ಬೆಂಗಳೂರು: ವಿಧಾನಸಭಾ ಕಾರ್ಯ ಕಲಾಪದ ವಿಡಿಯೋ ಚಿತ್ರೀಕರಣಕ್ಕೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಿರ್ಬಂಧ ಹೇರಿರುವುದನ್ನ ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಅಧಿವೇಶನದ ಕಲಾಪಕ್ಕೆ ವಿದ್ಯುನ್ಮಾನ ಮಾಧ್ಯಮ ಹಾಗೂ ಮುದ್ರಣ ಮಾಧ್ಯಮ ಛಾಯಾಗ್ರಾಹಕರಿಗೆ ನಿರ್ಬಂಧ ವಿಧಿಸಲಾಗಿದೆ. ಈ ಮೂಲಕ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲಾಗಿದೆ ಎಂದು ವಕೀಲ ರಮೇಶ್ ನಾಯಕ್ ಅರ್ಜಿ ಸಲ್ಲಿಸಿದ್ದು, ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಜನಸಾಮಾನ್ಯರ ಸಾಂವಿಧಾನಿಕ ಹಕ್ಕನ್ನು ಸ್ಪೀಕರ್ ಮೊಟಕುಗೊಳಿಸಿದ್ದಾರೆ. ಜನರಿಗೆ ಸೂಕ್ತ ಮಾಹಿತಿಯನ್ನು ಸ್ಪೀಕರ್ ಕಡೆಯಿಂದ ನೀಡಲು ಸಾಧ್ಯವಿಲ್ಲ. ಸ್ಪೀಕರ್ ಹೊರಡಿಸಿದ ಮಾಧ್ಯಮ ನಿರ್ಬಂಧ ಆದೇಶವನ್ನು ರದ್ದು ಮಾಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.