀಸರು ಮತ್ತು ಪಾಲಿಕೆ ಅಧಿಕಾರಿಗಳು ನಿರತರಾಗಿರುವುದರಿಂದ ತೆರವು ಕಾರ್ಯಾಚರಣೆ ವಿಳಂಬವಾಗುತ್ತಿದೆ ಎಂದು ತಿಳಿಸಿದ್ದರು.

ಇನ್ನು ಇದೇ ವೇಳೆ ದೇವಾಲಯ ತೆರವು ಮಾಡದಂತೆ ಭಕ್ತರು ಸಲ್ಲಿಸಿದ್ದ ಅರ್ಜಿಗೆ ಅಸಮಾಧಾನ ವ್ಯಕ್ತಪಡಿಸಿದ ಪೀಠ 25 ಸಾವಿರ ದಂಡ ವಿಧಿಸಿತ್ತು. ಭಕ್ತರು 1854 ರಲ್ಲಿ ದೇವಾಲಯ ನಿರ್ಮಿಸಲಾಗಿದೆ. ಹೀಗಾಗಿ ಅದನ್ನು ರಕ್ಷಿಸಬೇಕು ಎಂದು ಮನವಿ ಮಾಡಿದ್ದರು. ಆದರೆ ಭಕ್ತರು ಸಲ್ಲಿಸಿದ್ದ ಫೋಟೋಗಳು ದೇವಸ್ಥಾನವನ್ನು ಇತ್ತೀಚಿಗೆ ನಿರ್ಮಿಸಿದ್ದಕ್ಕೆ ಸಾಕ್ಷಿಯಾಗಿದ್ದವು. ಮುಖ್ಯವಾಗಿ ದೇವಸ್ಥಾನ ಸಾರ್ವಜನಿಕ ಪ್ರದೇಶದಲ್ಲಿ ಇದ್ದಿದ್ದರಿಂದ ಸುಪ್ರೀಂಕೋರ್ಟ್ ನಿರ್ದೇಶನದ ಪ್ರಕಾರ ತೆರವು ಮಾಡುವಂತೆ ಹೈಕೋರ್ಟ್ ಪಾಲಿಕೆಗೆ ಕಟ್ಟಪ್ಪಣೆ ಮಾಡಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.