ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡ (ಎಸ್ಐಟಿ) ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.
ಈ ಕುರಿತು ನಗರದ ಸಾಮಾಜಿಕ ಕಾರ್ಯಕರ್ತೆ ಹಾಗೂ ವಕೀಲೆ ಗೀತಾ ಮಿಶ್ರಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ. ಅರ್ಜಿಯಲ್ಲಿ ರಾಜ್ಯ ಸರ್ಕಾರದ ಗೃಹ ಇಲಾಖೆ, ನಗರ ಪೊಲೀಸ್ ಆಯುಕ್ತ, ರಾಜ್ಯ ಪೊಲೀಸ್ ಮಹಾನಿರ್ದೇಶಕ, ಎಸ್ಐಟಿ, ಕಬ್ಬನ್ ಪಾರ್ಕ್ ಹಾಗೂ ಸದಾಶಿವನಗರ ಠಾಣೆ ಪೊಲೀಸರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ರಮೇಶ್ ಜಾರಕಿಹೊಳಿ ಹಿತಕ್ಕಾಗಿ ನಿಯಮಬಾಹಿರವಾಗಿ ಎಸ್ಐಟಿ ರಚಿಸಲಾಗಿದೆ. ಸರ್ಕಾರದ ಗೆಜೆಟ್ ಆದೇಶವಿಲ್ಲದೇ ನಗರ ಪೊಲೀಸ್ ಆಯುಕ್ತರು ಮಾರ್ಚ್ 13ರಂದು ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿ 6 ಮಂದಿ ಪೊಲೀಸ್ ಅಧಿಕಾರಿಗಳ ವಿಶೇಷ ತನಿಖಾ ತಂಡ ರಚಿಸಿದ್ದಾರೆ.
ಇದು ಅಪರಾಧ ಪ್ರಕ್ರಿಯಾ ಸಂಹಿತೆ -1973 ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆಯ ನಿಮಗಳಿಗೆ ವಿರುದ್ಧವಾಗಿದೆ. ಹೀಗಾಗಿ, ಎಸ್ಐಟಿ ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
ಇದನ್ನೂ ಓದಿ .. ಕೆಲವೇ ವಾರಗಳಲ್ಲಿ ಸ್ಪುಟ್ನಿಕ್ ವಿ ಲಸಿಕೆಗೆ ಭಾರತ ಅನುಮೋದನೆ: ಡಾ.ರೆಡ್ಡಿಸ್ ವಿಶ್ವಾಸ