ETV Bharat / state

ಆರೋಗ್ಯದಲ್ಲಿ ಚೇತರಿಕೆ ಕಾಣದ ಶಾಸಕ ನಾರಾಯಣರಾವ್​ಗೆ ಪ್ಲಾಸ್ಮಾ ಚಿಕಿತ್ಸೆ: ಸ್ಥಿತಿ ಚಿಂತಾಜನಕ

ಕೊರೊನಾ ಸೋಂಕಿನಿಂದ ಬಳಲುತ್ತಿರುವ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು,ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂದಿನ 48 ಗಂಟೆ ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್
ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್
author img

By

Published : Sep 3, 2020, 7:46 PM IST

Updated : Sep 3, 2020, 8:31 PM IST

ಬೆಂಗಳೂರು: ಕೊರೊನಾದಿಂದ ಬಳಲುತ್ತಿರುವ ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು, ಇಂದು ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದೆ.

ದಿನಗಳ ಹಿಂದೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್, ಆರೋಗ್ಯ ಆರಂಭದಿಂದಲೂ ಹದಗೆಡುತ್ತಲೇ ಸಾಗಿದೆ. ನಿನ್ನೆ ಮಧ್ಯಾಹ್ನದವರೆಗೂ ತಕ್ಕಮಟ್ಟಿಗೆ ಆರೋಗ್ಯವಂತರಾಗಿದ್ದ ಅವರಿಗೆ ಸಂಜೆ 6.30 ರ ಹೊತ್ತಿಗೆ ಏಕಾಏಕಿ ಆರೋಗ್ಯ ಹದಗೆಟ್ಟಿದೆ. ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆ ಹೊಂದಿರುವ ನಾರಾಯಣರಾವ್​​ರನ್ನು ತಕ್ಷಣ ವೆಂಟಿಲೇಟರ್​ಗೆ ಸ್ಥಳಾಂತರಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಅವರ ಆರೋಗ್ಯ ಸ್ಥಿತಿ ಹದಗೆಡುತ್ತಿದೆ. ಮುಂದಿನ 48 ಗಂಟೆ ಯಾವುದೇ ಭರವಸೆ ನೀಡಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಆಪ್ತರಾಗಿದ್ದ ಶಾಸಕ ನಾರಾಯಣ ರಾವ್

ಸಿದ್ದರಾಮಯ್ಯ ಆಪ್ತ:

ಬಸವಕಲ್ಯಾಣ ಕ್ಷೇತ್ರದಿಂದ ಮಲ್ಲಿಕಾರ್ಜುನ ಸಿದ್ದರಾಮಪ್ಪ ಖೂಬ ವಿರುದ್ಧ ಭಾರಿ ಅಂತರದಿಂದ ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ ನಾರಾಯಣರಾವ್ ಅವರು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು. ಹೈದರಾಬಾದ್ ಕರ್ನಾಟಕ ಭಾಗದ ಅದರಲ್ಲಿಯೂ ಬೀದರ್ ಜಿಲ್ಲೆಯ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು, 40 ವರ್ಷಗಳಿಂದ ಪಕ್ಷ ಕಟ್ಟುವ ಕಾರ್ಯದಲ್ಲಿ ತೊಡಗಿದ್ದಾರೆ. ಜನರ ಅಹವಾಲು ಆಲಿಸುವ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಸಂದರ್ಭವೇ ಇವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಆರಂಭದ ಕೆಲ ದಿನ ಇವರು ಆರೋಗ್ಯ ಕೆಟ್ಟಿರುವ ಬಗ್ಗೆ ವಿಶೇಷ ಗಮನ ಹರಿಸದೇ ಇರುವುದು ಸಮಸ್ಯೆ ಉಲ್ಬಣಗೊಳ್ಳಲು ಕಾರಣವಾಗಿದೆ. ಸಿದ್ದರಾಮಯ್ಯ ಆಪ್ತರಾಗಿರುವ ಇವರು ಅವರ ಸಲಹೆ ಮೇರೆಗೆ ಕೂಡಲೇ ಬಸವಕಲ್ಯಾಣದಿಂದ ಬೆಂಗಳೂರಿಗೆ ಆಗಮಿಸಿ ಇಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿರುವ ಸಿದ್ದರಾಮಯ್ಯ ಸೂಕ್ತ ಚಿಕಿತ್ಸೆಯನ್ನು ನೀಡುವಂತೆ ಸೂಚಿಸಿದ್ದಾರೆ.

ಈಶ್ವರ್ ಖಂಡ್ರೆ ವಿಶೇಷ ನಿಗಾ:

ತಮ್ಮ ಜಿಲ್ಲೆಯ ಹಿರಿಯ ಕಾಂಗ್ರೆಸ್ಸಿಗ ನಾರಾಯಣರಾವ್ ಆರೋಗ್ಯದ ವಿಚಾರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿಶೇಷ ನಿಗಾ ವಹಿಸಿದ್ದಾರೆ. ನಾರಾಯಣರಾವ್ ಆಸ್ಪತ್ರೆಗೆ ದಾಖಲಾದ ಸಂದರ್ಭದಿಂದಲೂ ನಿರಂತರವಾಗಿ ಮಣಿಪಾಲ ಆಸ್ಪತ್ರೆ ವೈದ್ಯರ ಸಂಪರ್ಕದಲ್ಲಿರುವ ಅವರು ಉತ್ತಮ ಚಿಕಿತ್ಸೆ ದೊರಕಿಸುವಲ್ಲಿ ಪ್ರಭಾವ ಬೀರಿದ್ದಾರೆ. ನಿನ್ನೆ ಸಹ ದೂರವಾಣಿ ಮೂಲಕ ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದ ಖಂಡ್ರೆ, ಕೂಡಲೇ ಶಾಸಕರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆ 11 ಗಂಟೆಗೆ ನಾರಾಯಣರಾವ್​ಗೆ ಪ್ಲಾಸ್ಮಾ ಚಿಕಿತ್ಸೆ ನೀಡಲಾಗಿದೆ. ಆಸ್ಪತ್ರೆಯ ಹಿರಿಯ ವೈದ್ಯ ಡಾ. ವೆಂಕಟೇಶ್ ಗುಪ್ತ ಅವರು ವಿಶೇಷ ಗಮನ ಹರಿಸುತ್ತಿದ್ದು, ಶಾಸಕರ ಆರೋಗ್ಯದ ಪ್ರತಿಕ್ಷಣದ ಮಾಹಿತಿಯನ್ನು ರಾಜ್ಯ ಕಾಂಗ್ರೆಸ್ ನಾಯಕರಿಗೆ ನೀಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅತ್ಯಂತ ಪ್ರಭಾವಿ ಕಾಂಗ್ರೆಸ್ ನಾಯಕರು ಎನಿಸಿಕೊಂಡಿರುವ ನಾರಾಯಣರಾವ್ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಮಾತ್ರವಲ್ಲ ಸಾರ್ವಜನಿಕರು ಕೂಡ ನಾರಾಯಣರಾವ್ ಆರೋಗ್ಯ ಚೇತರಿಕೆಗೆ ಹಾರೈಸುತ್ತಿದ್ದಾರೆ.

Last Updated : Sep 3, 2020, 8:31 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.