ETV Bharat / state

ಶಶಿಕಲಾ ಜೊಲ್ಲೆಗೆ ಜೀರೋ ಟ್ರಾಫಿಕ್ ಪ್ರಶ್ನಿಸಿ ಹೈಕೋರ್ಟ್​​​​ಗೆ PIL

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಶಿಕಲಾ ಜೊಲ್ಲೆ ಅವರಿಗೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಿಕೊಟ್ಟಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರಿದ್ದ ವಿಭಾಗೀಯ ಪೀಠದ ವಿಚಾರಣೆಗೆ ನಡೆಸಿದೆ.

ಶಶಿಕಲಾ ಜೊಲ್ಲೆಗೆ ಜೀರೋ ಟ್ರಾಫಿಕ್ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್

author img

By

Published : Aug 18, 2021, 9:36 PM IST

ಬೆಂಗಳೂರು: ಆಗಸ್ಟ್ 4ರಂದು ನಡೆದ ಸಚಿವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಶಿಕಲಾ ಜೊಲ್ಲೆ ಅವರಿಗೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ ಝಿರೋ ಟ್ರಾಫಿಕ್ ವ್ಯವಸ್ಥೆ ಮಾಡಿಕೊಟ್ಟಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಪಿಐಎಲ್ ಸಲ್ಲಿಸಲಾಗಿದೆ.

ಈ ಕುರಿತು ವಕೀಲ ಜಿ. ಬಾಲಾಜಿ ನಾಯ್ಡು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರಿದ್ದ ವಿಭಾಗೀಯ ಪೀಠದ ವಿಚಾರಣೆಗೆ ನಡೆಸಿತು. ಕೆಲ ಕಾಲ ವಾದ ಆಲಿಸಿದ ಪೀಠ, ಅರ್ಜಿಯಲ್ಲಿ ಪ್ರತಿವಾದಿ ಆಗಿರುವ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿತು. ಅಲ್ಲದೇ, ಸರ್ಕಾರ ಒಂದು ತಿಂಗಳಲ್ಲಿ ಸೂಕ್ತ ಕ್ರಮ ತೆಗೆದುಕೊಂಡು ನ್ಯಾಯಾಲಯಕ್ಕೆ ಮಾಹಿತಿ ಸಲ್ಲಿಸಬೇಕು ಎಂದು ನಿರ್ದೇಶಿಸಿತು.

ಇದೇ ವೇಳೆ ಝಿರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸಲು ನಿರ್ಧರಿಸಿದ್ದು ಯಾರು? ಅಂತಹ ತುರ್ತು ಶಾಸಕರಿಗೆ ಏನಿತ್ತು ಎಂದು ಪ್ರಶ್ನಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ. ಬಾಲಾಜಿ ನಾಯ್ಡು ವಾದಿಸಿ, ಕಾನೂನು ಮತ್ತು ಸಂವಿಧಾನದ ದೃಷ್ಟಿಯಲ್ಲಿ ಸಾಮಾನ್ಯ ಜನರಷ್ಟೇ ಶಾಸಕರು ಸಹ ಸಮಾನರು. ಆದರೆ, ಆ.4ರಂದು ಮಧ್ಯಾಹ್ನ 2-2.40ರ ನಡುವೆ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗಿನ 34 ಕಿ.ಮೀ ಅಂತರವನ್ನು ಶಾಸಕಿ ಶಶಿಕಲಾ ಜೊಲ್ಲೆ ಅವರಿಗೆ ಮುಕ್ತವಾಗಿಡಲಾಗಿತ್ತು. ಇದು ಸಂವಿಧಾನದ ಪರಿಚ್ಛೇದ 15ರ ಉಲ್ಲಂಘನೆ ಎಂದು ಆರೋಪಿಸಿದರು.

ಅರ್ಜಿದಾರರ ಕೋರಿಕೆ :

ಆಡಳಿತಾತ್ಮಕ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ತಪ್ಪಿತಸ್ಥ ಅಧಿಕಾರಿಗಳ ಮೇಲೆ ಹೊಣೆ ನಿಗದಿಪಡಿಸಿ ತನಿಖೆಗೆ ಆದೇಶಿಸಬೇಕು ಮತ್ತು ಅಗತ್ಯ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು. ಈ ಕುರಿತು ವರದಿ ನೀಡುವಂತೆ ಸರ್ಕಾರಕ್ಕೆ ನಿರ್ದೇಶಿಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.