ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಾನಕ್ಕೆ ನೂತನ ಅಧ್ಯಕ್ಷರ ನೇಮಕ ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಾನಕ್ಕೆ ಶಾಸಕ ಡಾ.ಕೆ.ಸುಧಾಕರ್ ಅವರು ತೆರವಾದ ನಂತ್ರ ನಿಯಂತ್ರಣ ಮಂಡಳಿಯ ಅಧ್ಯಕ್ಷ ರನ್ನಾಗಿ ಡಾ.ಸುಧೀಂದ್ರರಾವ್ ಅವರನ್ನ ರಾಜ್ಯ ಸರಕಾರ ನೇಮಕ ಮಾಡಿದ್ದು ,ಇದನ್ನ ಪ್ರಶ್ನಿಸಿ ಹೈಕೋರ್ಟ್‌ಗೆ ವಕೀಲ ಎಸ್.ಉಮಾಪತಿ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಸೆ.21 ರಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಾನಕ್ಕೆ ಶಾಸಕ ಡಾ.ಕೆ.ಸುಧಾಕರ್ ಅವರು ರಾಜೀನಾಮೆ ನೀಡಿದ್ದರು. ಇದರಿಂದಾಗಿ ನಾಲ್ಕು ತಿಂಗಳ ಕಾಲ ಪೂರ್ಣಾವಧಿ ಅಧ್ಯಕ್ಷರಿರಲಿಲ್ಲ.
ಕೋರ್ಟ್ ಆದೇಶ ಏನಿದೆ?
ಮಂಡಳಿಯ ಅಧ್ಯಕ್ಷರಾಗುವವರು ಪರಿಸರ ವಿಜ್ಞಾನ ಪದವಿ ಪಡೆದಿರಬೇಕು. ಅಲ್ಲದೇ ಪರಿಸರ ಸಂಬಂಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರಬೇಕು ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸ್ಥಾನದ ಅಧ್ಯಕ್ಷ ಶಾಸಕ ಡಾ.ಕೆ.ಸುಧಾಕರ್ ಇದ್ದಾಗ ರಾಜ್ಯ ಸರಕಾರಕ್ಕೆ ಕೋರ್ಟ್ ನಿರ್ದೇಶನ ನೀಡಿತ್ತು. ಆದರೆ ಇದನ್ನು ಗಾಳಿಗೆ ತೂರಿ, ಸಿವಿಲ್ ಎಂಜಿನಿಯರಿಂಗ್ ಪದವಿ ಪಡೆದಿರುವ ಡಾ.ಸುಧೀಂದ್ರರಾವ್ ಅವರನ್ನು ನೇಮಿಸಿದ್ದಾರೆ ಎಂದು ಅರ್ಜಿಯಲ್ಲಿ ನಮೂದಿಸಿದ್ದಾರೆ.