ETV Bharat / state

ವಸತಿ ಶಾಲೆಗಳ ಅಭಿವೃದ್ಧಿಗಾಗಿ ₹1,365 ಕೋಟಿ ವೆಚ್ಚದ ಕ್ರಿಯಾಯೋಜನೆಗೆ ಅನುಮೋದನೆ.. - ವಸತಿ ಶಾಲೆಗಳ ಅಭಿವೃದ್ಧಿ

ವಸತಿ ಶಾಲೆಗಳ ಗುಣಾತ್ಮಕ ಶಿಕ್ಷಣ, ಉತ್ತಮ ನಿರ್ವಹಣೆ, ಕಟ್ಟಡಗಳ ನಿರ್ಮಾಣ ಸೇರಿದಂತೆ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 1,365 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ..

Meeting
Meeting
author img

By

Published : Jun 26, 2020, 8:21 PM IST

ಬೆಂಗಳೂರು : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯ ವಸತಿ ಶಾಲೆಗಳ ಗುಣಾತ್ಮಕ ಶಿಕ್ಷಣ, ಉತ್ತಮ ನಿರ್ವಹಣೆ, ಕಟ್ಟಡಗಳ ನಿರ್ಮಾಣ ಸೇರಿ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಪ್ರಸಕ್ತ ಸಾಲಿನಲ್ಲಿ 1,365 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

ವಿಕಾಸಸೌಧದಲ್ಲಿಂದು ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ 74ನೇ ಆಡಳಿತ ಮಂಡಳಿ ಸಭೆ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಡಿಸಿಎಂ ಗೋವಿಂದ ಕಾರಜೋಳ, ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ, ಶೈಕ್ಷಣಿಕ ಅಭಿವೃದ್ಧಿಗಾಗಿ ಶಿಕ್ಷಣ ತಜ್ಞರಾದ ಡಾ. ಗುರುರಾಜ ಕರ್ಜಗಿಯವರನ್ನು ಶೈಕ್ಷಣಿಕ ಸಲಹೆಗಾರರನ್ನಾಗಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಬೆಳ್ಳಿಶೆಟ್ಟಿ ಅವರನ್ನು ಸಮಾಲೋಚಕರನ್ನಾಗಿ ನೇಮಿಸಲು ತೀರ್ಮಾಸಿದರು.

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಮಳೂರು, ಬಾಗಲಕೋಟೆ ಜಿಲ್ಲೆಯ ಮುಧೋಳ್ ತಾಲೂಕಿನ ಬೆಳಗಲಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕುಂದಾಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಮಾಚಿಹಳ್ಳಿಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯನ್ನು ಕ್ರೀಡಾ ವಸತಿ ಶಾಲೆಯನ್ನಾಗಿ ಪರಿವರ್ತಿಸಲು ನಿರ್ಧರಿಸಲಾಯಿತು.

ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಪಠ್ಯಪುಸ್ತಕಗಳನ್ನು ಒದಗಿಸಲು ಅನುದಾನ ಬಿಡುಗಡೆಗೆ ಅನುಮೋದನೆ ನೀಡಲಾಯಿತು. 12 ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 6 ರಿಂದ 12ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದೆ. ಸಿಬಿಎಸ್‍ಸಿ ಪಠ್ಯಕ್ರಮವನ್ನು ಅಳವಡಿಸಿಕೊಳ್ಳಲು ಯೋಜಿಸಲಾಗುತ್ತಿದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.