ETV Bharat / state

ಭೂಸುಧಾರಣಾ ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಹೈಕೋರ್ಟ್​ಗೆ ಪಿಐಎಲ್ - Bangaluru latest news

ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ಸಾಮಾಜಿಕ ಕಾರ್ಯಕರ್ತ ನಾಗರಾಜ ಶೇಷಪ್ಪ ಹೊಂಗಲ್ ಎಂಬುವವರು ಭೂಸುಧಾರಣೆ ಅಧ್ಯಾದೇಶವನ್ನು ರದ್ದುಪಡಿಸಬೇಕು ಹಾಗೂ ಅರ್ಜಿ ಇತ್ಯರ್ಥ ಆಗುವವರೆಗೆ ಕಾಯ್ದೆಗೆ ತಡೆ ನೀಡಬೇಕು ಎಂದು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ಧಾರೆ.

PIL submission in High Court about land amendment act
ಹೈಕೋರ್ಟ್ (ಸಂಗ್ರಹ ಚಿತ್ರ)
author img

By

Published : Aug 19, 2020, 12:04 AM IST

ಬೆಂಗಳೂರು: ಬಹುಚರ್ಚಿತ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಬಾಗಲಕೋಟೆ ಜಿಲ್ಲೆಯ ಇಳಕಲ್ ಮೂಲದ ಸಾಮಾಜಿಕ ಕಾರ್ಯಕರ್ತ ನಾಗರಾಜ ಶೇಷಪ್ಪ ಹೊಂಗಲ್ ಎಂಬುವವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಕಂದಾಯ ಇಲಾಖೆ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯನ್ನು ಪ್ರತಿವಾದಿಯಾಗಿ ಮಾಡಲಾಗಿದೆ.

ಅರ್ಜಿದಾರರ ಮನವಿ :

ಭೂಮಿಯ ಒಡೆತನ, ಖರೀದಿ ಮತ್ತು ವರ್ಗಾವಣೆಗೆ ಸಂಬಂಧಿಸಿದಂತೆ ಕಾಯ್ದೆಯಲ್ಲಿದ್ದ ಮಿತಿ ಹಾಗೂ ನಿಬಂಧನೆಗಳನ್ನು ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಕಾನೂನು ಬಾಹಿರ. ಬ್ರಿಟಿಷ್ ಕಾಲದ ಜಮೀನ್ದಾರಿ ಪದ್ಧತಿಯನ್ನು ಹುಟ್ಟುಹಾಕಲು ಅನುಕೂಲವಾಗಿರುವ ಸರ್ಕಾರದ ಈ ಕ್ರಮ ಸಂವಿಧಾನದ ಮೂಲ ಆಶಯಗಳಿಗೆ ವಿರುದ್ಧವಾಗಿದೆ. ಹಾಗೆಯೇ, ಕೃಷಿ ಮತ್ತು ಪರಿಸರಕ್ಕೆ ಮಾರಕವಾಗಲಿದೆ ಎಂದು ದೂರಿರುವ ಅರ್ಜಿದಾರರು, ಅಧ್ಯಾದೇಶವನ್ನು ರದ್ದುಪಡಿಸಬೇಕು ಹಾಗೂ ಅರ್ಜಿ ಇತ್ಯರ್ಥ ಆಗುವವರೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.